AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Banking Frauds: ಆನ್​ಲೈನ್ ಮಾರುಕಟ್ಟೆಯಲ್ಲಿ ವ್ಯವಹರಿಸುವಾಗ ಹೀಗೆ ಮೋಸ ಹೋಗಬೇಡಿ

ಆನ್​ಲೈನ್ ಮಾರುಕಟ್ಟೆಯಲ್ಲಿ ವ್ಯವಹರಿಸುವಾಗ ವಂಚಕರು ಹೇಗೆ ನಿಮ್ಮ ಬ್ಯಾಂಕ್ ಖಾತೆಯಿಂದ ಹಣ ಎಗರಿಸಬಹುದು? ನೀವೇನು ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

Banking Frauds: ಆನ್​ಲೈನ್ ಮಾರುಕಟ್ಟೆಯಲ್ಲಿ ವ್ಯವಹರಿಸುವಾಗ ಹೀಗೆ ಮೋಸ ಹೋಗಬೇಡಿ
ಸಾಂದರ್ಭಿಕ ಚಿತ್ರImage Credit source: RBI
TV9 Web
| Updated By: Ganapathi Sharma|

Updated on: Oct 26, 2022 | 1:23 PM

Share

ಬ್ಯಾಂಕಿಂಗ್​ ಮತ್ತು ಹಣಕಾಸು ಅಕ್ರಮಗಳಿಗೆ (Banking Frauds) ಸಂಬಂಧಿಸಿ ಜಾಗೃತಿ ಮೂಡಿಸುವ ಸಲುವಾಗಿ ಈಗಾಗಲೇ ಅನೇಕ ಕ್ರಮಗಳನ್ನು ಕೈಗೊಂಡಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಚಿತ್ರಕಥೆ ಮೂಲಕ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಪುಸ್ತಕವೊಂದನ್ನು ಕೆಲ ಸಮಯ ಹಿಂದೆ ಹೊರತಂದಿದೆ. ವಂಚನೆಯ ನಲವತ್ತು ಮುಖಗಳನ್ನು ಅದರಲ್ಲಿ ಪರಿಚಯಿಸಿ ‘ರಾಜು ಮತ್ತು ನಲ್ವತ್ತು ಕಳ್ಳರು (Raju and the forty thieves)’ ಎಂಬ ಶೀರ್ಷಿಕೆಯಡಿ ಜಾಗೃತಿ ಮೂಡಿಸುವ ಯತ್ನವನ್ನು ಅದರಲ್ಲಿ ಮಾಡಲಾಗಿದೆ.

ಆನ್​ಲೈನ್ ಮಾರುಕಟ್ಟೆಯಲ್ಲಿ ವ್ಯವಹರಿಸುವಾಗ ವಂಚಕರು ಹೇಗೆ ನಿಮ್ಮ ಬ್ಯಾಂಕ್ ಖಾತೆಯಿಂದ ಹಣ ಎಗರಿಸಬಹುದು? ನೀವೇನು ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ರಾಜು ಮತ್ತು ನಲ್ವತ್ತು ಕಳ್ಳರು ಭಾಗ – 3

ಇದನ್ನೂ ಓದಿ
Image
Petrol Price on October 26: ನೊಯ್ಡಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕುಸಿತ, ಲಕ್ನೋದಲ್ಲಿ ಏರಿಕೆ; ನಿಮ್ಮ ನಗರದಲ್ಲಿ ಇಂದಿನ ದರವೆಷ್ಟು?
Image
Gold Price Today: ಚಿನ್ನದ ದರ ತುಸು ಇಳಿಕೆ, ಹೆಚ್ಚಿದ ಬೆಳ್ಳಿ ಬೆಲೆ, ಪ್ರಮುಖ ನಗರಗಳ ದರ ವಿವರ ಇಲ್ಲಿದೆ
Image
CCI Penalty on Google: ಗೂಗಲ್​ಗೆ ಮತ್ತೊಮ್ಮೆ ಭಾರಿ ದಂಡ ವಿಧಿಸಿದ ಸಿಸಿಐ, ಕಾರಣ ಇಲ್ಲಿದೆ
Image
ರಿಷಿ ಸುನಕ್ ಪತ್ನಿ ಅಕ್ಷತಾ ಮೂರ್ತಿ ಇನ್ಫೋಸಿಸ್​ನಿಂದ ಈ ವರ್ಷ ಪಡೆದ ಲಾಭಾಂಶವೆಷ್ಟು?

ರಾಜು ಎಂಬ ವ್ಯಕ್ತಿ ಸೋಫಾ ಸೆಟ್ ಅನ್ನು ಮಾರಾಟ ಮಾಡಲು ಉದ್ದೇಶಿಸಿರುತ್ತಾರೆ. ಅದಕ್ಕಾಗಿ ಸೆಕೆಂಡ್ ಹ್ಯಾಂಡ್ ವಸ್ತುಗಳ ಮಾರಾಟ ಮಾಡುವ ಆನ್​ಲೈನ್ ಮಾರ್ಕೆಟಿಂಗ್ ತಾಣವೊಂದರಲ್ಲಿ ಜಾಹೀರಾತು ಪೋಸ್ಟ್ ಮಾಡುತ್ತಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ 15,000 ರೂ. ನೀಡಿ ಸೋಫಾ ಸೆಟ್ ಖರೀದಿಸುವುದಾಗಿ ಹೇಳುತ್ತಾರೆ. ರಾಜು ಅವರಿಗೆ ಬಹಳ ಸಂತಸವಾಗುತ್ತದೆ. ನಂತರ ಏನಾಯ್ತು ನೋಡಿ…

ಅಪರಿಚಿತ: ಸೋಫಾ ಸೆಟ್ ಅನ್ನು ಕೊಂಡೊಯ್ಯುವುದಕ್ಕೂ ಮುನ್ನ ನಿಮಗೆ ಆನ್​ಲೈನ್ ಮೂಲಕ ಹಣ ವರ್ಗಾಯಿಸುತ್ತೇನೆ

ರಾಜು: ಒಕೆ, ಫೈನ್

ಅಪರಿಚಿತ: ದಯಮಾಡಿ ನಿಮ್ಮ ಬ್ಯಾಂಕ್ ಖಾತೆ ಸಂಖ್ಯೆ ನೀಡಿ

ರಾಜು: ನನ್ನ ಬ್ಯಾಂಕ್ ಖಾತೆ ಸಂಖ್ಯೆ 123 xxxx 67

ಅಪರಿಚಿತ: ಒಟ್ಟು ಮೊತ್ತ ಪಾವತಿಸುವ ಮುನ್ನ ಖಾತೆಯನ್ನು ಪರಿಶೀಲಿಸುವುದಕ್ಕಾಗಿ 10 ರೂ. ಪಾವತಿಸುತ್ತೇನೆ.

10 ರೂ. ಕಳುಹಿಸಿದ ಅಪರಿಚಿತ ವ್ಯಕ್ತಿ ಒಟ್ಟು ಮೊತ್ತ ಪಾವತಿಸುವುದಕ್ಕಾಗಿ ಬ್ಯಾಂಕ್ ಖಾತೆ ರಾಜು ಅವರದ್ದು ಹೌದೇ ಎಂಬುದನ್ನು ಖಾತರಿಪಡಿಸಿಕೊಳ್ಳುತ್ತಾರೆ.

ರಾಜು: ಹಣ ಬಂದಿದೆ

ಬಳಿಕ ಅಪರಿಚಿತ ವ್ಯಕ್ತಿ 14,990 ರೂ. ಸ್ವೀಕರಿಸಲು ರಾಜುಗೆ ಯುಪಿಐ ವಿನಂತಿ ಕಳುಹಿಸುತ್ತಾರೆ.

ರಾಜು: ಅದು ನನ್ನ ಪಿನ್ ಸಂಖ್ಯೆ ನಮೂದಿಸಲು ಕೇಳುತ್ತದೆಯಲ್ಲಾ? ನಮೂದಿಸಬೇಕೇ?

ಅಪರಿಚಿತ: ಬ್ಯಾಂಕ್ ನಿಯಮಗಳ ಪ್ರಕಾರ ದೊಡ್ಡ ಮೊತ್ತದ ಹಣ ವರ್ಗಾವಣೆಗೆ ಪಿನ್ ಸಂಖ್ಯೆ ನಮೂದಿಸಬೇಕು.

ರಾಜು ಪಿನ್ ಸಂಖ್ಯೆ ನಮೂದಿಸುತ್ತಾರೆ. ತಕ್ಷಣ ಅವರ ಖಾತೆಯಿಂದ 14,990 ರೂ. ಕಡಿತವಾಗುತ್ತದೆ. ರಾಜುಗೆ ಮೋಸ ಹೋದ ಬಗ್ಗೆ ಅರಿವಾಗುತ್ತದೆ. ತಕ್ಷಣವೇ ಬ್ಯಾಂಕ್​ಗೆ ತೆರಳಿ ದೂರು ದಾಖಲಿಸುತ್ತಾರೆ.

ನಿಮಗಿದು ತಿಳಿದಿರಲಿ…

ಅಪರಿಚಿತರೊಂದಿಗೆ ಬ್ಯಾಂಕ್ ಖಾತೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಹಂಚಿಕೊಳ್ಳಬೇಡಿ. ಒಟಿಪಿ ಕೂಡ ಶೇರ್ ಮಾಡಬೇಡಿ. ಯುಪಿಐ ಮೂಲಕ ಹಣ ಸ್ವೀಕರಿಸಲು ಪಿನ್ ಸಂಖ್ಯೆ ನಮೂದಿಸುವ ಅಗತ್ಯವಿಲ್ಲ ಎಂಬುದನ್ನು ತಿಳಿದಿರಿ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ