AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್​ನಲ್ಲಿ 1.47 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹ: ಕರ್ನಾಟಕ ನಂಬರ್ 2

2022ರ ಸೆಪ್ಟೆಂಬರ್ ತಿಂಗಳ ಜಿಎಸ್​ಟಿ ಸಂಗ್ರಹದಲ್ಲಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡ 26ರಷ್ಟು ಏರಿಕೆ ಕಂಡಿದೆ. ಇದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

ಸೆಪ್ಟೆಂಬರ್​ನಲ್ಲಿ 1.47 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹ: ಕರ್ನಾಟಕ ನಂಬರ್ 2
ಜಿಎಸ್​ಟಿ ಹೇರಿಕೆ ಖಂಡಿಸಿ ಯಶವಂತಪುರ ಎಪಿಎಂಸಿ ವರ್ತಕರು, ಕಾರ್ಮಿಕರು ಪ್ರತಿಭಟನೆಗೆ ಮುಂದಾಗಿದ್ದಾರೆ (ಸಂಗ್ರಹ ಚಿತ್ರ)
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 02, 2022 | 4:46 PM

ನವದೆಹಲಿ: 2022ರ ಸೆಪ್ಟೆಂಬರ್ ತಿಂಗಳಲ್ಲಿ 1,47,686 ಕೋಟಿ ರೂಪಾಯಿ ಸರಕು ಮತ್ತು ಸೇವೆ ತೆರಿಗೆ (GST) ಸಂಗ್ರಹವಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡ 26ರಷ್ಟು ಏರಿಕೆ ಕಂಡಿದೆ.

ಜಿಎಸ್​ಟಿ ಸಂಗ್ರಹ ಸತತ ಏಳನೇ ತಿಂಗಳು 1.40 ಲಕ್ಷ ಕೋಟಿ ರೂಪಾಯಿ ಗಡಿಯನ್ನು ದಾಟಿದೆ, ಒಟ್ಟು ಕೇಂದ್ರೀಯ ಜಿಎಸ್​ಟಿ 25,271 ಕೋಟಿ ರೂ. ಹಾಗೂ ರಾಜ್ಯ ಜಿಎಸ್​ಟಿ 31,813 ಕೋಟಿ ರೂ. ಮತ್ತು ಏಕೀಕೃತ ಜಿಎಸ್​ಟಿ 80,464 ಕೋಟಿ ರೂ. ಇದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Stock Market: ಅಕ್ಟೋಬರ್ ತಿಂಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದೊಡ್ಡ ಲಾಭ

2021ರ ಸೆಪ್ಟೆಂಬರ್‌ನಲ್ಲಿ 1,17,010 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. 2022ರ ಸೆಪ್ಟೆಂಬರ್ ತಿಂಗಳಲ್ಲಿ 1,47,686 ಕೋಟಿ ಸಂಗ್ರಹವಾಗಿದ್ದು.ಶೇಕಡ 26ರಷ್ಟು ಏರಿಕೆಯಾಗಿದೆ.

ಎರಡನೇ ಸ್ಥಾನದಲ್ಲಿ ಕರ್ನಾಟಕ

21,403 ಕೋಟಿ ರೂ. ಜಿಎಸ್‌ಟಿ ಸಂಗ್ರಹದ ಮೂಲಕ ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿದ್ರೆ, ಕರ್ನಾಟಕ 9,760 ಕೋಟಿ ರೂ. ಸಂಗ್ರಹದೊಂದಿಗೆ ಎರಡನೇ ಸ್ಥಾನದಲ್ಲಿದೆ. 2021 ಸೆಪ್ಟೆಂಬರ್ ತಿಂಗಳಲ್ಲಿ 7,783 ಕೋಟಿ ರೂ. ಸಂಗ್ರಹವಾಗಿತ್ತು.  ಕಳೆದ ವರ್ಷ ಇದೇ ತಿಂಗಳಿಗೆ ಹೋಲಿಸಿದರೆ ಕರ್ನಾಟಕ ಶೇ. 25ರಷ್ಟು ಏರಿಕೆ ಸಾಧಿಸಿದೆ.

ಸೆಪ್ಟೆಂಬರ್‌ ಅಂಕಿ-ಅಂಶವು ತೆರಿಗೆ ಸಂಗ್ರಹದಲ್ಲಿ ಚೇತರಿಕೆ ಮತ್ತು ಜಿಎಸ್‌ಟಿ ನೆಟ್‌ವರ್ಕ್‌222 ಸ್ಥಿರವಾಗಿದೆ ಎಂಬುದನ್ನು ಸೂಚಿಸುತ್ತದೆ. ಸದ್ಯ ಸರಣಿ ಹಬ್ಬಗಳು ಇರುವುದರಿಂದ ಜಿಎಸ್‌ಟಿ ಸಂಗ್ರಹದಲ್ಲಿ ಈ ತಿಂಗಳು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಅಲ್ಲದೇ ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ಕಾರಣದಿಂದ ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ