Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮುಖ ವೈಮಾನಿಕ ಕೇಂದ್ರವಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಲು ಏರ್ ಇಂಡಿಯಾ-ಬಿಐಎಎಲ್ ಒಪ್ಪಂದ

Air India and BIAL Sign MoU: ಟಾಟಾ ಗ್ರೂಪ್​ಗೆ ಸೇರಿದ ಏರ್ ಇಂಡಿಯಾ ಸಂಸ್ಥೆ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಟ್ ಜೊತೆ ಎಂಒಯು ಒಪ್ಪಂದ ಮಾಡಿಕೊಂಡಿದೆ. ಬೆಂಗಳೂರನ್ನು ದಕ್ಷಿಣ ಭಾರತದ ಏವಿಯೇಶನ್ ಹಬ್ ಆಗಿ ಅಭಿವೃದ್ಧಿಪಡಿಸಲು ಈ ಒಪ್ಪಂದವಾಗಿದೆ. ಅದರಂತೆ ಮುಂದಿನ ಐದು ವರ್ಷಗಳಲ್ಲಿ ಅಂತಾರಾಷ್ಟ್ರೀಯ ಸಂಪರ್ಕ, ಕಾರ್ಯಾಚರಣೆಯ ದಕ್ಷತೆ ಮತ್ತು ಪ್ರಯಾಣಿಕರ ಅನುಭವವನ್ನು ಹೆಚ್ಚಿಸುವ ಗುರಿ ಹಾಕಲಾಗಿದೆ.

ಪ್ರಮುಖ ವೈಮಾನಿಕ ಕೇಂದ್ರವಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಲು ಏರ್ ಇಂಡಿಯಾ-ಬಿಐಎಎಲ್ ಒಪ್ಪಂದ
ಬೆಂಗಳೂರು ವಿಮಾನ ನಿಲ್ದಾಣ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:Apr 08, 2024 | 4:41 PM

ಬೆಂಗಳೂರು, ಏಪ್ರಿಲ್ 8: ಭಾರತದ ಪ್ರಮುಖ ಜಾಗತಿಕ ವಿಮಾನಯಾನ ಸಂಸ್ಥೆಯಾದ ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಮತ್ತು ಬೆಂಗಳೂರು ಇಂಟರ್ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ಸಂಸ್ಥೆಗಳ ಮಧ್ಯೆ ಮಹತ್ವದ ಒಪ್ಪಂದಾಗಿದೆ. ದಕ್ಷಿಣ ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸುವ ಆಶಯ ಇದೆ. ಈ ಮೂಲಕ ಭಾರತದಲ್ಲಿ ಮುಂದಿನ ಕೆಲವು ವರ್ಷಗಳಲ್ಲಿ ವಿಮಾನಯಾನ ಸಂಪರ್ಕ ಹೆಚ್ಚಿಸುವ ಗುರಿ ಹೊಂದಿದ್ದು, ಈ ಒಪ್ಪಂದವು ಭಾರತೀಯ ವಾಯುಯಾನ ಉದ್ಯಮದಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

ಏರ್ ಇಂಡಿಯಾ (ಇತರ ಟಾಟಾ ಗ್ರೂಪ್ ಏರ್‌ಲೈನ್ಸ್ ಕಂಪನಿಗಳಾದ AIX ಮತ್ತು ವಿಸ್ತಾರಾವನ್ನೂ ಒಳಗೊಂಡು) ಮತ್ತು BIAL ಮುಂದಿನ ಐದು ವರ್ಷಗಳಲ್ಲಿ ಅಂತಾರಾಷ್ಟ್ರೀಯ ಸಂಪರ್ಕ, ಕಾರ್ಯಾಚರಣೆಯ ದಕ್ಷತೆ ಮತ್ತು ಪ್ರಯಾಣಿಕರ ಅನುಭವವನ್ನು ಹೆಚ್ಚಿಸುವ ಗುರಿ ಹೊಂದಿದೆ.

ಇದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB ಅಥವಾ BLR ವಿಮಾನ ನಿಲ್ದಾಣ) ವರ್ಧಿತ ನೆಟ್‌ವರ್ಕ್ (enhanced network) ಮೂಲಕ ಟಾಟಾ ಗ್ರೂಪ್ ಏರ್‌ಲೈನ್ಸ್, ಏರ್ ಇಂಡಿಯಾ ಮತ್ತು ವಿಸ್ತಾರಾದ ಪ್ರೀಮಿಯಂ ಪ್ರಯಾಣಿಕರು ಮತ್ತು ನಿಯಮಿತ ಪ್ರಯಾಣಿಕರಿಗೆ ಮೀಸಲಾದ ವಿಶ್ರಾಂತಿ ಕೋಣೆ (lounge) ನಿರ್ಮಿಸುವುದು ಸೇರಿದಂತೆ ಇತರೆ ಸೌಕರ್ಯಗಳನ್ನು ಒಳಗೊಂಡಿದೆ.

ಇದನ್ನೂ ಓದಿ: ಚೀನಾ, ವಿಯೆಟ್ನಾಂದಲ್ಲಿಯಂತೆ ಭಾರತದಲ್ಲೂ ಉದ್ಯೋಗಿಗಳಿಗೆ ಮನೆ ಕಟ್ಟಿಕೊಡಲಿದೆ ಆ್ಯಪಲ್

ಈ ಒಪ್ಪಂದದ ಭಾಗವಾಗಿ, BLR ವಿಮಾನ ನಿಲ್ದಾಣದಲ್ಲಿ ಎಂಆರ್​ಒ (MRO) ಸೌಲಭ್ಯಗಳನ್ನು ಸ್ಥಾಪಿಸಲು ಏರ್ ಇಂಡಿಯಾ ಕರ್ನಾಟಕ ಸರ್ಕಾರದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (MOU) ಸಹಿ ಹಾಕಿದೆ. ಇದು ಬೆಂಗಳೂರಿನಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಏರ್ ಇಂಡಿಯಾದ ಬದ್ಧತೆಯನ್ನು ಒತ್ತಿಹೇಳುತ್ತದೆ.

Air India and BIAL Sign MoU to Develop Bengaluru as Premier Aviation Hub

ಏರ್ ಇಂಡಿಯಾ, ಬಿಐಎಎಲ್ ಒಪ್ಪಂದ

ಅಷ್ಟೆ ಅಲ್ಲದೆ, ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಿಂದ ನೇರ ದೀರ್ಘ-ಪ್ರಯಾಣದ ಮಾರ್ಗಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತನ್ನ ಜಾಗತಿಕ ಹೆಜ್ಜೆಗುರುತನ್ನು ವಿಸ್ತರಿಸುತ್ತಿದೆ. ಈ ಪಾಲುದಾರಿಕೆಯು MRO ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಜೊತೆಗೆ, ರಾಜ್ಯದಲ್ಲಿ ಹೆಚ್ಚು ನುರಿತ ವ್ಯಕ್ತಿಗಳಿಗೆ 1,200 ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಯೋಜಿಸಲಾಗಿದೆ.

ಏರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್, “ಬೆಂಗಳೂರು ವಾಯು ಸಂಪರ್ಕ ಕೇಂದ್ರದ ಹಬ್‌ ಆಗಿದ್ದು, ವಿಮಾನಯಾನ ಹಾಗೂ ವಿಮಾನ ನಿಲ್ದಾಣದಲ್ಲಿನ ದಕ್ಷ ಕಾರ್ಯಾಚರಣೆಯಿಂದ ಗ್ರಾಹಕರು ಉತ್ತಮ ಅನುಭವ ಪಡೆಯುತ್ತಿದ್ದಾರೆ, ವಿಮಾನ ನಿಲ್ದಾಣದ ಅನುಭೂತಿಯನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ವಾಯು ಸಂಪರ್ಕವನ್ನು ವಿಸ್ತರಿಸಲು ಮುಂದಾಗಿದ್ದೇವೆ. ಇದಕ್ಕಾಗಿ. ಪ್ರಮುಖ MRO ಕೇಂದ್ರವನ್ನು ನಿರ್ಮಿಸುವ ದೃಷ್ಟಿಯಿಂದ BIAL ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಪಾಲುದಾರಿಕೆಯು ಏರ್ ಇಂಡಿಯಾ ಬೆಳವಣಿಗೆಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದರು.

ಇದನ್ನೂ ಓದಿ: ಬಂಧನ್ ಬ್ಯಾಂಕ್ ಸಿಇಒ ರಾಜೀನಾಮೆ; ಷೇರುಬೆಲೆ ಕುಸಿತ; ರೇಟಿಂಗ್ ಕಡಿಮೆ ಮಾಡಿದ ಬ್ರೋಕರೇಜ್ ಸಂಸ್ಥೆಗಳು

ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್ ಮಾತನಾಡಿ, “ದಕ್ಷಿಣ ಭಾರತದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿ, BLR ವಿಮಾನ ನಿಲ್ದಾಣವು ದಕ್ಷಿಣ ಮತ್ತು ಮಧ್ಯ ಭಾರತದಲ್ಲಿ ಪ್ರಾಥಮಿಕ ಅಂತಾರಾಷ್ಟ್ರೀಯ ಗೇಟ್‌ವೇ ಆಗಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಈ ಸಹಯೋಗದ ಮೂಲಕ ಭಾರತೀಯ ವಾಯುಮಾರ್ಗಗಳ ಹಬ್‌ ಆಗಿ ಅಭಿವೃದ್ಧಿಪಡಿಸುವ ನಾಗರಿಕ ವಿಮಾನಯಾನ ಸಚಿವಾಲಯದ ದೃಷ್ಟಿಕೋನದಲ್ಲಿ ಹೊಂದಿಕೆಯಾಗಲಿದೆ. ಇದರಿಂದ ನಮ್ಮ ಪ್ರಯಾಣಿಕರ ಪ್ರಯಾಣದ ಅನುಭವವನ್ನು ಇನ್ನಷ್ಟು ಹೆಚ್ಚಿಸುವ ನಮ್ಮ ಬದ್ದತೆಗೆ ಸಾಕ್ಷಿಯಾಗಿದೆ. ಬೆಂಗಳೂರಿನಿಂದ ಹೊರಹೋಗುವ ಅರ್ಧದಷ್ಟು ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು ನಮ್ಮ ಕ್ಯಾಚ್‌ಮೆಂಟ್ ಹೆಡ್‌ ಟು ಯುರೋಪ್, ಉತ್ತರ ಅಮೇರಿಕಾ, ಆಸ್ಟ್ರೇಲಿಯಾ ಮತ್ತು ಪೂರ್ವಕ್ಕೆ ಹೋಗಬಹುದು, ಏರ್ ಇಂಡಿಯಾದೊಂದಿಗಿನ ನಮ್ಮ ಮೈತ್ರಿಯು ಈ ಗುರಿಯತ್ತ ಗಣನೀಯ ಏರಿಕೆಯನ್ನು ಸಾಧಿಸಲಿದೆ. ಮುಂದಿನ ಐದು ವರ್ಷಗಳಲ್ಲಿ BLR ವಿಮಾನ ನಿಲ್ದಾಣದಿಂದ ದೀರ್ಘ-ಪ್ರಯಾಣದ ಮಾರ್ಗಗಳ ಗಮನಾರ್ಹ ಪಾಲನ್ನು ಹೊಂದುವ ಗುರಿಯನ್ನು ಹೊಂದಿದ್ದೇವೆ” ಎಂದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Mon, 8 April 24

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ