AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಎಷ್ಟು ಬ್ಯಾಂಕ್ ಅಕೌಂಟ್ ತೆರೆಯಲು ಅವಕಾಶವಿದೆ

ಕೆಲವರು ತಮ್ಮ ಕೈಯಲ್ಲಿ ದುಡ್ಡು ಉಳಿಯಲ್ಲ ಎಂದು ಹಣವನ್ನು ಸುರಕ್ಷಿತವಾಗಿ ಉಳಿಸಲು ಉಳಿತಾಯ ಖಾತೆ ತೆರೆಯುತ್ತಾರೆ. ಇನ್ನು ಅನೇಕರು ಉಳಿತಾಯ, ಸಂಬಳ ಹೀಗೆ ವಿವಿಧ ಕಾರಣಗಳಿಗಾಗಿ ಮೂರು ನಾಲ್ಕು ಖಾತೆಗಳನ್ನು ಹೊಂದಿರುತ್ತಾರೆ. ಆದರೆ ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಇಷ್ಟೇ ಖಾತೆಯನ್ನು ಹೊಂದಿರಬೇಕು ಎಂಬ ಬಗ್ಗೆ ಯಾವುದೇ ಮಿತಿಯಿಲ್ಲ. ಈ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಎಷ್ಟು ಬ್ಯಾಂಕ್ ಅಕೌಂಟ್ ತೆರೆಯಲು ಅವಕಾಶವಿದೆ
ಸಾಂದರ್ಭಿಕ ಚಿತ್ರImage Credit source: Priyanka Parashar/Mint via Getty Images
ಸಾಯಿನಂದಾ
|

Updated on: Aug 05, 2026 | 5:34 PM

Share

ಮುಖ್ಯಾಂಶಗಳು

  • ಕೆಲವರು ಒಂದಲ್ಲ ಎರಡು ಮೂರು ಬ್ಯಾಂಕ್ ಖಾತೆಗಳನ್ನು ಹೊಂದಿರುತ್ತಾರೆ
  • ಆರ್‌ಬಿಐ ನಿಯಮದ ಪ್ರಕಾರ ಒಬ್ಬ ವ್ಯಕ್ತಿ ಎಷ್ಟು ಬ್ಯಾಂಕ್ ಖಾತೆಗಳನ್ನಾದರೂ ಹೊಂದಬಹುದು
  • ಪ್ರತಿ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಟ್ಟುಕೊಳ್ಳುವುದು ಮುಖ್ಯ

ಸಾಮಾನ್ಯವಾಗಿ ಎಲ್ಲರ ಬಳಿ ಒಂದಾದರೂ ಸೇವಿಂಗ್ ಅಕೌಂಟ್ (Saving account) ಇದ್ದೇ ಇರುತ್ತದೆ. ಆದರೆ ಕೆಲವರು ಒಂದಲ್ಲ ಎರಡು ಮೂರು ಬ್ಯಾಂಕ್ ಖಾತೆಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಹೊಂದಿರುತ್ತಾರೆ. ಒಬ್ಬ ವ್ಯಕ್ತಿ ತನ್ನ ಹೆಸರಿನಲ್ಲಿ ಎಷ್ಟು ಬ್ಯಾಂಕ್ ಖಾತೆಗಳನ್ನು ಹೊಂದಬಹುದು ಎಂಬುದು ಹೆಚ್ಚಿನವರಿಗೆ ತಿಳಿದೇ ಇಲ್ಲ. ಆದರೆ ವ್ಯಕ್ತಿಯೂ ತನ್ನ ಹೆಸರಿನಲ್ಲಿ ಎಷ್ಟು ಬೇಕಾದರೂ ಬ್ಯಾಂಕ್ ಖಾತೆಗಳನ್ನು ತೆರೆಯಲು ಅವಕಾಶವಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳ ಪ್ರಕಾರ ಒಬ್ಬ ವ್ಯಕ್ತಿ ಎಷ್ಟು ಬ್ಯಾಂಕ್ ಖಾತೆಗಳನ್ನಾದರೂ ಹೊಂದಬಹುದು. ಆರ್‌ಬಿಐ ಯಾವುದೇ ನಿರ್ಬಂಧ ಹಾಗೂ ಮಿತಿಗಳನ್ನು ಹಾಕಿಲ್ಲ. ಪ್ರತಿ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳುವುದು ಮುಖ್ಯ. ಹೆಚ್ಚು ಖಾತೆಗಳಿದ್ದರೆ ಹಣ ನಿರ್ವಹಣೆ ಮಾಡುವುದು ಕಷ್ಟ ಹಾಗೂ ಕನಿಷ್ಠ ಬ್ಯಾಲೆನ್ಸ್ ಇಟ್ಟುಕೊಳ್ಳಲು ಕಷ್ಟವಾಗಬಹುದು.

ನಿಮ್ಮ ಬಳಿಯಿರುವ ಎಲ್ಲಾ ಖಾತೆಗಳಿಗೆ ನಿಮ್ಮ ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹೆಚ್ಚಿನ ಖಾತೆಗಳಿದ್ದರೆ ವಾರ್ಷಿಕ ನಿರ್ವಹಣಾ ಶುಲ್ಕ ಮತ್ತು ಎಟಿಎಂ ಶುಲ್ಕಗಳು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಹಣಕಾಸಿನ ನಿರ್ವಹಣೆ ಹಾಗೂ ನಿಮ್ಮ ಅಗತ್ಯತೆಗಳಿಗೆ ಅನುಗುಣವಾಗಿ ನಿರ್ದಿಷ್ಟ ಬ್ಯಾಂಕ್ ಖಾತೆಗಳನ್ನು ಹೊಂದುವುದು ಉತ್ತಮ.

ಇದನ್ನೂ ಓದಿ: ಯುನಿಟಿ ಬ್ಯಾಂಕ್​ನಲ್ಲಿ ಸೇವಿಂಗ್ಸ್ ಅಕೌಂಟ್​ಗೆಯೇ ಸಿಗುತ್ತೆ ಶೇ. 7 ಬಡ್ಡಿ; ಶೇ. 8.5ರವರೆಗೆ ಎಫ್​ಡಿ ದರ

ಸಾಮಾನ್ಯವಾಗಿ ಕೇಳುವ ಪ್ರಶ್ನೆ ಮತ್ತು ಉತ್ತರ (FAQs)

ಪ್ರಶ್ನೆ: ಒಬ್ಬ ವ್ಯಕ್ತಿ ಎಷ್ಟು ಬ್ಯಾಂಕ್ ಖಾತೆಗಳನ್ನು ಹೊಂದಬಹುದು?

ಉತ್ತರ: ಒಬ್ಬ ವ್ಯಕ್ತಿ ಎಷ್ಟು ಬ್ಯಾಂಕ್ ಖಾತೆಗಳನ್ನಾದರೂ ಹೊಂದಬಹುದು.

ಪ್ರಶ್ನೆ: ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿರುವವರಿಗೆ ಆರ್ ಬಿಐ ಹೇಳುವುದೇನು?

ಉತ್ತರ: ಆರ್ ಬಿಐ ನಿಯಮದ ಪ್ರಕಾರ ಪ್ರತಿ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳಬೇಕು.

ಪ್ರಶ್ನೆ: ಉಳಿತಾಯ ಖಾತೆ ಎಂದರೇನು?

ಉತ್ತರ: ಉಳಿತಾಯ ಖಾತೆ ಸುರಕ್ಷಿತವಾದ ಖಾತೆಯಾಗಿದ್ದು, ಸಣ್ಣ ಅಥವಾ ದೊಡ್ಡ ಮೊತ್ತವನ್ನು ಠೇವಣಿ ಮಾಡಬಹುದಾಗಿದೆ.

‌ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?