ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆ: ಆಯುಷ್ಮಾನ್ ಆರೋಗ್ಯ ಕಾರ್ಡ್ ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ನಿರ್ಧಾರ

| Updated By: Rakesh Nayak Manchi

Updated on: Aug 26, 2022 | 4:23 PM

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳನ್ನು ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆ ಮೂಲಕ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್‌ಗಳನ್ನು ರಾಜ್ಯ ಅರೋಗ್ಯ ಯೋಜನೆಗಳಿಗೂ ಬಳಸುವಂತಾಗಲಿದೆ.

ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆ: ಆಯುಷ್ಮಾನ್ ಆರೋಗ್ಯ ಕಾರ್ಡ್ ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ನಿರ್ಧಾರ
ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್
Follow us on

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳನ್ನು ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ನಿರ್ಧರಿಸುವ ಮೂಲಕ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಕೇವಲ ಕೇಂದ್ರ ಸರ್ಕಾರದ ಲೋಗೋವನ್ನು ಹೊಂದಿದ್ದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳು ಮುಂದಿನ ದಿನಗಳಲ್ಲಿ ದೇಶದ ವಿವಿಧ ರಾಜ್ಯಗಳ ಲೋಗೋಗಳು ಕೂಡ ಇರಲಿದೆ. ಅಲ್ಲದೆ ಈ ಕಾರ್ಡ್​ ಅನ್ನು ರಾಜ್ಯ ಆರೋಗ್ಯ ಯೋಜನೆಗಳಿಗೂ ಬಳಸಬಹುದು. ದೆಹಲಿ, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಈ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಿಂದ ದೂರವಿದ್ದು, ತಮ್ಮ ರಾಜ್ಯಗಳಲ್ಲಿ ಇದನ್ನು ಜಾರಿಗೆ ತಂದಿಲ್ಲ. ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳೊಂದಿಗೆ ಚರ್ಚೆ ನಡೆಯುತ್ತಿದ್ದು, ಇನ್ನುಳಿದಂತೆ ಎಲ್ಲಾ ರಾಜ್ಯಗಳಲ್ಲಿ ಆಯುಷ್ಮಾನ್ ಕಾರ್ಡ್​ಗಳನ್ನು ಬಳಸಲಾಗುತ್ತಿದೆ.

ಏನಿದು ಆಯುಷ್ಮಾನ್ ಆರೋಗ್ಯ ಕಾರ್ಡ್?

ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2018ರ ಸೆಪ್ಟೆಂಬರ್​ನಲ್ಲಿ ಪ್ರಾರಂಭಿಸಿದ್ದರು. ದೇಶದ ಪ್ರತಿಯೊಬ್ಬ ನಾಗರಿಕರಿಕನಿಗೂ ಸಾರ್ವತ್ರಿಕ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದರು.

ಆಯುಷ್ಮಾನ್ ಭಾರತ್ ಯೋಜನೆ (PM-JAY) ಅಡಿಯಲ್ಲಿ COVID-19 ನಿಂದಾಗಿ ತಮ್ಮ ಹೆತ್ತವರನ್ನು ಕಳೆದುಕೊಂಡಿರುವ ಎಲ್ಲಾ ಮಕ್ಕಳಿಗೆ ಉಚಿತ ಆರೋಗ್ಯ ವಿಮೆಯನ್ನು ನೀಡಲು ಭಾರತ ಸರ್ಕಾರ ನಿರ್ಧರಿಸಿದೆ. ಅಲ್ಲದೆ ಎಲ್ಲಾ ಮಕ್ಕಳು 5 ಲಕ್ಷ ಆರೋಗ್ಯ ವಿಮಾ ರಕ್ಷಣೆಯೊಂದಿಗೆ ಫಲಾನುಭವಿಗಳಾಗಿ ದಾಖಲಾಗುತ್ತಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ರೋಗಿಗಳು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ