AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jan Aushadhi Kendra: ಜನೌಷಧ ಕೇಂದ್ರ ತೆರೆಯಲು ಬಯಸಿದ್ದೀರಾ? ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಿ

651 ಜಿಲ್ಲೆಗಳಲ್ಲಿ ಜನೌಷಧ ಕೇಂದ್ರ ತೆರೆಯಲು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಗುರುವಾರವಷ್ಟೇ ಅನುಮೋದನೆ ನೀಡಿತ್ತು. ಇದರ ಬೆನ್ನಲ್ಲೇ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಕೋರಿ ಪ್ರಕಟಣೆ ಬಿಡುಗಡೆ ಮಾಡಿದೆ.

Jan Aushadhi Kendra: ಜನೌಷಧ ಕೇಂದ್ರ ತೆರೆಯಲು ಬಯಸಿದ್ದೀರಾ? ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಿ
ಜನೌಷಧ ಕೇಂದ್ರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jan 13, 2023 | 12:01 PM

Share

ನವದೆಹಲಿ: ದೇಶದಾದ್ಯಂತ 651 ಜಿಲ್ಲೆಗಳಲ್ಲಿ ಜನೌಷಧ ಕೇಂದ್ರ (Jan Aushadhi Kendra) ತೆರೆಯಲು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಕೋರಿದೆ. ಈ ಯೋಜನೆಯು ಸ್ಥಿರ ಮತ್ತು ನಿಯಮಿತ ಆದಾಯ ಗಳಿಕೆಯೊಂದಿಗೆ ಸ್ವ ಉದ್ಯೋಗಕ್ಕೆ ಅತ್ಯುತ್ತಮ ಅವಕಾಶವನ್ನು ಒದಗಿಸುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. 651 ಜಿಲ್ಲೆಗಳಲ್ಲಿ ಜನೌಷಧ ಕೇಂದ್ರ ತೆರೆಯಲು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಗುರುವಾರವಷ್ಟೇ ಅನುಮೋದನೆ ನೀಡಿತ್ತು. ಇದರ ಬೆನ್ನಲ್ಲೇ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಕೋರಿ ಪ್ರಕಟಣೆ ಬಿಡುಗಡೆ ಮಾಡಿದೆ.

ಗುಣಮಟ್ಟದ ಔಷಧ ಕೈಗೆಟಕುವ ದರದಲ್ಲಿ ಎಲ್ಲರಿಗೂ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರಗಳನ್ನು ತೆರೆಯಲು ಯೋಜನೆ ರೂಪಿಸಲಾಗಿದ್ದು, ಈಗಾಗಲೇ 743 ಜಿಲ್ಲೆಗಳಲ್ಲಿ 9,000 ಜನೌಷಧ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಇತ್ತೀಚೆಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು.

ಇದನ್ನೂ ಓದಿ: Jan Aushadhi Kendra: ಜನೌಷಧಿ ಕೇಂದ್ರ ಸ್ಥಾಪನೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ

ಭಾರತೀಯ ಜನೌಷಧ ಕೇಂದ್ರಗಳಲ್ಲಿ ಔಷಧಗಳನ್ನು ಮಾರುಕಟ್ಟೆ ಮಾರಾಟ ದರಕ್ಕಿಂತ ಶೇಕಡಾ 50ರಿಂದ 90ರ ವರೆಗೂ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. 1,759ರಷ್ಟು ಔಷಧಗಳು, 280 ಶಸ್ತ್ರಚಿಕಿತ್ಸೆ ಉಪಕರಣಗಳು ಜನೌಷಧ ಕೇಂದ್ರಗಳಲ್ಲಿ ಲಭ್ಯವಿವೆ.

ಸ್ವ ಉದ್ಯೋಗಕ್ಕೆ ಉತ್ತಮ ಅವಕಾಶ

ಜನೌಷಧ ಕೇಂದ್ರ ಯೋಜನೆಯು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜನರಿಗೆ ಉತ್ತಮ ಸೇವೆ ನೀಡುವುದರ ಜತೆಗೆ ಸ್ವ ಉದ್ಯೋಗಕ್ಕೂ ನೆರವಾಗುತ್ತಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ತಿಳಿಸಿದೆ. ಈ ಯೋಜನೆಯಡಿ ಜನೌಷಧ ಕೇಂದ್ರ ಸ್ಥಾಪನೆಗೆ ಹಣಕಾಸು ನೆರವಿನ ರೂಪದಲ್ಲಿ 5 ಲಕ್ಷ ರೂ. ನೀಡಲಾಗುತ್ತಿದೆ. ಈಶಾನ್ಯ ರಾಜ್ಯಗಳಲ್ಲಿ ಜನೌಷಧ ಕೇಂದ್ರ ತೆರೆಯುವವರಿಗಾಗಿ ಮೂಲಸೌಕರ್ಯ ಭತ್ಯೆಯಾಗಿ ಒಂದು ಬಾರಿಗೆ ಹೆಚ್ಚುವರಿಯಾಗಿ 2 ಲಕ್ಷ ರೂ. ನೀಡಲಾಗುತ್ತದೆ.

ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರಗಳ ಸಂಖ್ಯೆಯನ್ನು 2024ರ ಮಾರ್ಚ್ ಒಳಗಾಗಿ 10,000ಕ್ಕೆ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ. ಗುಣಮಟ್ಟದ ಔಷಧ ಕೈಗೆಟಕುವ ದರದಲ್ಲಿ ಎಲ್ಲರಿಗೂ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ತಿಳಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!