AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ನಡೆಯಬೇಕಿದ್ದ 3 ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿಕೆ!

ವಾರದಲ್ಲಿ 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿ ಸೇರಿ ಹಲವು ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ 3 ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ಹಾಗೂ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನಡುವೆ ಭಾನುವಾರ ನಡೆದ ಸುದೀರ್ಘ ಚರ್ಚೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಸಧ್ಯಕ್ಕೆ ಗ್ರಾಹಕರಿಗೆ ಸಮಾಧಾನ ದೊರಕಿದೆ.

ಇಂದಿನಿಂದ ನಡೆಯಬೇಕಿದ್ದ 3 ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿಕೆ!
ಇಂದಿನಿಂದ ನಡೆಯಬೇಕಿದ್ದ 3 ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿಕೆ! Image Credit source: mint
ಭಾವನಾ ಹೆಗಡೆ
|

Updated on:Sep 28, 2026 | 6:51 AM

Share

ಮುಖ್ಯಾಂಶಗಳು

  • ಐಬಿಎ ಮಾತುಕತೆ ಯಶಸ್ವಿ; 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆ.
  • ಶನಿವಾರ ರಜೆ ಬೇಡಿಕೆಗೆ ಉನ್ನತ ಮಟ್ಟದ ಸಮಿತಿ ತಕ್ಷಣ ರಚನೆ.
  • ದೇಶಾದ್ಯಂತ ಬ್ಯಾಂಕಿಂಗ್ ಸೇವೆ ಎಂದಿನಂತೆ ಲಭ್ಯ, ಗ್ರಾಹಕರಿಗೆ ದೊಡ್ಡ ರಿಲೀಫ್.

ಬೆಂಗಳೂರು, ಸೆಪ್ಟೆಂಬರ್ 28: ಬ್ಯಾಂಕ್ ಉದ್ಯೋಗಿಗಳ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ಹಾಗೂ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನಡುವೆ ನಡೆದ ಸುದೀರ್ಘ ಸಮಾಲೋಚನೆ ಯಶಸ್ವಿಯಾಗಿದ್ದು, ಇಂದಿನಿಂದ (ಸೆ.28) ನಡೆಯಬೇಕಿದ್ದ 3 ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಇದರಿಂದಾಗಿ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಮುಂದುವರಿಯಲಿದ್ದು, ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಗೆ ಸಮಾಧಾನ ಸಿಕ್ಕಂತಾಗಿದೆ.

ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ನಿರ್ಧಾರ

ವಾರದಲ್ಲಿ 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುಎಫ್‌ಬಿಯು ಸೆಪ್ಟೆಂಬರ್ 28 ರಿಂದ 30 ರವರೆಗೆ ಮುಷ್ಕರಕ್ಕೆ ಕರೆ ನೀಡಿತ್ತು. ಭಾನುವಾರ ನಡೆದ ಮಹತ್ವದ ಸಭೆಯಲ್ಲಿ ನೌಕರರ ಬೇಡಿಕೆಗಳನ್ನು ಈಡೇರಿಸುವ ಕುರಿತು ಧನಾತ್ಮಕ ಒಪ್ಪಂದಕ್ಕೆ ಬರಲಾಗಿದ್ದು, ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ನಿರ್ಧರಿಸಲಾಗಿದೆ.

ಸಭೆಯಲ್ಲಿ ನಡೆದ ಪ್ರಮುಖ ಒಪ್ಪಂದಗಳು

  • ರಜೆ ಘೋಷಣೆಗೆ ಉನ್ನತ ಮಟ್ಟದ ಸಮಿತಿ: ಎಲ್ಲಾ ಶನಿವಾರಗಳನ್ನು ರಜಾದಿನಗಳಾಗಿ ಘೋಷಿಸುವ ಬೇಡಿಕೆಯ ಕುರಿತು ಚರ್ಚಿಸಲು ಐಬಿಎ ಮತ್ತು ಯುಎಫ್‌ಬಿಯು ಪ್ರತಿನಿಧಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ತಕ್ಷಣವೇ ರಚಿಸಲಾಗುತ್ತದೆ. ಈ ಸಮಿತಿಯು ಪರ್ಯಾಯ ಮಾರ್ಗಗಳನ್ನು ಕಂಡುಕೊಂಡು, ಗ್ರಾಹಕರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಎಲ್ಲರಿಗೂ ಸಮ್ಮತವಾಗುವ ಪರಿಹಾರ ಕಂಡುಕೊಳ್ಳಲಿದೆ.
  • ಪಿಎಲ್‌ಐ (PLI) ಯೋಜನೆಯಲ್ಲಿ ಬದಲಾವಣೆ: ಸ್ಕೇಲ್ IV ಮತ್ತು ಅದಕ್ಕಿಂತ ಹೆಚ್ಚಿನ ಅಧಿಕಾರಿಗಳಿಗೆ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಕ ಯೋಜನೆ ಕುರಿತು ಒಕ್ಕೂಟಗಳು ಎತ್ತಿರುವ ಆಕ್ಷೇಪಣೆಗಳನ್ನು ಪರಿಹರಿಸಲು, ಐಬಿಎ ಅಗತ್ಯ ಮಾರ್ಪಾಡುಗಳನ್ನು ಸರ್ಕಾರಕ್ಕೆ ಪ್ರಸ್ತಾಪಿಸಲಿದೆ.
  • ಬಾಕಿ ಬೇಡಿಕೆಗಳ ಶೀಘ್ರ ಇತ್ಯರ್ಥ: 2024ರ ಮಾರ್ಚ್ 8 ಸಭೆಯ ನಡಾವಳಿಯಲ್ಲಿ ಪಟ್ಟಿ ಮಾಡಲಾದ ಬಾಕಿ ಸಮಸ್ಯೆಗಳನ್ನು ಶೀಘ್ರದಲ್ಲಿಯೇ ಚರ್ಚಿಸಿ ಇತ್ಯರ್ಥಪಡಿಸಲು ಎರಡೂ ಕಡೆಯವರು ಸಮ್ಮತಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವಾಲಯವು ಸಾರ್ವಜನಿಕ ಬ್ಯಾಂಕಿಂಗ್ ಸೇವೆಗಳಿಗೆ ಅಡಚಣೆಯಾಗದಂತೆ ಮಾತುಕತೆಯ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಮನವಿ ಮಾಡಿತ್ತು. ಮುಷ್ಕರ ಹಿಂಪಡೆದಿರುವುದರಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳು, ಖಾಸಗಿ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಸೇವೆಗಳು ಎಂದಿನಂತೆ ದೊರೆಯಲಿವೆ ಎಂದು ಯೂನಿಯನ್ ಫೋರಂ ತನ್ನ ಅಧಿಕೃತ ಸುತ್ತೋಲೆಯಲ್ಲಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:37 am, Mon, 28 September 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್