AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಬಿಲ್ ಗೇಟ್ಸ್; ವಕ್ತಾರರಿಂದ ಸ್ಪಷ್ಟನೆ

AI Impact Summit, Bill Gates to participate: ಫೆಬ್ರುವರಿ 16ರಿಂದ 20ರವರೆಗೆ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. ಸಮಿಟ್​ನ ‘ಜಾಗತಿಕ ದ್ರಷ್ಟಾರರ’ ಪಟ್ಟಿಯಿಂದ ಅವರ ಹೆಸರನ್ನು ಕೈಬಿಡಲಾಗಿದೆ. ಅವರು ಪಾಲ್ಗೊಳ್ಳುವುದಿಲ್ಲ ಎನ್ನುವಂತಹ ಸುದ್ದಿ ಇತ್ತು. ಆದರೆ, ಬಿಲ್ ಗೇಟ್ಸ್ ಅವರ ವಕ್ತಾರರು ಸ್ಪಷ್ಟನೆ ಕೊಟ್ಟಿದ್ದು, ಸಮಿಟ್​ನಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಬಿಲ್ ಗೇಟ್ಸ್; ವಕ್ತಾರರಿಂದ ಸ್ಪಷ್ಟನೆ
ಬಿಲ್ ಗೇಟ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 17, 2026 | 2:13 PM

Share

ನವದೆಹಲಿ, ಫೆಬ್ರುವರಿ 17: ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಎಐ ಸಮಿಟ್​ನಲ್ಲಿ (AI Impact Summit 2026) ಬಿಲ್ ಗೇಟ್ಸ್ ಪಾಲ್ಗೊಳ್ಳುತ್ತಿದ್ದಾರೆ ಎಂದು ಅವರ ವಕ್ತಾರರು ಸ್ಪಷ್ಟನೆ ಕೊಟ್ಟಿದ್ದಾರೆ. ವಿಶ್ವದ ಶ್ರೀಮಂತರಲ್ಲಿ ಒಬ್ಬರಾಗಿರುವ, ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕರಾಗಿರುವ ಬಿಲ್ ಗೇಟ್ಸ್ (Bill Gates) ಅವರ ಹೆಸರನ್ನು ಈ ಸಮಾವೇಶದ ‘ಜಾಗತಿಕ ದ್ರಷ್ಟಾರರು’ (ಗ್ಲೋಬಲ್ ವಿಶನರೀಸ್) ಪಟ್ಟಿಯಿಂದ ಕೈಬಿಡಲಾಗಿದೆ. ಕಾರಣಾಂತರಗಳಿಂದ ಬಿಲ್ ಗೇಟ್ಸ್ ಅವರು ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಹಲವು ಮಾಧ್ಯಮ ವರದಿಗಳಲ್ಲಿ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಕ್ತಾರರಿಂದ ಸ್ಪಷ್ಟನೆ ಸಿಕ್ಕಿದ್ದು, ಮೈಕ್ರೋಸಾಫ್ಟ್ ಸಂಸ್ಥಾಪಕರು ಈ ವರ್ಷದ ಎಐ ಸಮಿಟ್​ನಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಕೆಲ ಮೂಲಗಳ ಪ್ರಕಾರ, ಎಪ್​ಸ್ಟೀನ್ ಫೈಲ್ಸ್​ನಲ್ಲಿ (Jeffrey Epstein files) ಬಿಲ್ ಗೇಟ್ಸ್ ಅವರ ಹೆಸರಿರುವ ಹಿನ್ನೆಲೆಯಲ್ಲಿ ಎಐ ಸಮಿಟ್​ನಲ್ಲಿ ಅವರು ಪಾಲ್ಗೊಳ್ಳುತ್ತಿಲ್ಲ. ನೈತಿಕ ಕಾರಣಕ್ಕೆ ಬಿಲ್ ಗೇಟ್ಸ್ ಅವರೇ ಸ್ವತಹವಾಗಿ ಶೃಂಗಸಭೆಯಲ್ಲಿ ಭಾಗಿಯಾಗದಿರಲು ನಿರ್ಧರಿಸಿದ್ಧಾರೆ ಎಂದೂ ಹೇಳಲಾಗಿತ್ತು.

ಇದನ್ನೂ ಓದಿ: ಎಐ ಇಂಪ್ಯಾಕ್ಟ್ ಶೃಂಗಸಭೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಜೆಫ್ರೀ ಎಪ್​ಸ್ಟೀನ್ ಫೈಲ್​ಗಳಲ್ಲಿ ವಿಶ್ವದ ಹಲವು ನಾಯಕರು, ಉದ್ಯಮಿಗಳು, ಸೆಲಬ್ರಿಟಿಗಳ ಹೆಸರು ಕಂಡು ಬಂದಿವೆ. ಬಿಲ್ ಗೇಟ್ಸ್​ಗೆ ವಿವಾಹಬಾಹಿರ ಅನೈತಿಕ ಸಂಬಂಧ ಇತ್ತು. ರಷ್ಯನ ಹುಡುಗಿಯರ ಜೊತೆ ಲೈಂಗಿಕ ಸಂಬಂಧ ಇತ್ತು ಎಂಬಿತ್ಯಾದಿ ವಿಚಾರಗಳನ್ನು ಜೆಫ್ರೀ ಎಪ್​ಸ್ಟೀನನೇ ಹೇಳಿಕೊಂಡಿದ್ದು ಈ ಫೈಲ್​ಗಳಲ್ಲಿ ಇದೆ. ಈ ಬಗ್ಗೆ ಬಿಲ್ ಗೇಟ್ಸ್ ಪ್ರತಿಕ್ರಿಯೆ ಕೂಡ ಕೊಟ್ಟಿದ್ದಾರೆ.

‘ಆತನೊಂದಿಗೆ ಕಳೆದ ಪ್ರತೀ ನಿಮಿಷಕ್ಕೂ ವ್ಯಥೆ ಪಡುತ್ತೇನೆ. ಕ್ಷಮೆ ಕೇಳುತ್ತೇನೆ’ ಎಂದು ಬಿಲ್ ಗೇಟ್ಸ್ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಬಿಲ್ ಗೇಟ್ಸ್ ಅವರು ಪತ್ನಿ ಮೆಲಿಂದಾ ಗೇಟ್ಸ್ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಬಿಲ್ ಗೇಟ್ಸ್ ಹೊಂದಿದ್ದ ಅನೈತಿಕ ಸಂಬಂಧಗಳೇ ಈ ವಿಚ್ಛೇದನಕ್ಕೆ ಕಾರಣ ಎನ್ನಲಾಗುತ್ತಿದೆ.

ಇದನ್ನೂ ಓದಿ: AI Impact Summit: ಜನಕಲ್ಯಾಣಕ್ಕೆ ಎಐ ಬಳಕೆ, ಇದು ಭಾರತಕ್ಕಿರುವ ಬದ್ಧತೆ: ಅಶ್ವಿನಿ ವೈಷ್ಣವ್

ಯಾರಿದು ಜೆಫ್ರೀ ಎಪ್​ಸ್ಟೀನ್?

ಜೆಫ್ರೀ ಎಪ್​ಸ್ಟೀನ್ ಅಮೆರಿಕದ ಶ್ರೀಮಂತ. ಅಪ್ರಾಪ್ತ ಮಹಿಳೆಯರ ವಿರುದ್ಧ ಲೈಂಗಿಕ ಶೋಷಣೆ ಎಸಗುತ್ತಿದ್ದ ಗುರುತರ ಆರೋಪ ಈತನ ಮೇಲಿತ್ತು. 2017ರಲ್ಲಿ ಈತನನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. 2019ರಲ್ಲಿ ನ್ಯೂಯಾರ್ಕ್ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:03 pm, Tue, 17 February 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ