Apple Jobs: ಆ್ಯಪಲ್ ಕರಾಮತ್ತು; ಕರ್ನಾಟಕ ಸೇರಿ ವಿವಿಧೆಡೆ 19 ತಿಂಗಳಲ್ಲಿ 1 ಲಕ್ಷ ನೇರ ಉದ್ಯೋಗ

Apple's Vendors and Ecosystem Create 1 Lakh Direct Jobs: ಆ್ಯಪಲ್​ನ 3 ವೆಂಡರ್​ಗಳು ಹಾಗೂ ವಿವಿಧ ಸರಬರಾಜುದಾರರಿಂದ ಭಾರತದಲ್ಲಿ ಕಳೆದ 19 ತಿಂಗಳಲ್ಲಿ 1ಲಕ್ಷ ನೇರ ಉದ್ಯೋಗಸೃಷ್ಟಿಯಾಗಿದೆ. ಹಾಗೆಯೇ 3 ಲಕ್ಷದಷ್ಟು ಪರೋಕ್ಷ ಉದ್ಯೋಗಗಳೂ ಆಗಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

Apple Jobs: ಆ್ಯಪಲ್ ಕರಾಮತ್ತು; ಕರ್ನಾಟಕ ಸೇರಿ ವಿವಿಧೆಡೆ 19 ತಿಂಗಳಲ್ಲಿ 1 ಲಕ್ಷ ನೇರ ಉದ್ಯೋಗ
ಐಫೋನ್ ತಯಾರಕರು
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 28, 2023 | 3:24 PM

ಬೆಂಗಳೂರು: ಐಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ಉತ್ಪನ್ನಗಳ ತಯಾರಕ ಆ್ಯಪಲ್ ಸಂಸ್ಥೆಯಿಂದ (Apple) ಭಾರತದಲ್ಲಿ ಒಳ್ಳೆಯ ಉದ್ಯೋಗಸೃಷ್ಟಿಯಾಗುತ್ತಿದೆ. ಕಳೆದ 19 ತಿಂಗಳಲ್ಲಿ ಕರ್ನಾಟಕ ಸೇರಿದಂತೆ ಭಾರತದ ವಿವಿಧೆಡೆ 1 ಲಕ್ಷದಷ್ಟು ಹೊಸ ನೇರ ಉದ್ಯೋಗಗಳು ಸೃಷ್ಟಿಯಾಗಿವೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರದ ಸ್ಮಾರ್ಟ್​ಫೋನ್ ಪಿಎಲ್​ಐ ಸ್ಕೀಮ್ (Smartphone PLI Scheme) ಇಂಥದ್ದೊಂದು ಬೆಳವಣಿಗೆಗೆ ಕಾರಣವಾಗಿದೆ.

ಆ್ಯಪಲ್ ಸಂಸ್ಥೆ ತನ್ನ ಉತ್ಪನ್ನಗಳನ್ನು ತಯಾರಿಸಲು ಇತರ ಕಂಪನಿಗಳಿಗೆ ಗುತ್ತಿಗೆ ಕೊಡುತ್ತದೆ. ವಿಸ್ಟ್ರಾನ್, ಫಾಕ್ಸ್​ಕಾನ್, ಪೆಗಾಟ್ರಾನ್ ಎಂಬ 3 ಕಂಪನಿಗಳು ಆ್ಯಪಲ್ ಉತ್ಪನ್ನಗಳನ್ನು ತಯಾರಿಸಲು ಇರುವ ವೆಂಡರ್​ಗಳಾಗಿವೆ. ವಿಸ್ಟ್ರಾನ್ ಕಂಪನಿ ಕೋಲಾರದಲ್ಲಿ ಘಟಕ ಹೊಂದಿದೆ. ಈ ಮೂರು ಕಂಪನಿಗಳು 60 ಸಾವಿರಕ್ಕಿಂತ ಹೆಚ್ಚು ಹೊಸ ನೇರ ಉದ್ಯೋಗಸೃಷ್ಟಿಗೆ ಕಾರಣವಾಗಿವೆ. ಅದರಲ್ಲಿ ಹೆಚ್ಚಿನ ಭಾಗ ಉತ್ಪಾದನೆ ಆಧಾರಿತ ಪ್ರೋತ್ಸಾಹಕ (ಪಿಎಲ್​ಐ) ಯೋಜನೆ ಆರಂಭವಾದ 2021 ಆಗಸ್ಟ್ ನಂತರ ಸೃಷ್ಟಿಯಾಗಿವೆ.

ಇದರ ಜೊತೆಗೆ ಆ್ಯಪಲ್​ನ ಕಾಂಪೊನೆಂಟ್, ಚಾರ್ಜರ್ ಇತ್ಯಾದಿ ಸರಬರಾಜುದಾರರಿರುವ ವ್ಯವಸ್ಥೆಯಿಂದ 40 ಸಾವಿರ ಉದ್ಯೋಗಗಳು ಸೃಷ್ಟಿಯಾಗಿವೆ. ಟಾಟಾ ಎಲೆಕ್ಟ್ರಾನಿಕ್ಸ್, ಸಾಲ್​ಕಾಂಪ್, ಅವರಿ, ಫಾಕ್ಸ್​ಲಿಂಕ್, ಸನ್​ವೋಡಾ, ಜಬಿಲ್ ಮೊದಲಾದ ಕಂಪನಿಗಳು ಆ್ಯಪಲ್​ನ ಇಕೋಸಿಸ್ಟಂನ ಭಾಗಗಳಾಗಿವೆ.

ಭಾರತದಲ್ಲಿ ಐಫೋನ್​ಗಳನ್ನು ತಯಾರಿಸುವ ಮೂರು ವೆಂಡರ್​ಗಳ ಪೈಕಿ ಫಾಕ್ಸ್​ಕಾನ್ ಹೋನ್ ಹಾಯ್ ಎಂಬ ಸಂಸ್ಥೆ 35 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಿದೆ. ಇದು ತಮಿಳುನಾಡಿನಲ್ಲಿ ಘಟಕ ಹೊಂದಿದೆ. ಇದೇ ತಮಿಳುನಾಡಿನಲ್ಲಿರುವ ಪೆಗಾಟ್ರಾನ್ ಕಂಪನಿ 14 ಸಾವಿರ ಮಂದಿಗೆ ಉದ್ಯೋಗ ನೀಡಿದೆ. ಕರ್ನಾಟಕದಲ್ಲಿರುವ ವಿಸ್ಟ್ರಾನ್ ಕಂಪನಿ 12,800 ಮಂದಿಗೆ ಉದ್ಯೋಗ ಕೊಟ್ಟಿದೆ.

ಇದನ್ನೂ ಓದಿಹಿಂದೂಸ್ತಾನ್ 228-201 LWಗೆ ಡಿಜಿಸಿಎ ಸಮ್ಮತಿ; HALನಿಂದ ತಯಾರಾಗಲಿವೆ ಕಮರ್ಷಿಯಲ್ ವಿಮಾನಗಳು

ಆ್ಯಪಲ್ ಸರಬರಾಜುದಾರರ ಪೈಕಿ ಟಾಟಾ ಎಲೆಕ್ಟ್ರಾನಿಕ್ಸ್ ಮತ್ತು ಸಾಲ್​ಕಾಂಪ್ ಕಂಪನಿಗಳು ಅತಿಹೆಚ್ಚು ಉದ್ಯೋಗ ನೀಡಿದೆ.

2020, ಅಕ್ಟೋಬರ್ 6ರಂದು ಸರ್ಕಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಸ್ಮಾರ್ಟ್​ಫೋನ್ ಪಿಎಲ್​ಐ ಸ್ಕೀಮ್ ಅಡಿಯಲ್ಲಿ ಮುಂದಿನ 5 ವರ್ಷದಲ್ಲಿ 2 ಲಕ್ಷ ನೇರ ಉದ್ಯೋಗ ಸೃಷ್ಟಿಯಾಗಬಹುದು ಎಂದು ಅಂದಾಜು ಮಾಡಲಾಗಿತ್ತು. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ. ಇನ್ನೆರಡು ವರ್ಷದಲ್ಲಿ ಇನ್ನೂ 1 ಲಕ್ಷ ಉದ್ಯೋಗ ಸೃಷ್ಟಿಯಾದರೆ ಸರ್ಕಾರ ಇರಿಸಿದ ಗುರಿ ಈಡೇರಿದಂತಾಗುತ್ತದೆ.

ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದಲ್ಲಿ ಒಂದು ನೇರ ಉದ್ಯೋಗ ಇದ್ದರೆ ಮೂರು ಪಟ್ಟು ಪರೋಕ್ಷ ಉದ್ಯೋಗ ಸೃಷ್ಟಿಯಾಗುತ್ತದೆ. ಆ ಲೆಕ್ಕಾಚಾರದಲ್ಲಿ ಕಳೆದ 19 ತಿಂಗಳಲ್ಲಿ 1 ಲಕ್ಷ ನೇರ ಉದ್ಯೋಗ ಮತ್ತು 3 ಲಕ್ಷ ಪರೋಕ್ಷ ಉದ್ಯೋಗಸೃಷ್ಟಿಗೆ ಆ್ಯಪಲ್ ಕಾರಣವಾಗಿದೆ.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್