AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್ ಅಂಬಾನಿಗೆ ಇನ್ನಷ್ಟು ಸಂಕಷ್ಟ; ನಿನ್ನೆ 3,716 ಕೋಟಿ ರೂ ಆಸ್ತಿ ಮುಟ್ಟುಗೋಲು; ಈಗ ಸಿಬಿಐನಿಂದ ಹೊಸ ಕೇಸ್ ದಾಖಲು

CBI files fresh case against Anil Ambani on complaint from Bank of Baroda: ಅನಿಲ್ ಅಂಬಾನಿ ಹಾಗೂ ಅವರ ರಿಲಾಯನ್ಸ್ ಕಮ್ಯೂನಿಕೇಶನ್ಸ್ ಕಂಪನಿ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ. ಬ್ಯಾಂಕ್ ಆಫ್ ಬರೋಡಾಗೆ ವಂಚನೆ ಎಸಗಿದ ಆರೋಪದ ಮೇಲೆ ದಾಖಲಾದ 2,223 ಕೋಟಿ ರೂ ಮೊತ್ತದ ಕೇಸ್ ಇದು. ಮುಂಬೈನ ಪಾಲಿ ಹಿಲ್​ನಲ್ಲಿರುವ ಅಂಬಾನಿ ನಿವಾಸವನ್ನು ಇಡಿ ಮುಟ್ಟುಗೋಲು ಹಾಕಿದ ಬೆನ್ನಲ್ಲೇ ನಡೆದ ಬೆಳವಣಿಗೆ ಇದು.

ಅನಿಲ್ ಅಂಬಾನಿಗೆ ಇನ್ನಷ್ಟು ಸಂಕಷ್ಟ; ನಿನ್ನೆ 3,716 ಕೋಟಿ ರೂ ಆಸ್ತಿ ಮುಟ್ಟುಗೋಲು; ಈಗ ಸಿಬಿಐನಿಂದ ಹೊಸ ಕೇಸ್ ದಾಖಲು
ಅನಿಲ್ ಅಂಬಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 26, 2026 | 4:34 PM

Share

ನವದೆಹಲಿ, ಫೆಬ್ರುವರಿ 26: ರಿಲಾಯನ್ಸ್ ಗ್ರೂಪ್​ನ ಮುಖ್ಯಸ್ಥ ಅನಿಲ್ ಅಂಬಾನಿ (Anil Ambani) ಅವರ ಸಂಕಷ್ಟ ನಿಲ್ಲುತ್ತಿಲ್ಲ. ಬುಧವಾರ ಅನಿಲ್ ಅಂಬಾನಿ ಅವರ ಮುಂಬೈ ನಿವಾಸವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದ ಬೆನ್ನಲ್ಲೇ ಇವತ್ತು ಸಿಬಿಐನಿಂದ ಅವರ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ. 2013ರಿಂದ 2017ರ ಅವಧಿಯಲ್ಲಿ ಬ್ಯಾಂಕ್ ಆಫ್ ಬರೋಡಾಗೆ 2,223.17 ಕೋಟಿ ರೂ ವಂಚನೆ ಎಸಗಿದ ಆರೋಪದಲ್ಲಿ ಅನಿಲ್ ಅಂಬಾನಿ ಹಾಗು ಆರ್​ಕಾಂ ಕಂಪನಿ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ.

ಆದರೆ, ಬ್ಯಾಂಕ್ ಆಫ್ ಬರೋಡಾಗೆ ಆರ್​ಕಾಂ ವತಿಯಿಂದ ಏನು ವಂಚನೆ ಆಗಿದೆ ಎನ್ನುವ ಮಾಹಿತಿ ಸದ್ಯಕ್ಕೆ ಗೊತ್ತಾಗಿಲ್ಲ. ಬ್ಯಾಂಕ್​ಗೆ ನಷ್ಟ ತರಲಾಗಿದೆ ಎಂದು ಅನಿಲ್ ಅಂಬಾನಿ, ಆರ್​ಕಾಂ, ಸರ್ಕಾರಿ ಅಧಿಕಾರಿಗಳು ಮತ್ತಿತರರ ವಿರುದ್ಧ ಸ್ವತಃ ಬ್ಯಾಂಕ್​ನಿಂದಲೇ ಎಫ್​ಐಆರ್ ದೂರು ದಾಖಲಾಗಿತ್ತು. ವಂಚನೆ, ಅಪರಾಧ ಸಂಚು ಇತ್ಯಾದಿಗೆ ಸಂಬಂಧಿಸಿದ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ಬರುತ್ತದೆ. ಇದರ ಆಧಾರದ ಮೇಲೆ ಸಿಬಿಐ ಪ್ರಕರಣ ದಾಖಲಿಸಿದೆ.

ಇದನ್ನೂ ಓದಿ: ಕಂಟೆಂಟ್ ಕ್ರಿಯೇಟರ್ಸ್​ಗೆ ಸರಿಯಾಗಿ ಆದಾಯ ಹಂಚಿಕೆ ಮಾಡಿ: ಡಿಜಿಟಲ್ ಪ್ಲಾಟ್​ಫಾರ್ಮ್​ಗಳಿಗೆ ಸಚಿವ ವೈಷ್ಣವ್ ಸೂಚನೆ

ಅನಿಲ್ ಅಂಬಾನಿಯ ಮುಂಬೈ ನಿವಾಸ ಮುಟ್ಟುಗೋಲು

ರಿಲಾಯನ್ಸ್ ಕಮ್ಯೂನಿಕೇಶನ್ (ಆರ್​ಕಾಂ) ವಿರುದ್ಧದ ವಂಚನೆ ಪ್ರಕರಣ ಸಂಬಂಧ ಅನಿಲ್ ಅಂಬಾನಿ ಅವರ ಪಾಲಿ ಹಿಲ್ ಮನೆಯನ್ನು ಜಾರಿ ನಿರ್ದೇಶನಾಲಯ ಫೆ. 25, ಬುಧವಾರದಂದು ಮುಟ್ಟುಗೋಲು ಹಾಕಿಕೊಂಡಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಅಂಬಾನಿಯ ಈ ಮನೆಯ ಮೌಲ್ಯ 3,716.83 ಕೋಟಿ ರೂ ಎನ್ನಲಾಗಿದೆ.

ಕೆಲ ದಿನಗಳ ಹಿಂದೆ ಮುಂಬೈನಲ್ಲೇ ಇರುವ ಅಂಬಾನಿಯ 473.17 ಕೋಟಿ ರು ಮೌಲ್ಯದ ಇನ್ನೊಂದು ಪ್ರಾಪರ್ಟಿಯನ್ನೂ ಇಡಿ ಅಟ್ಯಾಚ್ ಮಾಡಿತ್ತು. ಇದರೊಂದಿಗೆ ಮುಟ್ಟುಗೋಲು ಹಾಕಿಕೊಳ್ಳಲಾದ ರಿಲಾಯನ್ಸ್ ಗ್ರೂಪ್ ಹಾಗೂ ಅನಿಲ್ ಅಂಬಾನಿಯವರ ಒಟ್ಟು ಆಸ್ತಿ ಮೌಲ್ಯ 15,700 ಕೋಟಿ ರೂ ಆಗಿದೆ.

ಇದನ್ನೂ ಓದಿ: ಕಾಶ್ಮೀರದ ಬಜೆಟ್ ನಿಮ್ಮ ಐಎಂಎಫ್ ಸಾಲಕ್ಕಿಂತ ಎರಡು ಪಟ್ಟು ದೊಡ್ಡದು: ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತರಾಟೆ

ಅನಿಲ್ ಅಂಬಾನಿ ಅವರ ರಿಲಾಯನ್ಸ್ ಗ್ರೂಪ್​ನ ಆರ್​ಕಾಂ ಹಾಗೂ ಇತರ ಕಂಪನಿಗಳು ಹಲವು ವರ್ಷಗಳ ಅವಧಿಯಲ್ಲಿ ಬ್ಯಾಂಕುಗಳಿಂದ ಸಾಕಷ್ಟು ಸಾಲಗಳನ್ನು ತೆಗೆದುಕೊಂಡಿವೆ. ಇದರಲ್ಲಿ 40,185 ಕೋಟಿ ರೂ ಸಾಲ ಬಾಕಿ ಉಳಿದಿದೆ. ಸಾಲ ಪಡೆದು ಅಕ್ರಮ ಹಣ ವರ್ಗಾವಣೆ ಮಾಡಿರುವುದು ಇತ್ಯಾದಿ ಹಲವು ಆರೋಪಗಳು ಅಂಬಾನಿ ಹಾಗೂ ಅವರ ಕಂಪನಿಗಳ ಮೇಲಿದೆ. ರಿಲಾಯನ್ಸ್ ಕಮ್ಯೂನಿಕೇಶನ್ ಸಂಸ್ಥೆ ಸಾಲ ತೀರಿಸಲು ಕಾಲಾವಕಾಶ ಕೋರಿದೆ. ಈ ಮಧ್ಯೆ ಪ್ರಕರಣಗಳ ಮೇಲೆ ಪ್ರಕರಣಗಳು ಅಂಬಾನಿಯನ್ನು ಸುತ್ತುವರಿಯುತ್ತಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK