AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank strike: ಬ್ಯಾಂಕ್​ ಕೆಲಸ ಇಂದೇ ಮುಗಿಸಿಕೊಳ್ಳಿ; ಮುಂದಿನ ವಾರ 2 ದಿನ ಮುಷ್ಕರ

ನಾಳೆ ಅಂದರೆ, ಜನವರಿ 28 ನಾಲ್ಕನೇ ಶನಿವಾರ ಆಗಿರುವುದರಿಂದ ಬ್ಯಾಂಕ್​ ರಜೆ ಇರುತ್ತದೆ. ಮರುದಿನ ಭಾನುವಾರ ಹೇಗೂ ರಜೆ. 30 ಮತ್ತು 31ರಂದು ಮುಷ್ಕರ ನಡೆದರೆ ಒಟ್ಟು ನಾಲ್ಕು ದಿನ ಬ್ಯಾಂಕಿಂಗ್ ವಹಿವಾಟು ಸ್ಥಗಿತಗೊಳ್ಳಲಿದೆ. ಪರಿಣಾಮವಾಗಿ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯಗೊಳ್ಳುವ ಸಾಧ್ಯತೆ ಇದೆ.

Bank strike: ಬ್ಯಾಂಕ್​ ಕೆಲಸ ಇಂದೇ ಮುಗಿಸಿಕೊಳ್ಳಿ; ಮುಂದಿನ ವಾರ 2 ದಿನ ಮುಷ್ಕರ
ಸಾಂದರ್ಭಿಕ ಚಿತ್ರImage Credit source: PTI
Ganapathi Sharma
| Edited By: |

Updated on:Jan 27, 2023 | 12:01 PM

Share

ನವದೆಹಲಿ: ವಾರದಲ್ಲಿ ಐದು ದಿನ ಮಾತ್ರ ಕೆಲಸ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್​ ಒಕ್ಕೂಟಗಳ ಸಂಘಟನೆ ‘ಯುನೈಟೆಡ್ ಫೋರಮ್​ ಆಫ್ ಬ್ಯಾಂಕ್ ಯೂನಿಯನ್ಸ್ (UFBU)’ ಸೋಮವಾರ ಮತ್ತು ಮಂಗಳವಾರ (ಜನವರಿ 30, 31) ದೇಶದಾದ್ಯಂತ ಬ್ಯಾಂಕ್ ಮುಷ್ಕರಕ್ಕೆ (Bank strike) ಕರೆ ನೀಡಿದೆ. ಮುಷ್ಕರದ ಪರಿಣಾಮ ವಿವಿಧ ಶಾಖೆಗಳಲ್ಲಿ ಬ್ಯಾಂಕಿಂಗ್​ ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾ (SBI) ಈಗಾಗಲೇ ಗ್ರಾಹಕರಿಗೆ ಮಾಹಿತಿ ನೀಡಿದೆ. ಸಾಮಾನ್ಯ ಕಾರ್ಯಾಚರಣೆಗೆ ತೊಂದರೆಯಾಗದಂತೆ ಶಾಖೆಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದಾಗ್ಯೂ ಕೆಲವು ಸಿಬ್ಬಂದಿ ಮುಷ್ಕರದಿಂದ ಪ್ರಭಾವಿತರಾಗಬಹುದು. ಪರಿಣಾಮವಾಗಿ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಮುಷ್ಕರದಿಂದಾಗಿ ಎಷ್ಟು ನಷ್ಟ ಆಗಬಹುದು ಎಂಬುದನ್ನು ಈಗಲೇ ಅಂದಾಜಿಸಲಾಗದು ಎಂದು ಎಸ್​​ಬಿಐ ತಿಳಿಸಿದೆ.

ಬ್ಯಾಂಕ್ ಮುಷ್ಕರ ಯಾಕೆ?

ವಾರಕ್ಕೆ ಐದು ದಿನ ಮಾತ್ರ ಕೆಲಸ, ಬ್ಯಾಂಕ್ ನೌಕರರ ಪಿಂಚಣಿ ವ್ಯವಸ್ಥೆ ನವೀಕರಣ, ಎಲ್ಲ ಕೇಡರ್​​ಗಳಲ್ಲಿ ನೇಮಕಾತಿ ಮಾಡಿಕೊಳ್ಳಬೇಕು, ವೇತನ ಪರಿಷ್ಕರಣೆ, ಎನ್​ಪಿಎಸ್ ರದ್ದತಿ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಯುನೈಟೆಡ್ ಫೋರಮ್​ ಆಫ್ ಬ್ಯಾಂಕ್ ಯೂನಿಯನ್ಸ್’ ಮುಷ್ಕರಕ್ಕೆ ಕರೆ ನೀಡಿದೆ.

ನಾಲ್ಕು ದಿನ ಕಾರ್ಯನಿರ್ವಹಿಸಲ್ಲ ಬ್ಯಾಂಕ್​ಗಳು

ನಾಳೆ ಅಂದರೆ, ಜನವರಿ 28 ನಾಲ್ಕನೇ ಶನಿವಾರ ಆಗಿರುವುದರಿಂದ ಬ್ಯಾಂಕ್​ ರಜೆ ಇರುತ್ತದೆ. ಮರುದಿನ ಭಾನುವಾರ ಹೇಗೂ ರಜೆ. 30 ಮತ್ತು 31ರಂದು ಮುಷ್ಕರ ನಡೆದರೆ ಒಟ್ಟು ನಾಲ್ಕು ದಿನ ಬ್ಯಾಂಕಿಂಗ್ ವಹಿವಾಟು ಸ್ಥಗಿತಗೊಳ್ಳಲಿದೆ. ಪರಿಣಾಮವಾಗಿ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯಗೊಳ್ಳುವ ಸಾಧ್ಯತೆ ಇದೆ. ಇಂಟರ್​ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಇತ್ಯಾದಿ ಆನ್​ಲೈನ್ ವಹಿವಾಟುಗಳ ಮೇಲೆ ಹೆಚ್ಚಿನ ಪರಿಣಾಮವಾಗದು.

ಇದನ್ನೂ ಓದಿ: Adani Stocks: ಹಿಂಡನ್​ಬರ್ಗ್ ಹೊಡೆತದಿಂದ ಇನ್ನೂ ಚೇತರಿಸದ ಅದಾನಿ ಸಮೂಹ; ಷೇರು ಮೌಲ್ಯ ಶೇ 20 ಕುಸಿತ

ಈ ಹಿಂದೆ 2022ರ ನವೆಂಬರ್​​ 19ರಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘವು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ, ಬಳಿಕ ಮುಷ್ಕರ ನಿರ್ಧಾರವನ್ನು ಹಿಂಪಡೆದಿತ್ತು. ಕೈಗಾರಿಕಾ ವಿವಾದ ಕಾಯ್ದೆ ಉಲ್ಲಂಘನೆ, ವರ್ಗಾವಣೆ ಮೂಲಕ ನೌಕರರಿಗೆ ಕಿರುಕುಳ, ಕಾರ್ಮಿಕ ಸಂಘಟನೆಗಳ ಮೇಲೆ ದಾಳಿ ಹೆಚ್ಚಳ ಮತ್ತು ಸಿಎಸ್‌ಬಿ ಬ್ಯಾಂಕ್‌ನಲ್ಲಿ ವೇತನ ಪರಿಷ್ಕರಣೆ ನಿರಾಕರಣೆ ಸೇರಿದಂತೆ ಹಲವು ವಿಷಯಗಳ ಕುರಿತ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಲಾಗಿಗತ್ತು. ಬ್ಯಾಂಕ್ ಉದ್ಯೋಗಿಗಳ ಸಂಘ ಮತ್ತು ಬ್ಯಾಂಕ್‌ಗಳು ದ್ವಿಪಕ್ಷೀಯವಾಗಿ ಸಮಸ್ಯೆಗಳನ್ನು ಪರಿಹರಿಸಲು ಒಪ್ಪಿಕೊಂಡಿದ್ದರಿಂದ ಮುಷ್ಕರ ಹಿಂಪಡೆಯಲಾಗಿತ್ತು. ಇದೀಗ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಬ್ಯಾಂಕ್ ನೌಕರರು ಪಟ್ಟುಹಿಡಿದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:53 am, Fri, 27 January 23

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು