AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amul, Mother Dairy: ಅಮುಲ್, ಮದರ್ ಡೈರಿ ಹಾಲಿನ ದರ ಲೀಟರ್‌ಗೆ 2 ರೂ. ಹೆಚ್ಚಳ

ಅಮುಲ್ ಮತ್ತು ಮದರ್ ಡೈರಿ ಹಾಲಿನ ದರವನ್ನು ಲೀಟರ್‌ಗೆ 2 ರೂ. ಹೆಚ್ಚಳವನ್ನು ಮಾಡಿದೆ. ಇದು ಕಂಪನಿಯ ಈ ವರ್ಷ ಮಾಡಿದ ಎರಡನೇ ಹೆಚ್ಚಳ ದರವಾಗಿದೆ. ಹೊಸ ಬೆಲೆಗಳು ಆಗಸ್ಟ್ 17 ರಿಂದ ಜಾರಿಗೆ ಬರಲಿವೆ.

Amul, Mother Dairy: ಅಮುಲ್, ಮದರ್ ಡೈರಿ ಹಾಲಿನ ದರ ಲೀಟರ್‌ಗೆ 2 ರೂ. ಹೆಚ್ಚಳ
Amul, Mother Dairy
TV9 Web
| Edited By: |

Updated on: Aug 16, 2022 | 3:15 PM

Share

ಅಮುಲ್ ಗೋಲ್ಡ್ ಬೆಲೆ 500 ಎಂಎಲ್​ಗೆ 31 ರೂ., ಅಮುಲ್ ತಾಜಾ 500 ಎಂಎಲ್​ಗೆ 25 ರೂ., ಅಮುಲ್ ಶಕ್ತಿ 500 ಎಂಎಲ್​ಗೆ 28 ​​ರೂ. ಪ್ರತಿ ಲೀಟರ್‌ಗೆ ರೂ 2 ಹೆಚ್ಚಳವಾಗಿದ್ದು, ಎಂಆರ್‌ಪಿಯಲ್ಲಿ ಶೇಕಡಾ 4 ರಷ್ಟು ಹೆಚ್ಚಳವಾಗಿದೆ. ಅಮುಲ್ ಈ ವರ್ಷದ ಫೆಬ್ರವರಿಯಲ್ಲಿ ಬೆಲೆಗಳನ್ನು ಹೆಚ್ಚಿಸಿತ್ತು. ಇದಾದ ನಂತರ ಅಮುಲ್ ಗೋಲ್ಡ್ ಹಾಲಿನ 500 ಎಂಎಲ್​ಗೆ 30 ರೂ., ಅಮುಲ್ ತಜಾ 500 ಎಂಎಲ್ ಗೆ 24 ರೂ., ಅಮುಲ್ ಶಕ್ತಿ 500 ಎಂಎಲ್ ಗೆ 27 ರೂ. ದರವನ್ನು ನಿಗದಿ ಮಾಡಲಾಗಿತ್ತು.

ಆಗಸ್ಟ್ 17, 2022 ರಿಂದ ಜಾರಿಗೆ ಬರುವಂತೆ ಹಾಲಿನ ಬೆಲೆಯನ್ನು ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಿಸುವುದು ಅನಿವಾರ್ಯ ಎಂದು ಕಂಪನಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ. ಹೊಸ ಬೆಲೆಗಳು ಎಲ್ಲಾ ಹಾಲಿನ ವಸ್ತುಗಳಿಗೂ ಅನ್ವಯಿಸುತ್ತವೆ. ಫುಲ್ ಕ್ರೀಮ್ ಹಾಲಿನ ದರ ಬುಧವಾರದಿಂದ 61 ರೂ.ಗೆ ಏರಿಕೆಯಾಗಿದ್ದು, ಲೀಟರ್‌ಗೆ 59 ರೂ. ಆಗಿದೆ. ಟೋನ್ಡ್ ಹಾಲಿನ ಬೆಲೆ 51 ರೂ.ಗೆ ಏರಿಕೆಯಾಗಲಿದ್ದು, ಡಬಲ್ ಟೋನ್ಡ್ ಹಾಲಿನ ದರ ಲೀಟರ್‌ಗೆ 45 ರೂ. ಹಸುವಿನ ಹಾಲಿನ ದರವನ್ನು ಲೀಟರ್‌ಗೆ 53 ರೂ.ಗೆ ಹೆಚ್ಚಿಸಲಾಗಿದೆ.

ಹಾಲಿನ ಒಟ್ಟಾರೆ ಕಾರ್ಯಾಚರಣೆ ಮತ್ತು ಉತ್ಪಾದನೆಯ ವೆಚ್ಚದ ಹೆಚ್ಚಳದಿಂದಾಗಿ ಈ ಬೆಲೆ ಏರಿಕೆ ಮಾಡಲಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಜಾನುವಾರುಗಳ ಮೇವಿನ ವೆಚ್ಚವು ಸರಿಸುಮಾರು 20 ಪ್ರತಿಶತಕ್ಕೆ ಹೆಚ್ಚಾಗಿದೆ ಎಂದು ಅಮುಲ್ ಹೇಳಿದೆ. ಇನ್‌ಪುಟ್ ವೆಚ್ಚದಲ್ಲಿನ ಏರಿಕೆಯನ್ನು ಪರಿಗಣಿಸಿ, ನಮ್ಮ ಸದಸ್ಯ ಒಕ್ಕೂಟಗಳು ಹಿಂದಿನ ವರ್ಷಕ್ಕಿಂತ 8-9 ಶೇಕಡಾ ವ್ಯಾಪ್ತಿಯಲ್ಲಿ ರೈತರ ಬೆಲೆಗಳನ್ನು ಹೆಚ್ಚಿಸಿವೆ ಎಂದು ಅಮುಲ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ
Image
Baal Aadhaar Card: ಬಾಲ್ ಆಧಾರ್ ಕಾರ್ಡ್ ಎಂದರೇನು? ಅದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?ಇಲ್ಲಿದೆ ಮಾಹಿತಿ
Image
LIC: ಆರೋಗ್ಯ ವಿಮಾ ಕ್ಷೇತ್ರದಲ್ಲಿ ವಹಿವಾಟು ಅರಂಭಿಸಲು ಎಲ್​ಐಸಿ ಮತ್ತೆ ಪ್ರಯತ್ನ
Image
Gold Price Today: ಬಂಗಾರ ಖರೀದಿಸಬೇಕಾ?; 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ
Image
Azadi Ka Amrit Mahotsav: 75 ವರ್ಷಗಳಲ್ಲಿ ಡಾಲರ್ ಎದುರು ರೂಪಾಯಿ ಏಕೆ ಸೋಲನ್ನಪ್ಪುತ್ತಿದೆ? ನಿಜವಾದ ಕಾರಣಗಳು ಇಲ್ಲಿವೆ

ಮಾರ್ಚ್‌ನಲ್ಲಿ, ಮದರ್ ಡೈರಿಯು ದೆಹಲಿ-ಎನ್‌ಸಿಆರ್‌ನಲ್ಲಿ (ರಾಷ್ಟ್ರೀಯ ರಾಜಧಾನಿ ಪ್ರದೇಶ) ಹಾಲಿನ ದರವನ್ನು ಲೀಟರ್‌ಗೆ 2 ರೂಪಾಯಿಗಳಷ್ಟು ಹೆಚ್ಚಿಸಿತು. ಮದರ್ ಡೈರಿಯು ದೆಹಲಿ-ಎನ್‌ಸಿಆರ್ ಮಾರುಕಟ್ಟೆಯಲ್ಲಿ ಪ್ರಮುಖ ಹಾಲು ಸರಬರಾಜುದಾರರಲ್ಲಿ ಒಂದಾಗಿದೆ ಮತ್ತು ಪಾಲಿ ಪ್ಯಾಕ್‌ಗಳಲ್ಲಿ ಮತ್ತು ವೆಂಡಿಂಗ್ ಮೆಷಿನ್‌ಗಳ ಮೂಲಕ ದಿನಕ್ಕೆ 30 ಲಕ್ಷ ಲೀಟರ್‌ಗಿಂತ ಹೆಚ್ಚು ಮಾರಾಟ ಮಾಡುತ್ತದೆ.

Follow Us
TV9 Web
TV9 Web

TV9 Kannada

Read More
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ