AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟಾ, ಮೈಕ್ರೋಸಾಫ್ಟ್​ನಲ್ಲಿ ಎಐ ಸಂಚಲನ; 23,000 ಉದ್ಯೋಗಗಳಿಗೆ ಕುತ್ತು

Meta to go for job cuts, Microsoft goes for voluntary buyout: ವಿಶ್ವದ ಎರಡು ಪ್ರಮುಖ ತಂತ್ರಜ್ಞಾನ ಕಂಪನಿಗಳು ಉದ್ಯೋಗಕಡಿತದ ಕೆಲಸಗಳಿಗೆ ಕೈಹಾಕಿವೆ. ಮೆಟಾ ಮತ್ತು ಮೈಕ್ರೋಸಾಫ್ಟ್​ನ ಈ ಕ್ರಮದಿಂದ 23,000 ಉದ್ಯೋಗಗಳ ಮೇಲೆ ಪರಿಣಾಮವಾಗಲಿದೆ. ಮೆಟಾ 8,000 ಉದ್ಯೋಗಿಗಳನ್ನು ಲೇ ಆಫ್ ಮಾಡಲಿದೆ. ಭರ್ತಿಯಾಗಬೇಕಿದ್ದ 6,000 ಉದ್ಯೋಗಗಳಿಗೆ ನೇಮಕಾತಿ ಮಾಡದಿರಲು ನಿರ್ಧರಿಸಿದೆ.

ಮೆಟಾ, ಮೈಕ್ರೋಸಾಫ್ಟ್​ನಲ್ಲಿ ಎಐ ಸಂಚಲನ; 23,000 ಉದ್ಯೋಗಗಳಿಗೆ ಕುತ್ತು
ಮೈಕ್ರೋಸಾಫ್ಟ್Image Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 24, 2026 | 5:16 PM

Share

ನವದೆಹಲಿ, ಏಪ್ರಿಲ್ 24: ಟೆಕ್ ದೈತ್ಯ ಸಂಸ್ಥೆಗಳಾದ ಮೆಟಾ (ಫೇಸ್‌ಬುಕ್‌ನ ಮಾತೃಸಂಸ್ಥೆ) ಮತ್ತು ಮೈಕ್ರೋಸಾಫ್ಟ್ ಜಾಗತಿಕವಾಗಿ ಸುಮಾರು 23,000 ಉದ್ಯೋಗಗಳ ಮೇಲೆ ಪರಿಣಾಮ ಬೀರಬಲ್ಲ ಬೃಹತ್ ಉದ್ಯೋಗ ಕಡಿತ ಮತ್ತು ಬೈಔಟ್ (Buyout) ಯೋಜನೆಗಳನ್ನು ಪ್ರಕಟಿಸಿವೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲು ಮತ್ತು ವೆಚ್ಚ ಕಡಿತಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಮೆಟಾ ತನ್ನ ಒಟ್ಟು ಉದ್ಯೋಗಿಬಳಗದ ಶೇಕಡಾ 10 ರಷ್ಟು, ಅಂದರೆ ಸುಮಾರು 8,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಮೇ 20 ರಿಂದ ಈ ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಉದ್ಯೋಗಿಗಳೆಲ್ಲರಿಗೂ ಮೆಮೋ ಮೂಲಕ ಈ ಅಲರ್ಟ್ ಮೆಸೇಜ್ ರವಾನಿಸಲಾಗಿದೆ.

ಎಂಟು ಸಾವಿರ ಉದ್ಯೋಗಗಳಿಗೆ ಕತ್ತರಿ ಹಾಕುವುದರ ಜೊತೆಗೆ ಈಗಾಗಲೇ ಖಾಲಿ ಇರುವ ಸುಮಾರು 6,000 ಹುದ್ದೆಗಳನ್ನು ಭರ್ತಿ ಮಾಡದಿರಲು ಕಂಪನಿ ನಿರ್ಧರಿಸಿದೆ.

ಮೆಟಾದ ಈ ನಡೆಗೆ ಕಾರಣವೇನು?

ಫೇಸ್​ಬುಕ್, ವಾಟ್ಸಾಪ್, ಇನ್ಸ್​ಟಾಗ್ರಾಮ್ ಆ್ಯಪ್​ಗಳ ಮಾಲೀಕಸಂಸ್ಥೆ ಮೆಟಾ ತನ್ನ ಎಐ (AI) ಇನ್​ಫ್ರಾಸ್ಟ್ರಕ್ಚರ್​ಗಾಗಿ ಸುಮಾರು 135 ಬಿಲಿಯನ್ ಡಾಲರ್ ಹೂಡಿಕೆ ಮಾಡುತ್ತಿದ್ದು, ಈ ಭಾರಿ ವೆಚ್ಚವನ್ನು ಸರಿದೂಗಿಸಲು ಮತ್ತು ಕಂಪನಿಯನ್ನು ಹೆಚ್ಚು ದಕ್ಷತೆಯಿಂದ ನಡೆಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಇನ್ಫೋಸಿಸ್ ಉದ್ಯೋಗಿಗಳ ಸ್ಯಾಲರಿ ಹೈಕ್​ಗೆ ತಡೆ; ಸಿಇಒಗೆ 52 ಕೋಟಿ ರೂ ಮೌಲ್ಯದ ಸ್ಟಾಕ್ ಭತ್ಯೆ

ಮೈಕ್ರೋಸಾಫ್ಟ್ ಸ್ವಯಂ ನಿವೃತ್ತಿ ಸ್ಕೀಮ್

ಮತ್ತೊಂದು ಟೆಕ್ನಾಲಜಿ ದೈತ್ಯ ಕಂಪನಿಯಾದ ಮೈಕ್ರೋಸಾಫ್ಟ್ ತನ್ನ ಅಮೆರಿಕದ ಉದ್ಯೋಗಿಗಳಿಗೆ ‘ಸ್ವಯಂಪ್ರೇರಿತ ನಿರ್ಗಮನ’ (Voluntary Buyouts) ಆಫರ್ ನೀಡಿದೆ. ಅಂದರೆ, ಉದ್ಯೋಗಿಗಳು ತಾವಾಗಿಯೇ ಕೆಲಸ ಬಿಟ್ಟರೆ ಅವರಿಗೆ ಕಂಪನಿಯಿಂದ ಆಕರ್ಷಕ ಪರಿಹಾರ ಧನ ಸಿಗಲಿದೆ.

ಸುಮಾರು 8,750 ಉದ್ಯೋಗಿಗಳು (ಅಮೆರಿಕದ ಕಾರ್ಯಪಡೆಯ ಶೇ. 7 ರಷ್ಟು) ಈ ಯೋಜನೆಗೆ ಅರ್ಹರಾಗಿದ್ದಾರೆ. ವಯಸ್ಸು ಮತ್ತು ಸೇವಾವಧಿಯ ಮೊತ್ತ 70 ಅಥವಾ ಅದಕ್ಕಿಂತ ಹೆಚ್ಚಿರುವ ಉದ್ಯೋಗಿಗಳಿಗೆ ಈ ಆಫರ್ ನೀಡಲಾಗಿದೆ. ಉದಾಹರಣೆಗೆ, ವಯಸ್ಸು 50 ವರ್ಷ, ಸೇವಾವಧಿ 20 ವರ್ಷ ಸೇರಿ ಒಟ್ಟು 70 ಇದ್ದವರು ಈ ವಾಲಂಟರಿ ಬಯೌಟ್​ನ ಆಫರ್ ಪಡೆಯುತ್ತಾರೆ.

AI ಹೂಡಿಕೆಯ ಪ್ರಭಾವ

ಎರಡೂ ಕಂಪನಿಗಳು ಎಐ ತಂತ್ರಜ್ಞಾನದ ಓಟದಲ್ಲಿ ಮುಂಚೂಣಿಯಲ್ಲಿರಲು ಶತಕೋಟಿ ಡಾಲರ್‌ಗಳನ್ನು ಹೂಡಿಕೆ ಮಾಡುತ್ತಿವೆ. ಮನುಷ್ಯರು ಮಾಡುವ ಕೆಲಸಗಳನ್ನು ಎಐ ಮೂಲಕ ಮಾಡಿಸುವ ಅಥವಾ ಕೆಲಸದ ಪ್ರಕ್ರಿಯೆಯನ್ನು ಆಟೋಮೇಷನ್ ಮಾಡುವ ಗುರಿಯನ್ನು ಈ ಕಂಪನಿಗಳು ಹೊಂದಿವೆ.

ವಿಶೇಷವಾಗಿ ಮ್ಯಾನೇಜ್‌ಮೆಂಟ್, ಸೇಲ್ಸ್ ಮತ್ತು ನೇಮಕಾತಿ ವಿಭಾಗದ ಉದ್ಯೋಗಿಗಳ ಮೇಲೆ ಈ ಜಾಬ್ ಕಟ್ ಪರಿಣಾಮ ಹೆಚ್ಚಾಗಿರಲಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಭಾರತದ ಆರ್ಥಿಕ ಪ್ರಗತಿಗೆ ತೊಡಕಾಗಿರುವ ಅಂಶಗಳೇನು? ಬರ್ನ್​ಸ್ಟೈನ್ ಸಲಹೆ ನೀಡಿರುವ ಪರಿಹಾರಗಳೇನು?

ಒಟ್ಟಾರೆಯಾಗಿ, ಎಐ ತಂತ್ರಜ್ಞಾನದ ಅಬ್ಬರದಿಂದಾಗಿ ಐಟಿ ಕ್ಷೇತ್ರದಲ್ಲಿ ಹಳೆಯ ಮಾದರಿಯ ಉದ್ಯೋಗಗಳು ಕಣ್ಮರೆಯಾಗುತ್ತಿದ್ದು, ಕಂಪನಿಗಳು ಹೆಚ್ಚು ‘ಲೀನ್’ (Lean) ಆಗಲು ಪ್ರಯತ್ನಿಸುತ್ತಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ