AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿ ಇಂಧನದ ಎಫೆಕ್ಟ್; ಕೆಲ ಅಂತಾರಾಷ್ಟ್ರೀಯ ಫ್ಲೈಟ್​ಗಳನ್ನು ನಿಲ್ಲಿಸಿದ ಏರ್ ಇಂಡಿಯಾ

Air India Cuts International Flights Amid Jet Fuel Price Hike: ಜೆಟ್ ಇಂಧನದ ಬೆಲೆ ಗಣನೀಯವಾಗಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಜೂನ್‌ನಿಂದ ಆಗಸ್ಟ್ ತಿಂಗಳವರೆಗೆ ತನ್ನ ಕೆಲವು ಅಂತರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ. ದೆಹಲಿ-ಚಿಕಾಗೋ, ಮುಂಬೈ-ನ್ಯೂಯಾರ್ಕ್ ಸೇರಿದಂತೆ ಆಯ್ದ ಮಾರ್ಗಗಳಲ್ಲಿ ಸೇವೆಗಳು ಕಡಿಮೆಯಾಗಲಿವೆ. ಇಂಧನ ಬೆಲೆ ಏರಿಕೆ ಹಾಗೂ ಕೆಲ ಪ್ರದೇಶಗಳಲ್ಲಿ ವಾಯು ಸಂಚಾರ ನಿರ್ಬಂಧಗಳು ಈ ನಿರ್ಧಾರಕ್ಕೆ ಕಾರಣವಾಗಿವೆ.

ದುಬಾರಿ ಇಂಧನದ ಎಫೆಕ್ಟ್; ಕೆಲ ಅಂತಾರಾಷ್ಟ್ರೀಯ ಫ್ಲೈಟ್​ಗಳನ್ನು ನಿಲ್ಲಿಸಿದ ಏರ್ ಇಂಡಿಯಾ
ಏರ್ ಇಂಡಿಯಾ ಫ್ಲೈಟ್Image Credit source: Alamy
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2026 | 5:06 PM

Share

ನವದೆಹಲಿ, ಮೇ 13: ವಿಮಾನಗಳಿಗೆ ಬಳಸಲಾಗುವ ಜೆಟ್ ಫುಯೆಲ್ ಅಥವಾ ಎಟಿಎಫ್ ಇಂಧನದ (ATF- Aviation Turbine Fuel) ಬೆಲೆ ತೀವ್ರವಾಗಿ ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆ (Air India) ತನ್ನ ಕೆಲ ಫ್ಲೈಟ್​ಗಳನ್ನು ನಿಲ್ಲಿಸಲು ನಿರ್ಧರಿಸಿದೆ. ಜೂನ್​ನಿಂದ ಆಗಸ್ಟ್​ವರೆಗೆ ಕೆಲ ಆಯ್ದ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ತನ್ನ ಫ್ಲೈಟ್ ಸರ್ವಿಸ್ ಅನ್ನು ಕಡಿಮೆಗೊಳಿಸುವುದಾಗಿ ಸಂಸ್ಥೆ ಹೇಳಿದೆ.

ಏರ್ ಇಂಡಿಯಾ ಇಂದು ಬುಧವಾರ ನೀಡಿರುವ ಮಾಹಿತಿ ಪ್ರಕಾರ ಆರೇಳು ಮಾರ್ಗಗಳಲ್ಲಿ ಅದರ ಫ್ಲೈಟ್ ಸಂಚಾರ ಇರುವುದಿಲ್ಲ. ದೆಹಲಿ-ಚಿಕಾಗೊ, ಮುಂಬೈ-ನ್ಯೂಯಾರ್ಕ್, ದೆಹಲಿ-ಶಾಂಘೈ, ಚೆನ್ನೈ-ಸಿಂಗಾಪುರ್ ಹಾಗೂ ಇತರ ಎರಡು ಮಾರ್ಗಗಳಲ್ಲಿ ಏರ್ ಇಂಡಿಯಾ ಫ್ಲೈಟ್​ಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿವೆ.

ಇದನ್ನೂ ಓದಿ: ಕಲ್ಲಿದ್ದಲು ಅನಿಲೀಕರಣ ಯೋಜನೆಗೆ ಸಂಪುಟದಿಂದ 37,500 ರೂ ಅನುಮೋದನೆ; ಏನಿದರ ಉಪಯೋಗ?

ಏರ್ ಇಂಡಿಯಾದ ಬಹುತೇಕ ಎಲ್ಲಾ ಫ್ಲೈಟ್​ಗಳು ಯಥಾಪ್ರಕಾರ ಸಂಚರಿಸಲಿವೆ. ಮೇಲೆ ತಿಳಿಸಿದ ಆರು ಮಾರ್ಗಗಳನ್ನು ಬಿಟ್ಟರೆ ಉಳಿದ ಕಡೆ ಫ್ಲೈಟ್ ಸ್ಥಗಿತ ಇರುವುದಿಲ್ಲ. ಏರ್ ಇಂಡಿಯಾ ಒಂದು ತಿಂಗಳಲ್ಲಿ 1,200ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಫ್ಲೈಟ್​ಗಳನ್ನು ಚಲಾಯಿಸುತ್ತದೆ. ಇದರಲ್ಲಿ ಉತ್ತರ ಅಮೆರಿಕಕ್ಕೆ ವಾರಕ್ಕೊಮ್ಮೆ 33 ಫ್ಲೈಟ್​ಗಳು, ಯೂರೋಪ್​ಗೆ 47 ಫ್ಲೈಟ್​ಗಳು, ಯುಕೆಗೆ 57 ಫ್ಲೈಟ್​ಗಳು, ಪೂರ್ವ ಏಷ್ಯಾಗೆ 158 ಫ್ಲೈಟ್​ಗಳು, ಆಸ್ಟ್ರೇಲಿಯಾಗೆ 8 ಫ್ಲೈಟ್​ಗಳು, ಆಫ್ರಿಕಾಗೆ 7 ಫ್ಲೈಟ್​ಗಳನ್ನು ಏರ್ ಇಂಡಿಯಾ ಆಪರೇಟ್ ಮಾಡುತ್ತಿದೆ. ಬಹುತೇಕ ಇವೆಲ್ಲವೂ ಹಾಗೇ ಮುಂದುವರಿಯುತ್ತವೆ.

ಇಂಧನ ದರ ಹೆಚ್ಚಳದ ಜೊತೆಗೆ ಏರ್​ಸ್ಪೇಸ್ ನಿರ್ಬಂಧವೂ ಒಂದು ಕಾರಣ

ವಿಮಾನ ಸಂಸ್ಥೆಯು ತನ್ನ ಫ್ಲೈಟ್ ಸಂಖ್ಯೆ ಇಳಿಸಲು ಇಂಧನ ದರ ಏರಿಕೆ ಮಾತ್ರವೇ ಅಲ್ಲ, ಕೆಲ ಪ್ರದೇಶಗಳಲ್ಲಿ ವಾಯು ಸಂಚಾರ ನಿರ್ಬಂಧಗಳು ಮುಂದುವರಿದಿರುವುದೂ ಕಾರಣವಾಗಿದೆ.

ಇದನ್ನೂ ಓದಿ: ಇಂಧನ ಕಡಿಮೆ ಬಳಸಿ ಎನ್ನುತ್ತಿರೋದು ಮೋದಿ ಮಾತ್ರವಲ್ಲ, ವಿವಿಧ ದೇಶಗಳು ಜಾರಿಗೊಳಿಸಿರುವ ಸಂಗತಿಗಳೇ

ಕೆಲ ದಿನಗಳ ಹಿಂದಷ್ಟೇ ಭಾರತೀಯ ವಿಮಾನ ಸಂಸ್ಥೆಗಳ ಸಂಘಟನೆಯೊಂದು ಜೆಟ್ ಇಂಧನದ ಬೆಲೆ ವಿಚಾರವಾಗಿ ಸರ್ಕಾರಕ್ಕೆ ಮನವಿಯೊಂದನ್ನು ಮಾಡಿತ್ತು. ಜೆಟ್ ಫುಯಲ್​ಗೆ ಇರುವ ಬೆಲೆ ಸೂತ್ರದಲ್ಲಿ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿ ಈ ಸಂಘಟನೆಯು ಸರ್ಕಾರಕ್ಕೆ ತುರ್ತು ಸಂದೇಶಳ ಕಳುಹಿಸಿತ್ತು. ಏರ್ ಇಂಡಿಯಾ, ಇಂಡಿಗೋ ಮತ್ತು ಸ್ಪೈಸ್ ಜೆಟ್ ಸಂಸ್ಥೆಗಳನ್ನು ಒಳಗೊಂಡ ಸಂಘಟನೆಯ ಇದಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ