AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank strike: ಸೇವಾ ಭದ್ರತೆಗೆ ಆಗ್ರಹಿಸಿ ನವೆಂಬರ್ 19ಕ್ಕೆ ಬ್ಯಾಂಕ್​ ನೌಕರರ ಮುಷ್ಕರ

ಸೇವಾ ಭದ್ರತೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ನವೆಂಬರ್ 19ರಂದು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ.

Bank strike: ಸೇವಾ ಭದ್ರತೆಗೆ ಆಗ್ರಹಿಸಿ ನವೆಂಬರ್ 19ಕ್ಕೆ ಬ್ಯಾಂಕ್​ ನೌಕರರ ಮುಷ್ಕರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 25, 2022 | 2:43 PM

Share

ನವದೆಹಲಿ: ಸೇವಾ ಭದ್ರತೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ (AIBEA) ನವೆಂಬರ್ 19ರಂದು ದೇಶದಾದ್ಯಂತ ಮುಷ್ಕರಕ್ಕೆ (Bank strike) ಕರೆ ನೀಡಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಸೇವಾ ಭದ್ರತೆಗೆ ಆಗ್ರಹಿಸಿ ಮತ್ತು ಒಕ್ಕೂಟದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತಿರುವ ಉದ್ಯೋಗಿಗಳನ್ನು ಗುರಿಯಾಗಿಸುವುದನ್ನು ವಿರೋಧಿಸಿ ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಉದ್ಯೋಗಿಗಳ ಮೇಲೆ ದಾಳಿಗಳು ಹೆಚ್ಚುತ್ತಿವೆ. ಇವುಗಳ ಹಿಂದೆ ಬಲವಾದ ಕಾರಣವಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಹೇಳಿದ್ದಾರೆ.

‘ಈ ದಾಳಿಗಳ ಹಿಂದೆ ಎಳೆಯೊಂದಿದೆ, ಹುಚ್ಚುತನವಿದೆ. ಇದನ್ನು ನಾವು ಪ್ರತಿಭಟಿಸಬೇಕಿದೆ. ಒಟ್ಟಾರೆಯಾಗಿ ಈ ಉದ್ದೇಶಿತ ದಾಳಿಗಳನ್ನು ತಡೆಯಲು ಬ್ಯಾಂಕ್ ಉದ್ಯೋಗಿಗಳ ಸಂಘದ ಮಟ್ಟದಲ್ಲಿ ನಾವು ಪ್ರಯತ್ನಿಸಬೇಕಿದೆ’ ಎಂದು ವೆಂಕಟಾಚಲಂ ಹೇಳಿದ್ದಾರೆ.

ಇದನ್ನೂ ಓದಿ
Image
Rishi Sunak: ರಿಷಿ ಸುನಕ್​ರ​ ಸಿರಿವಂತ ಪತ್ನಿ ಮತ್ತು ಅತ್ತೆ-ಮಾವ ಬಗ್ಗೆ ಇಲ್ಲಿದೆ ವಿವರ
Image
Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ; ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ
Image
Muhurat Trading: ಉತ್ತಮ ಗಳಿಕೆಯೊಂದಿಗೆ ಮುಹೂರ್ತ ಟ್ರೇಡಿಂಗ್ ಮುಗಿಸಿದ ನಿಫ್ಟಿ, ಸೆನ್ಸೆಕ್ಸ್, ಇಲ್ಲಿದೆ ಗಳಿಕೆ ವಿವರ
Image
Festive Season: ಹಬ್ಬದ ಅವಧಿಯಲ್ಲಿ ಮಿತಿಮೀರಿದ ಖರ್ಚಾಗುತ್ತಿದೆಯೇ? ತಡೆಯಲು ಇಲ್ಲಿದೆ 5 ಟಿಪ್ಸ್

ಇದನ್ನೂ ಓದಿ: WhatsApp Down: ಭಾರತದ ಹಲವು ಭಾಗಗಳಲ್ಲಿ ವಾಟ್ಸ್​ಆ್ಯಪ್ ಡೌನ್

ಒಕ್ಕೂಟದ ನಾಯಕರನ್ನು ಸೊನಾಲಿ ಬ್ಯಾಂಕ್, ಎಂಯುಎಫ್​ಜಿ ಬ್ಯಾಂಕ್, ಫೆಡೆರಲ್ ಬ್ಯಾಂಕ್ ಹಾಗೂ ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್​ಗಳಿಂದ ವಜಾಗೊಳಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬ್ಯಾಂಕ್ ಆಫ್ ಮಹಾರಾಷ್ಟ್ರದಂಥ ಬ್ಯಾಂಕ್​ಗಳು ವ್ಯಾಪಾರಿ ಒಕ್ಕೂಟದ ಹಕ್ಕುಗಳನ್ನು ನಿರಾಕರಿಸುತ್ತಿವೆ. ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ ಹಾಗೂ ಐಡಿಬಿಐ ಬ್ಯಾಂಕ್​ಗಳು ಅನೇಕ ಬ್ಯಾಂಕಿಂಗ್ ಚಟುವಟಿಕೆಗಳನ್ನು ಹೊರಗುತ್ತಿಗೆ ನೀಡುತ್ತಿವೆ ಎಂದು ಅವರು ಹೇಳಿದ್ದಾರೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ‘ಜಂಗಲ್ ರಾಜ್’ ಇದ್ದು, ಅದರ ಮ್ಯಾನೇಜ್‌ಮೆಂಟ್ ವಿವೇಚನಾರಹಿತ ವರ್ಗಾವಣೆಗಳನ್ನು ಮಾಡುತ್ತಿದೆ ಎಂದು ಅವರು ಟೀಕಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿ 3,300 ಕ್ಲರ್ಕ್​ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: Motor Insurance: ಮೊದಲ ಬೈಕ್ ಅಥವಾ ಕಾರು ಖರೀದಿಗೆ ಮುಂದಾಗಿದ್ದೀರಾ? ಮೋಟಾರು ವಿಮೆಗೆ ಸಂಬಂಧಿಸಿದ ಈ ಐದು ಅಂಶ ಗಮನದಲ್ಲಿರಲಿ

ರಾಷ್ಟ್ರವ್ಯಾಪಿ ಮುಷ್ಕರಕ್ಕೂ ಮುನ್ನ ಒಕ್ಕೂಟದ ಸದಸ್ಯರು ವಿವಿಧ ರೀತಿಯ ಪ್ರತಿಭಟನೆಗಳನ್ನೂ ನಡೆಸಲಿದ್ದಾರೆ ಎಂದು ವೆಂಕಟಾಚಲಂ ತಿಳಿಸಿದ್ದಾರೆ.

ಈ ಹಿಂದೆ ಖಾಸಗೀಕರಣ ವಿರೋಧಿಸಿ ಮಾರ್ಚ್ 28-29ರಂದು ವಿವಿಧ ಕಾರ್ಮಿಕ ಸಂಘಟನೆಗಳು ನಡೆಸಿದ್ದ ಮುಷ್ಕರದಲ್ಲಿ ವಿವಿಧ ಬ್ಯಾಂಕ್​ಗಳ ಸಿಬ್ಬಂದಿಯೂ ಭಾಗಿಯಾಗಿದ್ದರು. ಪರಿಣಾಮವಾಗಿ ಎಸ್​ಬಿಐ ಸೇರಿದಂತೆ ಹಲವು ಬ್ಯಾಂಕ್​ಗಳಲ್ಲಿ ವಹಿವಾಟಿಗೆ ಸಮಸ್ಯೆಯಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ