Bank Strike: ಈ ವಾರ ಎರಡು ದಿನ ಬ್ಯಾಂಕ್ ಮುಷ್ಕರ; ದಿನಾಂಕ ಮತ್ತಿತರ ಮಾಹಿತಿ ಇಲ್ಲಿದೆ
ಈ ವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ ಇದ್ದು, ಯಾವ ದಿನಾಂಕದಂದು ಮುಷ್ಕರ ಇದೆ ಮತ್ತು ಇತ್ಯಾದಿ ವಿವರಗಳು ಈ ಲೇಖನದಲ್ಲಿ ಇವೆ. ಇದರಿಂದ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಆಗಲಿದೆ.
ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗಿಗೆ ವಹಿಸುವ ಸರ್ಕಾರದ ಯೋಜನೆಯನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಈ ವಾರ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿವೆ. ಪಿಟಿಐ ವರದಿಯ ಪ್ರಕಾರ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ (ಎಐಬಿಒಸಿ) ಪ್ರಧಾನ ಕಾರ್ಯದರ್ಶಿ ಸಂಜಯ್ ದಾಸ್ ಮಾತನಾಡಿ, ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡುವುದರಿಂದ ಆರ್ಥಿಕತೆಯ ಆದ್ಯತೆ ವಲಯಗಳಿಗೆ ಹಾನಿಯಾಗುತ್ತದೆ ಮತ್ತು ಸ್ವ-ಸಹಾಯ ಗುಂಪುಗಳಿಗೆ ಮತ್ತು ಗ್ರಾಮೀಣ ಆರ್ಥಿಕತೆಗೆ ಸಾಲದ ಹರಿವು ಉಂಟಾಗುತ್ತದೆ ಎಂದು ಹೇಳಿದ್ದಾರೆ.
ಈ ವಾರ 2 ದಿನಗಳ ಬ್ಯಾಂಕ್ ಮುಷ್ಕರ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಡಿಸೆಂಬರ್ 16ರಿಂದ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ.
ಎಸ್‌ಬಿಐ ಸೇವೆಗಳ ಮೇಲೆ ಪರಿಣಾಮ ಬೀರಬಹುದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) ಕರೆ ನೀಡಿರುವ ಡಿಸೆಂಬರ್ 16-17ರ ಎರಡು ದಿನಗಳ ಮುಷ್ಕರದಿಂದ ಬ್ಯಾಂಕ್‌ನ ಸಾಮಾನ್ಯ ಕಾರ್ಯನಿರ್ವಹಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶುಕ್ರವಾರ ಹೇಳಿದೆ.
“ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಮುಷ್ಕರದ ಸೂಚನೆಯನ್ನು ನೀಡಿದೆ ಎಂದು ನಮಗೆ ಭಾರತೀಯ ಬ್ಯಾಂಕ್‌ಗಳ ಅಸೋಸಿಯೇಷನ್ (lBA) ಸಲಹೆ ನೀಡಿದೆ. UFBU ಘಟಕ ಒಕ್ಕೂಟಗಳಾದ AIBEA, AIBOC, NCBE, AIBOA, BEFI, INBEF ಮತ್ತು INBOC ತಮ್ಮ ಬೇಡಿಕೆಗಳಿಗೆ ಬೆಂಬಲವಾಗಿ ಡಿಸೆಂಬರ್ l6 ಮತ್ತು l7, 2021ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಹೋಗಲು ಪ್ರಸ್ತಾಪಿಸಿದೆ,” ಎಂದು ಬ್ಯಾಂಕ್ನಿಂದ ನಿಯಂತ್ರಕ ಫೈಲಿಂಗ್‌ನಲ್ಲಿ ತಿಳಿಸಿದ್ದಾರೆ.
ಮುಷ್ಕರದ ಸಮಯದಲ್ಲಿ ತನ್ನ ಶಾಖೆಗಳಲ್ಲಿ ಸಾಮಾನ್ಯ ಕಾರ್ಯ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಮಾಡಿದೆ ಎಂದು ಎಸ್‌ಬಿಐ ಹೇಳಿದೆ.
ಬ್ಯಾಂಕ್ ಒಕ್ಕೂಟಗಳು ಮುಷ್ಕರಕ್ಕೆ ಏಕೆ ಕರೆ ನೀಡಿವೆ? ಬ್ಯಾಂಕ್‌ಗಳ ಖಾಸಗೀಕರಣದ ಆಲೋಚನೆಯನ್ನು ಸರ್ಕಾರ ಕೈಬಿಡದಿದ್ದರೆ ಎರಡು ದಿನಗಳ ಮುಷ್ಕರದ ಜತೆಗೆ ಇತರ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ (ಎಐಬಿಒಸಿ) ಪ್ರಧಾನ ಕಾರ್ಯದರ್ಶಿ ಸಂಜಯ್ ದಾಸ್ ಹೇಳಿದ್ದಾರೆ ಎಂಬುದಾಗಿ ಪಿಟಿಐ ವರದಿ ಮಾಡಿದೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ATM Withdrawal: ಹೊಸ ವರ್ಷಕ್ಕೆ ಬ್ಯಾಂಕ್ ಗ್ರಾಹಕರಿಗೆ ಶುಲ್ಕ ಏರಿಕೆ ಹೊರೆ; ಎಟಿಎಂ ವಿಥ್ಡ್ರಾ ಆಗಲಿದೆ ದುಬಾರಿ