AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಎಸ್​ಬಿಐ, ಬ್ಯಾಂಕ್ ಆಫ್ ಬರೋಡದಿಂದ 18,000 ಕೋಟಿ ಸಾಲ ಪಡೆಯಲಿದೆ ಏರ್ ಇಂಡಿಯಾ

ಕಳೆದ ವರ್ಷ ಎಸ್​​ಬಿಐಯಿಂದ ಟಾಟಾ ಸನ್ಸ್​ 10,000 ಕೋಟಿ ಸಾಲ ಹಾಗೂ ಬ್ಯಾಂಕ್ ಆಫ್ ಬರೋಡದಿಂದ 5,000 ಕೋಟಿ ರೂ. ಸಾಲ ಪಡೆದಿತ್ತು.

Air India: ಎಸ್​ಬಿಐ, ಬ್ಯಾಂಕ್ ಆಫ್ ಬರೋಡದಿಂದ 18,000 ಕೋಟಿ ಸಾಲ ಪಡೆಯಲಿದೆ ಏರ್ ಇಂಡಿಯಾ
ಏರ್ ಇಂಡಿಯಾ (ಸಾಂದರ್ಭಿಕ ಚಿತ್ರ)
Ganapathi Sharma
|

Updated on:Feb 07, 2023 | 3:16 PM

Share

ನವದೆಹಲಿ: ಟಾಟಾ ಸಮೂಹದ (Tata Group) ಒಡೆತನದಲ್ಲಿರುವ ಏರ್ ಇಂಡಿಯಾ (Air India) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಬ್ಯಾಂಕ್ ಆಫ್ ಬರೋಡದಿಂದ (BoB) 18,000 ಕೋಟಿ ರೂ. ಸಾಲ ಪಡೆಯಲಿದೆ. ಅಸ್ತಿತ್ವದಲ್ಲಿರುವ ಅಲ್ಪಾವಧಿಯ ಸಾಲವನ್ನು ಮರು ಹೊಂದಿಸುವುದಕ್ಕಾಗಿ ಈ ಸಾಲ ಪಡೆಯಲಿದೆ. ಅಸ್ತಿತ್ವದಲ್ಲಿರುವ ಸಾಲದ ಅವಧಿ ಒಂದು ವರ್ಷವಾಗಿದ್ದು, ಅದನ್ನು ದೀರ್ಘಾವಧಿಯ ಸಾಲವಾಗಿ ಪರಿವರ್ತಿಸಲು ಏರ್ ಇಂಡಿಯಾ ಉದ್ದೇಶಿಸಿದೆ ಎಂದು ವರದಿಯಾಗಿದೆ. ಟಾಟಾ ಸಮೂಹವು ಮಾಲೀಕತ್ವ ವಹಿಸಿಕೊಂಡ ಬಳಿಕ ದೊರೆತ ಸಾಲ ಸೌಲಭ್ಯದ ಅಡಿ ಪಡೆದ ಸಾಲಗಳನ್ನು ಮುಂದುವರಿಸುವುದಕ್ಕಾಗಿ ಏರ್ ಇಂಡಿಯಾ ಹೊಸದಾಗಿ ಸಾಲ ಪಡೆಯಲು ಮುಂದಾಗಿದೆ. ದೀರ್ಘಾವಧಿಯ ತಂತ್ರಗಾರಿಕೆಯ ಭಾಗವಾಗಿ ಈ ಕ್ರಮಕ್ಕೆ ಮುಂದಾಗಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಟಾಟಾ ಸಮೂಹವು ಏರ್ ಇಂಡಿಯಾ ಮಾಲೀಕತ್ವ ವಹಿಸಿದ ಬಳಿಕ ಅದಕ್ಕೊಂದು ಸ್ಪಷ್ಟ ರೂಪ ನೀಡುವ ನಿಟ್ಟಿನಲ್ಲಿ ಈಗಲೂ ಕಾರ್ಯಾಚರಿಸುತ್ತಿದೆ. ಬ್ಯಾಂಕ್​ಗಳೊಂದಿಗಿನ ಸಹಭಾಗಿತ್ವವನ್ನು ಅಧಿಕೃತವಾಗಿ ಗಟ್ಟಿಗೊಳಿಸಲು ಸಂಸ್ಥೆ ಪ್ರತ್ನಿಸುತ್ತಿದೆ. ದೀರ್ಘಾವಧಿಗೆ ಖಾಸಗಿ ಮತ್ತು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳೊಂದಿಗೆ ಉತ್ತಮ ಬಾಂಧವ್ಯ ಹೊಂದುವುದು ಸಂಸ್ಥೆಯ ಗುರಿಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಕನಾಮಿಕ್ ಟೈಮ್ಸ್’ ವರದಿ ಮಾಡಿದೆ.

ಇದನ್ನೂ ಓದಿ: Layoff: ಇನ್ಫೋಸಿಸ್​ನಿಂದ 600 ಮಂದಿ ಹೊಸ ಉದ್ಯೋಗಿಗಳ ವಜಾ; ವರದಿ

ಈ ಮಧ್ಯೆ ಕಂಪನಿಯು ಏರ್ ಏಷ್ಯಾ, ವಿಸ್ತಾರ ಬ್ರ್ಯಾಂಡ್​​ಗಳನ್ನು ವಿಲೀನಗೊಳಿಸುವ ನಿಟ್ಟಿನಲ್ಲಿಯೂ ಕಾರ್ಯಾಚರಿಸುತ್ತಿದೆ. ಹೊಸ ವಿಮಾನಗಳ ಖರೀದಿಗೆ ಹೂಡಿಕೆ, ಅಸ್ತಿತ್ವದಲ್ಲಿರುವ ಹಳೆಯ ವಿಮಾನಗಳ ಬದಲಾವಣೆ, ಜಾಲವನ್ನು ವಿಸ್ತರಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ.

ಕಳೆದ ವರ್ಷ ಎಸ್​​ಬಿಐಯಿಂದ ಟಾಟಾ ಸನ್ಸ್​ 10,000 ಕೋಟಿ ಸಾಲ ಹಾಗೂ ಬ್ಯಾಂಕ್ ಆಫ್ ಬರೋಡದಿಂದ 5,000 ಕೋಟಿ ರೂ. ಸಾಲ ಪಡೆದಿತ್ತು. ಶೇ 4.25ರ ಬಡ್ಡಿ ದರದಲ್ಲಿ ಈ ಸಾಲ ಪಡೆಯಲಾಗಿತ್ತು. ನಂತರ ಆರ್​​ಬಿಐ ರೆಪೊ ದರವನ್ನು ನಿರಂತರವಾಗಿ ಹೆಚ್ಚಿಸಿದ್ದರಿಂದ ಬಡ್ಡಿ ದರ ಶೇ 6.50 ಆಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Tue, 7 February 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ