Bank strike: ಬ್ಯಾಂಕ್ ಕೆಲಸಗಳನ್ನು ತಿಂಗಳ ಕೊನೆಗೆ ಇಟ್ಟುಕೊಳ್ಳಬೇಡಿ; ಮಾಸಾಂತ್ಯದಲ್ಲಿ ಬ್ಯಾಂಕ್ ಮುಷ್ಕರ

ವಾರಕ್ಕೆ ಐದೇ ದಿನ ಕೆಲಸ, ಬ್ಯಾಂಕ್ ನೌಕರರ ಪಿಂಚಣಿ ವ್ಯವಸ್ಥೆ ನವೀಕರಣ, ವೇತನ ಪರಿಷ್ಕರಣೆ, ಎನ್​ಪಿಎಸ್ ರದ್ದತಿ ಸೇರಿದಂತೆ ಹಲವು ಬೇಡಿಕೆಗಳನ್ನು ಬ್ಯಾಂಕ್ ನೌಕರರು ಮುಂದಿಟ್ಟಿದ್ದಾರೆ.

Bank strike: ಬ್ಯಾಂಕ್ ಕೆಲಸಗಳನ್ನು ತಿಂಗಳ ಕೊನೆಗೆ ಇಟ್ಟುಕೊಳ್ಳಬೇಡಿ; ಮಾಸಾಂತ್ಯದಲ್ಲಿ ಬ್ಯಾಂಕ್ ಮುಷ್ಕರ
ಸಾಂದರ್ಭಿಕ ಚಿತ್ರImage Credit source: PTI
Follow us
TV9 Web
| Updated By: Ganapathi Sharma

Updated on: Jan 14, 2023 | 1:39 PM

ನವದೆಹಲಿ: ವಾರದಲ್ಲಿ ಐದು ದಿನ ಮಾತ್ರ ಕೆಲಸ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್​ ಒಕ್ಕೂಟಗಳ ಸಂಘಟನೆ ‘ಯುನೈಟೆಡ್ ಫೋರಮ್​ ಆಫ್ ಬ್ಯಾಂಕ್ ಯೂನಿಯನ್ಸ್ (UFBU)’ ಇದೇ ತಿಂಗಳ 30 ಮತ್ತು 31ರಂದು ದೇಶದಾದ್ಯಂತ ಬ್ಯಾಂಕ್ ಮುಷ್ಕರಕ್ಕೆ (Bank strike) ಕರೆ ನೀಡಿದೆ. ನಮ್ಮ ಬೇಡಿಕೆಗಳಿಗೆ ಸಂಬಂದಿಸಿದ ಪತ್ರಗಳಿಗೆ ‘ಇಂಡಿಯನ್ ಬ್ಯಾಂಕರ್ಸ್ ಅಸೋಸಿಯೇಷನ್​ನಿಂದ (Indian Banks’ Association) ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಜನವರಿ 30 ಮತ್ತು 31ರಂದು ಮುಷ್ಕರ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಕಟಾಚಲಂ ತಿಳಿಸಿದ್ದಾರೆ. ಮುಂಬೈಯಲ್ಲಿ ನಡೆದ ಸಭೆಯ ಬಳಿಕ ಮುಷ್ಕರ ನಡೆಸುವ ತೀರ್ಮಾನಕ್ಕೆ ಬರಲಾಯಿತು ಎಂದು ಅವರು ಹೇಳಿದ್ದಾರೆ.

ವಾರಕ್ಕೆ ಐದೇ ದಿನ ಕೆಲಸ, ಬ್ಯಾಂಕ್ ನೌಕರರ ಪಿಂಚಣಿ ವ್ಯವಸ್ಥೆ ನವೀಕರಣ, ವೇತನ ಪರಿಷ್ಕರಣೆ, ಎನ್​ಪಿಎಸ್ ರದ್ದತಿ ಸೇರಿದಂತೆ ಹಲವು ಬೇಡಿಕೆಗಳನ್ನು ಬ್ಯಾಂಕ್ ನೌಕರರು ಮುಂದಿಟ್ಟಿದ್ದಾರೆ.

ಸತತ ನಾಲ್ಕು ದಿನ ಕಾರ್ಯನಿರ್ವಹಿಸಲ್ಲ ಬ್ಯಾಂಕ್​ಗಳು

ಬ್ಯಾಂಕ್ ನೌಕರರ ಮುಷ್ಕರದಿಂದಾಗಿ ತಿಂಗಳ ಕೊನೆಯಲ್ಲಿ ಬ್ಯಾಂಕಿಂಗ್ ವಹಿವಾಟುಗಳಿಗೆ ತೊಡಕು ಉಂಟಾಗುವ ಸಾಧ್ಯತೆ ಇದೆ. ಜನವರಿ 28 ನಾಲ್ಕನೇ ಶನಿವಾರ ಆಗಿರುವುದರಿಂದ ಬ್ಯಾಂಕ್​ ರಜೆ ಇರುತ್ತದೆ. ಮರುದಿನ ಭಾನುವಾರ ಹೇಗೂ ರಜೆ. 30 ಮತ್ತು 31ರಂದು ಮುಷ್ಕರ ನಡೆದರೆ ಒಟ್ಟು ನಾಲ್ಕು ದಿನ ಬ್ಯಾಂಕಿಂಗ್ ವಹಿವಾಟು ಸ್ಥಗಿತಗೊಳ್ಳಲಿದೆ. ಪರಿಣಾಮವಾಗಿ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯಗೊಳ್ಳಳಿದೆ. ಇಂಟರ್​ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಇತ್ಯಾದಿ ಆನ್​ಲೈನ್ ವಹಿವಾಟುಗಳ ಮೇಲೆ ದೊಡ್ಡ ಪರಿಣಾಮವಾಗದು.

ಈ ಹಿಂದೆ 2022ರ ನವೆಂಬರ್​​ 19ರಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘವು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ, ಬಳಿಕ ಮುಷ್ಕರ ನಿರ್ಧಾರವನ್ನು ಹಿಂಪಡೆದಿತ್ತು. ಕೈಗಾರಿಕಾ ವಿವಾದ ಕಾಯ್ದೆ ಉಲ್ಲಂಘನೆ, ವರ್ಗಾವಣೆ ಮೂಲಕ ನೌಕರರಿಗೆ ಕಿರುಕುಳ, ಕಾರ್ಮಿಕ ಸಂಘಟನೆಗಳ ಮೇಲೆ ದಾಳಿ ಹೆಚ್ಚಳ ಮತ್ತು ಸಿಎಸ್‌ಬಿ ಬ್ಯಾಂಕ್‌ನಲ್ಲಿ ವೇತನ ಪರಿಷ್ಕರಣೆ ನಿರಾಕರಣೆ ಸೇರಿದಂತೆ ಹಲವು ವಿಷಯಗಳ ಕುರಿತ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಲಾಗಿಗತ್ತು. ಬ್ಯಾಂಕ್ ಉದ್ಯೋಗಿಗಳ ಸಂಘ ಮತ್ತು ಬ್ಯಾಂಕ್‌ಗಳು ದ್ವಿಪಕ್ಷೀಯವಾಗಿ ಸಮಸ್ಯೆಗಳನ್ನು ಪರಿಹರಿಸಲು ಒಪ್ಪಿಕೊಂಡಿದ್ದರಿಂದ ಮುಷ್ಕರ ಹಿಂಪಡೆಯಲಾಗಿತ್ತು. ಇದೀಗ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಬ್ಯಾಂಕ್ ನೌಕರರು ಪಟ್ಟುಹಿಡಿದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ