AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಮಂತ ದೇಶಗಳಿಗೆ ಎಐ ಕುತ್ತು; ಶೇ. 60 ಉದ್ಯೋಗನಷ್ಟ ಸಾಧ್ಯತೆ: ಐಎಂಎಫ್ ಎಚ್ಚರಿಕೆ

IMF managing director Kristalina Georgieva warns of AI tsunami in job market: ಉದ್ಯೋಗ ಮಾರುಕಟ್ಟೆಗೆ ಎಐ ಸುನಾಯಿಯಂತೆ ಅಪ್ಪಳಿಸುತ್ತದೆ ಎಂದು ಐಎಂಎಫ್ ಎಂಡಿ ಕ್ರಿಸ್ಟಾಲಿನಾ ಜಾರ್ಜಿಯೆವಾ ಎಚ್ಚರಿಸಿದ್ದಾರೆ. ಎಐನಿಂದ ಶೇ. 40 ಮಂದಿ ಕೆಲಸ ಕಳೆದುಕೊಳ್ಳುತ್ತಾರೆ. ಮುಂದುವರಿದ ದೇಶಗಳಲ್ಲಿ ಶೇ. 60 ಮಂದಿಯ ಉದ್ಯೋಗಕ್ಕೆ ಕುತ್ತು ಬರಲಿದೆಯಂತೆ. ಎಐನಿಂದ ವಿಶ್ವದ ಆರ್ಥಿಕತೆ ಶೇ. 0.8ರಷ್ಟು ಹೆಚ್ಚಬಹುದು ಎಂದೂ ಜಾರ್ಜಿಯೆವಾ ಅಭಿಪ್ರಾಯಪಟ್ಟಿದ್ದಾರೆ.

ಶ್ರೀಮಂತ ದೇಶಗಳಿಗೆ ಎಐ ಕುತ್ತು; ಶೇ. 60 ಉದ್ಯೋಗನಷ್ಟ ಸಾಧ್ಯತೆ: ಐಎಂಎಫ್ ಎಚ್ಚರಿಕೆ
ಕ್ರಿಸ್ಟಲಿನಾ ಜಾರ್ಜಿಯೆವಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 20, 2026 | 6:42 PM

Share

ನವದೆಹಲಿ, ಫೆಬ್ರುವರಿ 20: ಎಐನಿಂದ ಒಳಿತೂ ಇದೆ, ಕೆಡಕೂ ಇದೆ. ದೂರಗಾಮಿಯಾಗಿ ಎಐನಿಂದ ಮನುಕುಲಕ್ಕೆ ಸಾಕಷ್ಟು ಪ್ರಯೋಜನಗಳಾಗಬಹುದು ಎಂದು ಅನೇಕರು ಹೇಳುತ್ತಿದ್ದಾರೆ. ಐಎಂಎಫ್​ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಕ್ರಿಸ್ಟಾಲಿನಾ ಜಾರ್ಜಿಯೆವಾ (Kristalina Georgieva) ಅವರು ಎಐನಿಂದ ಸದ್ಯೋಭವಿಷ್ಯದಲ್ಲಿ ಆಗಬಹುದಾದ ಒಳಿತು ಮತ್ತು ಅಪಾಯಗಳೆರಡನ್ನೂ ಪ್ರಸ್ತಾಪಿಸಿದ್ದಾರೆ.

ಉದ್ಯೋಗ ಮಾರುಕಟ್ಟೆಯಲ್ಲಿ ಎಐ ಸುನಾಮಿಯಂತೆ ಅಪ್ಪಳಿಸಲಿದೆ ಎಂದು ಜಾರ್ಜಿಯೆವಾ ಎಚ್ಚರಿಸಿದ್ದಾರೆ. ಉದಯೋನ್ಮುಖ ಆರ್ಥಿಕತೆಯ ದೇಶಗಳಲ್ಲಿ ಶೇ. 40ರಷ್ಟು ಉದ್ಯೋಗಗಳು ಎಐನಿಂದಾಗಿ ಇಲ್ಲವಾಗುತ್ತವೆ. ಶ್ರೀಮಂತ ದೇಶಗಳಲ್ಲಂತೂ ಇದರ ಪರಿಣಾಮ ಇನ್ನೂ ಭಿಕರವಾಗಿರುತ್ತದೆ. ಅಲ್ಲಿ ಶೇ 60ರಷ್ಟು ಉದ್ಯೋಗನಷ್ಟ ಆಗಬಹುದು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಹಿರಿಯ ಅಧಿಕಾರಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಎಐ, ಡೀಪ್​ಟೆಕ್ ಸ್ಟಾರ್ಟಪ್​ಗಳ ಸಿಇಒಗಳೊಂದಿಗೆ ಪ್ರಧಾನಿ ಮೋದಿ ಸಭೆ; ಓಪನ್​ಎಐ, ಆಂಥ್ರೋಪಿ ಸಿಇಒಗಳ ವೈಮನಸ್ಸು ಬಹಿರಂಗ?

ಜಗತ್ತಿಗೆ ಎಐನಿಂದ ಚುರುಕು ಬೆಳವಣಿಗೆ

ಎಐನಿಂದ ಜಾಗತಿಕ ಆರ್ಥಿಕ ಬೆಳವಣಿಗೆಗೆ ಪುಷ್ಟಿ ಸಿಗುತ್ತದೆ ಎಂದೂ ಐಎಂಎಫ್​ನ ಎಂಡಿ ತಿಳಿಸಿದ್ದಾರೆ. ‘ನಾವು ಕೆಲ ಸಂಶೋಧನೆ ಮೂಕ ಉತ್ತರ ಕಂಡುಕೊಂಡಿದ್ದೇವೆ. ನಮಗೆ ಗೊತ್ತಾದಂತೆ, ಎಐನಿಂದ ಜಾಗತಿಕ ಬೆಳವಣಿಗೆಯಲ್ಲಿ ಒಂದು ಪ್ರತಿಶತ ಅಂಕ ಹೆಚ್ಚಬಹುದು. ಶೇ 0.8ರಷ್ಟು ಪ್ರಗತಿ ಹೆಚ್ಚಬಹುದು. ಕೋವಿಡ್​ಗೆ ಮುಂಚಿನದಕ್ಕಿಂತ ಹೆಚ್ಚು ವೇಗವಾಗಿ ಜಗತ್ತು ಬೆಳೆಯಬಹುದು’ ಎಂದು ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ನಡೆದ ಪ್ಯಾನಲ್ ಚರ್ಚೆಯ ವೇಳೆ ಆಕೆ ಮಾಹಿತಿ ನೀಡಿದ್ದಾರೆ.

ಭಾರತಕ್ಕೆ ವಿಕಸಿತ ದೇಶವಾಗಲು ಅವಕಾಶ

ಎಐನಿಂದಾಗಿ ಭಾರತವು ಹೆಚ್ಚು ವೇಗದಲ್ಲಿ ಬೆಳವಣಿಗೆ ದಾಖಲಿಸಲು ಅವಕಾಶ ಇರುತ್ತದೆ. ಭಾರತದ ವಿಕಸಿತ ಭಾರತದ ಗುರಿ ಈಡೇರಿಕೆ ಅಸಾಧ್ಯವೇನೂ ಆಗುವುದಿಲ್ಲ ಎಂದು ಕ್ರಿಸ್ಟಾಲಿನಾ ಜಾರ್ಜಿಯೆವಾ ಅಭಿಪ್ರಾಯಪಟ್ಟಿದ್ಧಾರೆ. ಭಾರತವು 2047ರೊಳಗೆ ವಿಕಸಿತ ದೇಶವಾಗುವ ಮತ್ತು 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿ ಹೊಂದಲಾಗಿದೆ. ಈ ಸಾಧ್ಯತೆ ಬಗ್ಗೆ ಐಎಂಎಫ್ ಎಂಡಿ ಮಾತನಾಡುತ್ತಿದ್ದರು.

ಇದನ್ನೂ ಓದಿ: ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಏಪ್ರಿಲ್​ನಿಂದ ಚಾಲನೆ ಸಾಧ್ಯತೆ; ಓಮನ್, ಬ್ರಿಟನ್ ಒಪ್ಪಂದಗಳೂ ಏಪ್ರಿಲ್​ನಲ್ಲೇ?

ಐಟಿ ಸೆಕ್ಟರ್​ನಲ್ಲಿ ಕೋಡಿಂಗ್ ಬದಲು ಈ ಕೆಲಸ ಮಾಡಬೇಕು: ನಂದನ್ ನಿಲೇಕಣಿ

ಎಐ ಕ್ರಾಂತಿ ನಡೆಯುತ್ತಿರುವಾಗ ಕೋಡಿಂಗ್ ರಚಿಸುವುದು ಗುರಿಯಾಗಿರಬಾರದು. ಕೋಡಿಂಗ್ ಬದಲು, ಎಐ ಸಿಸ್ಟಂಗಳನ್ನು ನಿರ್ವಹಿಸುವ ಕೆಲಸಗಳಿಗೆ ವರ್ಗಾವಣೆ ಆಗಬೇಕು ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಮೊನ್ನೆಮೊನ್ನೆ (ಫೆ. 17) ಹೇಳಿದ್ದಾರೆ. ಅವರ ಪ್ರಕಾರ ಎಐ ತಂತ್ರಜ್ಞಾನವು ಜಾಗತಿಕವಾಗಿ 17 ಕೋಟಿ ಹೊಸ ಪ್ರಬಲ ಉದ್ಯೋಗಗಳನ್ನು ಸೃಷ್ಟಿಸಬಲ್ಲುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು