AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಅಕೌಂಟ್ ಹ್ಯಾಕ್ ಆದ್ರೆ ಮೊದ್ಲು ಈ ಕೆಲಸ ಮಾಡಿ

ಇತ್ತೀಚೆಗಿನ ದಿನಗಳಲ್ಲಿ ಸೈಬರ್ ವಂಚನೆ ಹಾಗೂ ಬ್ಯಾಂಕ್ ಖಾತೆ ಹ್ಯಾಕಿಂಗ್ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ನೀವು ನಿಮ್ಮ ಹುಷಾರಿನಲ್ಲಿ ಇರೋದು ಉತ್ತಮ. ಒಂದು ವೇಳೆ ನಿಮ್ಮ ಬ್ಯಾಂಕ್ ಅಕೌಂಟ್ ಹ್ಯಾಕ್ ಆದ್ರೆ ತಕ್ಷಣವೇ ಈ ಕೆಲಸವನ್ನು ತಪ್ಪದೇ ಮಾಡೋದನ್ನು ಮರೆಯದಿರಿ. ಪಾಸ್‌ ವರ್ಡ್‌ಗಳ ಬದಲಾವಣೆ ಜತೆಗೆ ಸೈಬರ್‌ ಕ್ರೈಮ್‌ಗೆ ದೂರು ದಾಖಲಿಸುವುದು ಮುಖ್ಯ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಬ್ಯಾಂಕ್ ಅಕೌಂಟ್ ಹ್ಯಾಕ್ ಆದ್ರೆ ಮೊದ್ಲು ಈ ಕೆಲಸ ಮಾಡಿ
ಸಾಂದರ್ಭಿಕ ಚಿತ್ರImage Credit source: Getty Images
ಸಾಯಿನಂದಾ
|

Updated on: Jul 21, 2026 | 6:58 PM

Share

ಮುಖ್ಯಾಂಶಗಳು

  • ಇತ್ತೀಚೆಗಿನ ದಿನಗಳಲ್ಲಿ ಜನರು ಡಿಜಿಟಲ್‌ ಬ್ಯಾಂಕಿಂಗ್‌ನನ್ನು ಹೆಚ್ಚು ಅವಲಂಬಿಸಿದ್ದಾರೆ
  • ಡಿಜಿಟಲ್ ಬ್ಯಾಂಕಿಂಗ್ ಶುರುವಾದ ಬಳಿಕವಂತೂ ಹ್ಯಾಕರ್ಸ್‌ಗಳ ಹಾವಳಿ ಹೆಚ್ಚಾಗಿದೆ
  • ಬ್ಯಾಂಕ್ ಅಕೌಂಟ್‌ ಹ್ಯಾಕ್ ಆದ್ರೆ ಸೈಬರ್ ಅಪರಾಧ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿ

ಇತ್ತೀಚೆಗಿನ ದಿನಗಳಲ್ಲಿ ಬ್ಯಾಂಕ್‌ಗೆ ತೆರಳಿ ವ್ಯವಹಾರ ಮಾಡುವುದಕ್ಕಿಂತ ಡಿಜಿಟಲ್ ಬ್ಯಾಂಕಿಂಗ್‌ನನ್ನು  (Digital Banking) ಹೆಚ್ಚು ಅವಲಂಬಿಸಿಕೊಂಡಿದ್ದಾರೆ. ಇತ್ತ ಡಿಜಿಟಲ್ ಬ್ಯಾಂಕಿಂಗ್ ಶುರುವಾದ ಬಳಿಕವಂತೂ ಹ್ಯಾಕರ್ಸ್ ಗಳ ಹಾವಳಿ ಹೆಚ್ಚಾಗಿದೆ. ಅಕೌಂಟ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಹಣವನ್ನು ದೋಚುತ್ತಿದ್ದಾರೆ. ಅಕೌಂಟ್ ಹ್ಯಾಕ್ ಆದ್ರೆ ನೀವು ಈ ಕೆಲವು ಸಲಹೆಗಳನ್ನು ಅನುಸರಿಸುವುದು ಸುರಕ್ಷತೆ ದೃಷ್ಟಿಯಿಂದ ಉತ್ತಮ.

ಬ್ಯಾಂಕ್ ಅಕೌಂಟ್‌ ಹ್ಯಾಕ್ ಆದ್ರೆ ನೀವು ಮೊದ್ಲು ಈ ಕೆಲಸ ಮಾಡಿ

ಹಂತ 1: ನಿಮ್ಮ ಬ್ಯಾಂಕಿನ ಅಧಿಕೃತ ಗ್ರಾಹಕ ಸೇವೆಗೆ ಕರೆ ಮಾಡಿ ಹಾಗೂ ನಿಮ್ಮ ಖಾತೆ ಹ್ಯಾಕ್ ಆಗಿರುವ ಬಗ್ಗೆ ಮಾಹಿತಿ ನೀಡಿ.

ಹಂತ 2: ನಿಮ್ಮ ಡೆಬಿಟ್, ಕ್ರೆಡಿಟ್ ಕಾರ್ಡ್‌ಗಳು ಹಾಗೂ ನೆಟ್‌ಬ್ಯಾಂಕಿಂಗ್ ನ್ನು ತಕ್ಷಣ ವೇ ಬ್ಲಾಕ್ ಮಾಡಿ.

ಹಂತ 3: ನಿಮ್ಮ ಎಲ್ಲಾ ಆನ್‌ಲೈನ್ ಬ್ಯಾಂಕಿಂಗ್ ಪಾಸ್‌ವರ್ಡ್‌ಗಳು ಮತ್ತು ಇಮೇಲ್ ಪಾಸ್‌ವರ್ಡ್‌ಗಳನ್ನು ತಕ್ಷಣವೇ ಬದಲಾಯಿಸಿ.

ಹಂತ 4: ನಿಮ್ಮ ಮೊಬೈಲ್ ಗೆ ಬಂದ ವಂಚನೆ ಸಂದೇಶಗಳು, ನಿಮ್ಮ ಖಾತೆಯಿಂದ ಹಣ ಕಡಿತಗೊಂಡ ವಿವರಗಳು ಹಾಗೂ ಹ್ಯಾಕರ್ ಗಳು ಕರೆ ಮಾಡಿದ ಮೊಬೈಲ್ ನಂಬರ್ ಗಳನ್ನು ಇಟ್ಟುಕೊಳ್ಳಿ.

ಹಂತ 5: ನಿಮ್ಮ ಹತ್ತಿರದ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ಭೇಟಿ ನೀಡಿ ಲಿಖಿತ ದೂರನ್ನು ದಾಖಲಿಸಿ.

ಇದನ್ನೂ ಓದಿ: UPI without Internet: ಟ್ಯಾಪ್ ಟು ಪೇ, ಹೊಸ ಯುಪಿಐ ಫೀಚರ್; ಇಂಟರ್ನೆಟ್ ಇಲ್ಲದ ಫ್ಲೈಟ್, ಅಂಡರ್​ಗ್ರೌಂಡ್ ಮೆಟ್ರೋಗೂ ಹಣ ಪಾವತಿಸಿ

ಸಾಮಾನ್ಯವಾಗಿ ಕೇಳುವ ಪ್ರಶ್ನೆ ಮತ್ತು ಉತ್ತರ (FAQs)

ಪ್ರಶ್ನೆ: ಬ್ಯಾಂಕ್ ಖಾತೆ ಹ್ಯಾಕ್ ಆಗದಂತೆ ಎಚ್ಚರ ವಹಿಸುವುದು ಹೇಗೆ?

ಉತ್ತರ: ಬ್ಯಾಂಕ್ ಖಾತೆಗೆ ದೊಡ್ಡಕ್ಷರ, ಸಂಖ್ಯೆಗಳು ಹಾಗೂ ಚಿಹ್ನೆಗಳನ್ನು ಒಳಗೊಂಡ ಬಲವಾದ ಪಾಸ್ ವರ್ಡ್ ಬಳಸಿ

ಪ್ರಶ್ನೆ: ಬ್ಯಾಂಕ್ ಅಕೌಂಟ್ ಹ್ಯಾಕ್ ಆದ್ರೆ ಮೊದ್ಲು ಏನು ಮಾಡ್ಬೇಕು?

ಉತ್ತರ: ನಿಮ್ಮ ಆನ್‌ಲೈನ್ ಬ್ಯಾಂಕಿಂಗ್ ಪಾಸ್‌ವರ್ಡ್‌ಗಳು ಮತ್ತು ಇಮೇಲ್ ಪಾಸ್‌ವರ್ಡ್‌ಗಳನ್ನು ತಕ್ಷಣವೇ ಬದಲಾಯಿಸಿ.

ಪ್ರಶ್ನೆ: ಬ್ಯಾಂಕ್ ಅಕೌಂಟ್ ಹ್ಯಾಕ್ ಆದಾಗ ಸೈಬರ್ ಕ್ರೈಂಗೆ ದೂರು ಸಲ್ಲಿಸುವುದು ಹೇಗೆ?

ಉತ್ತರ: ಬ್ಯಾಂಕ್ ಅಕೌಂಟ್ ಹ್ಯಾಕ್ ಆದಾಗ ರಾಷ್ಟ್ರೀಯ ಸೈಬರ್ ಅಪರಾಧ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ