AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಬಳಿ ಈ ದಾಖಲೆಗಳಿದ್ರೆ ಮೃತ ವ್ಯಕ್ತಿಯ ಬ್ಯಾಂಕ್ ಖಾತೆಗಳ ವಿವರ ಪಡೆಯೋದು ಸುಲಭ

ಈಗ ಪ್ರತಿಯೊಬ್ಬರ ಬಳಿಯೂ ಬ್ಯಾಂಕ್ ಖಾತೆ ಇದ್ದೆ ಇರುತ್ತದೆ. ಆದರೆ ಒಬ್ಬ ವ್ಯಕ್ತಿ ಮೃತ ಪಟ್ಟರೆ, ಆ ವ್ಯಕ್ತಿಯ ಹೆಸರಿನಲ್ಲಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯಬಹುದು. ಇದಕ್ಕೆ ಆ ವ್ಯಕ್ತಿಯ ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ, ಜನ್ಮ ದಿನಾಂಕ ಅಥವಾ ವೋಟರ್ ಐಡಿ ಈ ಎಲ್ಲಾ ಮಾಹಿತಿ ನೀಡಬೇಕಾಗುತ್ತದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ನಿಮ್ಮ ಬಳಿ ಈ ದಾಖಲೆಗಳಿದ್ರೆ ಮೃತ ವ್ಯಕ್ತಿಯ ಬ್ಯಾಂಕ್ ಖಾತೆಗಳ ವಿವರ ಪಡೆಯೋದು ಸುಲಭ
ಸಾಂದರ್ಭಿಕ ಚಿತ್ರImage Credit source: Getty Images
ಸಾಯಿನಂದಾ
|

Updated on: Aug 14, 2026 | 6:42 PM

Share

ಮುಖ್ಯಾಂಶಗಳು

  • ಪ್ರತಿಯೊಬ್ಬರ ಬಳಿಯೂ ಬ್ಯಾಂಕ್‌ ಖಾತೆ ಇದ್ದೆ ಇರುತ್ತದೆ
  • ಮೃತಪಟ್ಟ ವ್ಯಕ್ತಿಯ ಬ್ಯಾಂಕ್‌ ಖಾತೆಯ ಮೊತ್ತವನ್ನು ನಾಮಿನಿ ಪಡೆಯಬಹುದು
  • ಮೃತಪಟ್ಟ ವ್ಯಕ್ತಿಯ ಬ್ಯಾಂಕ್‌ ಖಾತೆಯ ವಿವರಗಳನ್ನು ಯುಡಿಜಿಎಎಂ ಪೋರ್ಟಲ್ ಮೂಲಕ ಪರಿಶೀಲಿಸಬಹುದು

ಪ್ರತಿಯೊಬ್ಬರ ಬಳಿ ಉಳಿತಾಯ ಬ್ಯಾಂಕ್ (Saving Account) , ಚಾಲ್ತಿ ಖಾತೆ ಹೀಗೆ ಒಂದಾದರೂ ಖಾತೆಯನ್ನು ಹೊಂದಿರುತ್ತಾರೆ. ಆದರೆ ಖಾತೆ ಹೊಂದಿದ ವ್ಯಕ್ತಿ ಮೃತ ಪಟ್ಟರೆ ಆ ಖಾತೆಯ ಮೊತ್ತವನ್ನು ನಾಮಿನಿ ಪಡೆಯಬಹುದು. ಆದರೆ ಈ ಖಾತೆಯಲ್ಲಿ ನಾಮಿನಿ ಹೆಸರು ಇದೆಯೋ ಇಲ್ಲವೋ ಎನ್ನುವುದನ್ನು ಆಧರಿಸಿ ಪ್ರಕ್ರಿಯೆ ಬದಲಾಗುತ್ತದೆ. ಮೃತಪಟ್ಟ ವ್ಯಕ್ತಿಯ ಕಾನೂನುಬದ್ಧ ಉತ್ತರಾಧಿಕಾರಿಗಳು, ಕುಟುಂಬ ಸದಸ್ಯರು ಅಥವಾ ನಾಮಿನಿಗಳು ತಮ್ಮ ಖಾತೆಯಲ್ಲಿರುವ ಹಣವನ್ನು ಕ್ಲೈಮ್ ಮಾಡುತ್ತಾರೆ. ಒಂದು ವೇಳೆ ಖಾತೆದಾರರ ಬ್ಯಾಂಕ್ ವಿವರಗಳ ಬಗ್ಗೆ ಮಾಹಿತಿ ಇಲ್ಲದಿದ್ದಲ್ಲಿ ಯುಡಿಜಿಎಎಂ ಪೋರ್ಟಲ್ ಮೂಲಕ ಪರಿಶೀಲಿಸಬಹುದು. ಆದರೆ ಇದಕ್ಕೆ ಮೃತ ವ್ಯಕ್ತಿಯ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಹಾಗೂ ಜನ್ಮ ದಿನಾಂಕದ ಮಾಹಿತಿ ಹಾಗೂ ಇನ್ನಿತ್ತರ ದಾಖಲೆಗಳು ನಿಮ್ಮ ಬಳಿ ಇರಬೇಕು.

ಮೃತ ವ್ಯಕ್ತಿ ಬ್ಯಾಂಕ್ ವಿವರಗಳನ್ನು ತಿಳಿದುಕೊಳ್ಳುವುದು ಹೇಗೆ?

ಹಂತ 1: ಮೊದಲು ನೀವು UDGAM Portal ವೆಬ್ ಸೈಟ್‌ಗೆ ಭೇಟಿ ನೀಡಿ.

ಹಂತ 2: ಮೃತ ವ್ಯಕ್ತಿಯ ಹೆಸರು ಹಾಗೂ ಮೊಬೈಲ್ ಸಂಖ್ಯೆ ನೀಡಿ ಲಾಗಿನ್ ಖಾತೆ ತೆರೆಯಿರಿ.

ಹಂತ 4: ಮೃತ ವ್ಯಕ್ತಿಯ ಪೂರ್ಣ ಹೆಸರನ್ನು ಸರಿಯಾಗಿ ಟೈಪ್ ಮಾಡಿ. ಮೃತ ವ್ಯಕ್ತಿ ಹೊಂದಿದ್ದ ಬ್ಯಾಂಕ್ ಹೆಸರನ್ನು ಆಯ್ಕೆ ಮಾಡಿ.

ಹಂತ 5: ಮೃತ ವ್ಯಕ್ತಿಯ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಜನ್ಮ ದಿನಾಂಕ, ವೋಟರ್ ಐಡಿ, ಪಾಸ್‌ಪೋರ್ಟ್ ಈ ಗುರುತಿನ ಚೀಟಿಯಲ್ಲಿ ಯಾವುದಾದರೂ ಒಂದನ್ನು ಸಲ್ಲಿಸಬೇಕು.

ಹಂತ 6: ಈ ವಿವರಗಳನ್ನು ಸಲ್ಲಿಸಿದ ನಂತರ ಬ್ಯಾಂಕ್ ಖಾತೆಯ ವಿವರಗಳು ಹಾಗೂ ಕ್ಲೈಮ್ ಮಾಡದ ಹಣವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.

ಹಂತ 7: ಪೋರ್ಟಲ್ ನ ಸ್ಕ್ರೀನ್ ಮೇಲೆ ಕಾಣುವ ವಿವರ ಅಥವಾ UDRN ಕೋಡ್‌ನ ಸ್ಕ್ರೀನ್ ಶಾಟ್ ತೆಗೆದಿಟ್ಟುಕೊಳ್ಳಿ

ಹಂತ 8: ಬ್ಯಾಂಕ್ ಶಾಖೆಗೆ ಮರಣ ಪ್ರಮಾಣಪತ್ರ, ವಾರಸುದಾರರ ದಾಖಲೆ ಹಾಗೂ ಕೆವೈಸಿ ಪತ್ರ ಈ ದಾಖಲೆಗಳೊಂದಿಗೆ ಬ್ಯಾಂಕ್ ಹಣ ಕ್ಲೈಮ್ ಮಾಡಲು ಅರ್ಜಿ ಸಲ್ಲಿಸಿ.

ಇದನ್ನೂ ಓದಿ: ಸ್ಮಾಲ್ ಫೈನಾನ್ಸ್ ಬ್ಯಾಂಕ್ vs ಕಾರ್ಪೊರೇಟ್ ಎಫ್​ಡಿ, ಎರಡರಲ್ಲೂ ಶೇ. 8ಕ್ಕಿಂತ ಹೆಚ್ಚು ಬಡ್ಡಿ; ಯಾವುದರಲ್ಲಿ ಹೂಡಿಕೆ ಸೂಕ್ತ?

ಸಾಮಾನ್ಯವಾಗಿ ಕೇಳುವ ಪ್ರಶ್ನೆ ಮತ್ತು ಉತ್ತರ (FAQs)

ಪ್ರಶ್ನೆ: ಮೃತ ವ್ಯಕ್ತಿಯ ಹಣವನ್ನು ಯಾರು ಪಡೆಯಲು ಅರ್ಹರಾಗಿರುತ್ತಾರೆ?

ಉತ್ತರ: ಮೃತ ವ್ಯಕ್ತಿಯ ಹಣವನ್ನು ಪಡೆಯಲು ನಾಮಿನಿ ಅಥವಾ ಕಾನೂನುಬದ್ಧ ಉತ್ತರಾಧಿಕಾರಿಗಳು ಅರ್ಹರಾಗಿರುತ್ತಾರೆ.

ಪ್ರಶ್ನೆ: ಮೃತ ವ್ಯಕ್ತಿಯ ಬ್ಯಾಂಕ್ ವಿವರಗಳನ್ನು ತಿಳಿಯುವುದು ಹೇಗೆ?

ಉತ್ತರ: ಮೃತ ವ್ಯಕ್ತಿಯ ಬ್ಯಾಂಕ್ ವಿವರಗಳನ್ನು ತಿಳಿಯಲು UDGAM Portal ವೆಬ್ ಸೈಟ್ ಗೆ ಭೇಟಿ ನೀಡಿ.

ಪ್ರಶ್ನೆ: ಮೃತ ವ್ಯಕ್ತಿಯ ಬ್ಯಾಂಕ್ ವಿವರಗಳನ್ನು ತಿಳಿಯಲು ಯಾವೆಲ್ಲಾ ದಾಖಲೆಗಳು ಬೇಕು?

ಉತ್ತರ: ಮೃತ ವ್ಯಕ್ತಿಯ ಬ್ಯಾಂಕ್ ವಿವರಗಳನ್ನು ತಿಳಿಯಲು ಅವರ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಜನ್ಮ ದಿನಾಂಕ, ವೋಟರ್ ಐಡಿ, ಪಾಸ್‌ಪೋರ್ಟ್ ಈ ದಾಖಲೆಗಳಲ್ಲಿ ಯಾವುದಾದರೂ ಒಂದಿದ್ದರೆ ಸಾಕು.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ