AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನಿಸಿ, ಆಯುಷ್ಮಾನ್ ಕಾರ್ಡ್ ಜೊತೆಗೆ ABHA ಕೂಡ ಇದ್ದರೆ ಪ್ರಯೋಜನ ಹೆಚ್ಚು; ಅದು ಹೇಗೆ, ಇಲ್ಲಿದೆ ಮಾಹಿತಿ

ABJAY and ABHA combination: 2018ರಲ್ಲಿ ಆರಂಭವಾದ ಆಯುಷ್ಮಾನ್ ಭಾರತ್ ಜನ್ ಆರೋಗ್ಯ ಯೋಜನೆ ಅಡಿ ವರ್ಷಕ್ಕೆ 5 ಲಕ್ಷ ರೂವರೆಗೆ ಹೆಲ್ತ್ ಇನ್ಷೂರೆನ್ಸ್ ಕವರೇಜ್ ಇರುತ್ತದೆ. ಇತ್ತೀಚೆಗೆ, 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ಈ ಯೋಜನೆ ಅಡಿ ಅರ್ಹರು ಆಯುಷ್ಮಾನ್ ಕಾರ್ಡ್ ಪಡೆಯಬಹುದು. ಇದರ ಜೊತೆಗೆ ABHA ಹೆಲ್ತ್ ಐಡಿ ಕೂಡ ಇದ್ದರೆ ಹೆಚ್ಚು ಪ್ರಯೋಜನ ಪಡೆಯಬಹುದು.

ಗಮನಿಸಿ, ಆಯುಷ್ಮಾನ್ ಕಾರ್ಡ್ ಜೊತೆಗೆ ABHA ಕೂಡ ಇದ್ದರೆ ಪ್ರಯೋಜನ ಹೆಚ್ಚು; ಅದು ಹೇಗೆ, ಇಲ್ಲಿದೆ ಮಾಹಿತಿ
ಆಯುಷ್ಮಾನ್ ಕಾರ್ಡ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 08, 2025 | 4:29 PM

Share

ಹತ್ತಿರ ಹತ್ತಿರ ಏಳು ವರ್ಷದ ಹಿಂದೆ ಆರಂಭವಾದ ಆಯುಷ್ಮಾನ್ ಭಾರತ್ ಜನ್ ಆರೋಗ್ಯ ಯೋಜನೆ (AB-JAY- Ayushman Bharat Jan Aarogya Yojana) ದುರ್ಬಲ ಸಮುದಾಯಕ್ಕೆ ಬಹಳ ಉಪಯುಕ್ತ ಎನಿಸಿದೆ. ನಿರ್ಗತಿಕರು, ವಿಶೇಷ ಚೇತನರು ಇತ್ಯಾದಿ ದುರ್ಬಲ ಸಮುದಾಯಗಳ ಜೊತೆಗೆ 70 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲಾ ವರ್ಗಗಳ ಹಿರಿಯ ನಾಗರಿಕರಿಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ಈಗ ಈ ಸ್ಕೀಮ್ ಹಿಂದೆಂದಿಗಿಂತಲೂ ಗಮನಾರ್ಹ ಎನಿಸಿದೆ.

ಆಯುಷ್ಮಾನ್ ಭಾರತ್ ಜನ್ ಆರೋಗ್ಯ ಯೋಜನೆ ಅಡಿ ಹಿರಿಯ ನಾಗರಿಕರು ಆಯುಷ್ಮಾನ್ ವಯ ವಂದನ ಕಾರ್ಡ್ ಅಥವಾ ಆಯುಷ್ಮಾನ್ ಭಾರತ್ ಕಾರ್ಡ್ ಪಡೆಯಬಹುದು. ಇದು ವರ್ಷಕ್ಕೆ 5 ಲಕ್ಷ ರೂವರೆಗೆ ಉಚಿತ ಹೆಲ್ತ್ ಇನ್ಷೂರೆನ್ಸ್ ಕವರೇಜ್ ನೀಡುವ ಯೋಜನೆಯಾಗಿದೆ. ಆಧಾರ್ ಕಾರ್ಡ್ ದಾಖಲೆ ಇದ್ದರೆ ಸಾಕು ಈ ಹೆಲ್ತ್ ಇನ್ಷೂರೆನ್ಸ್ ಕಾರ್ಡ್ ಅನ್ನು ಪಡೆಯಬಹುದು.

ಇದನ್ನೂ ಓದಿ: ಮೋದಿ ನೇತೃತ್ವದಲ್ಲಿ ಬದಲಾಗಿದೆ ಭಾರತ: ಹೀನಾ ಖಾನ್, ಸುಭಾಷ್ ಘಾಯ್ ಅನಿಸಿಕೆ

ದೇಶಾದ್ಯಂತ ಈ ಯೋಜನೆ ಅಡಿ ಎನ್​​ಲಿಸ್ಟ್ ಆಗಿರುವ ಸಾವಿರಾರು ಆಸ್ಪತ್ರೆಗಳಲ್ಲಿ ಎಲ್ಲಿ ಬೇಕಾದರೂ ಕಾರ್ಡ್​​ದಾರರು ಉಚಿತವಾಗಿ ಚಿಕಿತ್ಸೆ ಪಡೆಯಲು ಅವಕಾಶ ಸಿಗುತ್ತದೆ. ಆಯುಷ್ಮಾನ್ ಭಾರತ್ ಸ್ಕೀಮ್​​ನ ಆ್ಯಪ್​ಗೆ ಹೋಗಿ ಸುಲಭವಾಗಿ ನೊಂದಾಯಿಸಿ ಕಾರ್ಡ್ ಪಡೆಯಿರಿ.

ಆಯುಷ್ಮಾನ್ ಕಾರ್ಡ್ ಜೊತೆಗೆ ABHA ಇದ್ದರೆ ಮತ್ತಷ್ಟು ಸಹಾಯಕ

ABHA ಎಂದರೆ ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್. ಇದು ಡಿಜಿಟಲ್ ಹೆಲ್ತ್ ಐಡಿಯಾಗಿದೆ. ಪ್ಯಾನ್ ಕಾರ್ಡ್ ಹೇಗೆ ನಿಮ್ಮ ಹಣಕಾಸು ವಹಿವಾಟುಗಳನ್ನು ಒಂದೇ ಕಡೆ ಕ್ರೋಢೀಕರಿಸುತ್ತದೋ, ಯುಎಎನ್ ಹೇಗೆ ನಿಮ್ಮ ಎಲ್ಲಾ ಇಪಿಎಫ್ ದಾಖಲೆಗಳನ್ನು ಒಳಗೊಂಡಿರುತ್ತದೋ, ಹಾಗೆಯೇ, ಆಭಾ ಕಾರ್ಡ್ ಕೂಡ ನಿಮ್ಮ ಎಲ್ಲಾ ಆರೋಗ್ಯ ದಾಖಲೆಗಳನ್ನು ಒಂದೇ ಕಡೆ ಸೇರಿಸುತ್ತದೆ.

ಇದನ್ನೂ ಓದಿ: 500 ರೂ ನೋಟು ನಿಷೇಧ ಆಗುತ್ತೆ ಅನ್ನೋದು ಸುಳ್ಳು ಸುದ್ದಿ; ಪಿಐಬಿ ಫ್ಯಾಕ್ಟ್ ಚೆಕ್ ಸ್ಪಷ್ಟನೆ ಇದು

ನೀವು ಆಸ್ಪತ್ರೆಗೆ ದಾಖಲಾದಾಗೆಲ್ಲಾ ಅಥವಾ ಒಪಿಡಿಗೆ ಹೋದಾಗೆಲ್ಲಾ ಇನ್ಷೂರೆನ್ಸ್ ಕಾರ್ಡ್ ಜೊತೆಗೆ ಆಭಾ ಐಡಿಯನ್ನೂ ನೀಡಬಹುದು. ಇದರಿಂದ ನಿಮ್ಮ ಹೆಲ್ತ್ ಹಿಸ್ಟರಿ ಒಂದೇ ಕಡೆ ದಾಖಲಾಗುತ್ತಾ ಹೋಗುತ್ತದೆ. ನೀವು ಆಸ್ಪತ್ರೆಗೆ ದಾಖಲಾದಾಗ ವೈದ್ಯರಿಗೆ ನಿಮ್ಮ ಮೆಡಿಕಲ್ ಹಿಸ್ಟರಿ ಸುಲಭವಾಗಿ ಸಿಗುತ್ತದೆ. ಇದರಿಂದ ಚಿಕಿತ್ಸೆ ನೀಡುವುದು ಬಹಳ ಸುಲಭವಾಗುತ್ತದೆ.ಹಾಗೆಯೇ, ಆಭಾ ಐಡಿ ಇದ್ದರೆ ನೀವು ಸುಲಭವಾಗಿ ಇನ್ಷೂರೆನ್ಸ್ ಕ್ಲೇಮ್ ಸೆಟಲ್ಮೆಂಟ್ ಮಾಡಬಹುದು.

ಆಭಾ ಐಡಿ ಪಡೆಯುವುದು ಹೇಗೆ?

ನೀವು ಈ ವೆಬ್​​ಸೈಟ್​​ಗೆ ಹೋಗಿ: abha.abdm.gov.in

ಕ್ರಿಯೇಟ್ ಆಭಾ ನಂಬರ್ ಕ್ಲಿಕ್ ಮಾಡಿ. ಇಲ್ಲಿ ಆಧಾರ್ ನಂಬರ್ ಇತ್ಯಾದಿ ವಿವರಗಳನ್ನು ನಮೂದಿಸಿದಾಗ ನಿಮಗೆ 14 ಅಂಕಿಗಳ ಆಭಾ ಐಡಿ ಜನರೇಟ್ ಆಗುತ್ತದೆ. ಇದನ್ನು ನೀವು ಆಯುಷ್ಮಾನ್ ಭಾರತ್ ಸ್ಕೀಮ್​​ನಲ್ಲಿ ಬಳಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್