AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBC: 40 ಕೋಟಿ ಆದಾಯ ಮುಚ್ಚಿಟ್ಟಿದ್ದು ಹೌದೆಂದು ತಪ್ಪೊಪ್ಪಿಕೊಂಡ ಬಿಬಿಸಿ; ಪರಿಷ್ಕೃತ ಐಟಿಆರ್ ಸಲ್ಲಿಸುವಂತೆ ಐಟಿ ಇಲಾಖೆ ಸೂಚನೆ

Tax Evasion Truth of BBC: ಬಿಬಿಸಿಯ ಭಾರತೀಯ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ ಘಟನೆ ಹಿಂದೆ ರಾಜಕೀಯ ಷಡ್ಯಂತ್ರ ಇದೆ ಎನ್ನುವ ಆರೋಪ ನಿರಾಧಾರ ಎಂಬುದಕ್ಕೆ ಸಾಕ್ಷಿಯಾಗಿ ಸ್ವತಃ ಬಿಬಿಸಿಯೇ ಇದೀಗ ತನ್ನಿಂದ ತೆರಿಗೆ ವಂಚನೆ ಆಗಿರುವುದಾಗಿ ತಪ್ಪೊಪ್ಪಿಕೊಂಡಿದೆ.

BBC: 40 ಕೋಟಿ ಆದಾಯ ಮುಚ್ಚಿಟ್ಟಿದ್ದು ಹೌದೆಂದು ತಪ್ಪೊಪ್ಪಿಕೊಂಡ ಬಿಬಿಸಿ; ಪರಿಷ್ಕೃತ ಐಟಿಆರ್ ಸಲ್ಲಿಸುವಂತೆ ಐಟಿ ಇಲಾಖೆ ಸೂಚನೆ
ಬಿಬಿಸಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 06, 2023 | 12:46 PM

Share

ನವದೆಹಲಿ: ಬಿಬಿಸಿ ತಾನು 40 ಕೋಟಿ ರೂನಷ್ಟು ಆದಾಯವನ್ನು ಮುಚ್ಚಿಟ್ಟಿದ್ದು ಹೌದು ಎಂಬ ವಿಚಾರವನ್ನು ಒಪ್ಪಿಕೊಂಡಿದ್ದು ಈ ಬಗ್ಗೆ ಕೇಂದ್ರೀಯ ನೇರ ತೆರಿಗೆ ಮಂಡಳಿಗೆ (ಸಿಬಿಡಿಟಿ) ಇಮೇಲ್ ಮೂಲಕ ತಿಳಿಸಿದೆ. ಈ ಬಗ್ಗೆ ತಮಗೆ ಇಬ್ಬರು ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಕೆಲ ತಿಂಗಳ ಹಿಂದೆ ಬಿಬಿಸಿಯ ಭಾರತೀಯ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ ಘಟನೆ ಹಿಂದೆ ರಾಜಕೀಯ ಷಡ್ಯಂತ್ರ ಇದೆ ಎನ್ನುವ ಆರೋಪ ನಿರಾಧಾರ ಎಂಬುದು ಈ ಬೆಳವಣಿಗೆಯಿಂದ ಸಾಬೀತಾಗಿದೆ. ಬಿಬಿಸಿ ವಿರುದ್ಧ ತೆರಿಗೆ ವಂಚನೆ ನಡೆದಿರುವ ಬಗ್ಗೆ ಐಟಿಗೆ ಬಲವಾದ ಮಾಹಿತಿ ಇದ್ದದ್ದರಿಂದಲೇ ರೇಡ್ ನಡೆದಿತ್ತು ಎಂದು ಹೇಳಲಾಗಿದೆ.

40 ಕೋಟಿ ರೂನಷ್ಟು ಆದಾಯ ಮುಚ್ಚಿಟ್ಟಿರುವ ಬಗ್ಗೆ ಇಮೇಲೆ ಬರೆದಿರುವ ಬಿಬಿಸಿಗೆ ಐಟಿ ಇಲಾಖೆ ಉತ್ತರಿಸಿದ್ದು, ಇಮೇಲ್ ಕಳುಹಿಸಿದರೆ ಅದು ಕಾನೂನಾತ್ಮಕ ಎನಿಸುವುದಿಲ್ಲ. ಪರಿಷ್ಕೃತ ಐಟಿ ರಿಟರ್ನ್ಸ್ ಅರ್ಜಿ ಸಲ್ಲಿಸಬೇಕು. ಎಲ್ಲಾ ಬಾಕಿ ತೆರಿಗೆ, ಬಡ್ಡಿ, ದಂಡ ಇತ್ಯಾದಿ ಹಲವು ಕೋಟಿ ರೂ ಮೊತ್ತವನ್ನು ಪಾವತಿಸಬೇಕಾಗುತ್ತದೆ ಎಂದು ಆ ಪತ್ರಿಕಾ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿByju’s vs Lenders: ಸಾಲಗಾರರಿಂದ ಹಿಂಸೆ; ಅಮೆರಿಕದ ಕೋರ್ಟ್ ಮೆಟ್ಟಿಲೇರಿದ ಬೆಂಗಳೂರಿನ ಬೈಜೂಸ್

ದೇಶದ ಕಾನೂನು ಎಲ್ಲರಿಗೂ ಒಂದೇ. ಮಾಧ್ಯಮ ಸಂಸ್ಥೆ ಎಂದೋ ಅಥವಾ ವಿದೇಶೀ ಸಂಸ್ಥೆ ಎಂದೋ ವಿಶೇಷ ವಿನಾಯಿತಿ ಇರುವುದಿಲ್ಲ. ನಿಯಮದ ಪ್ರಕಾರ ಬಿಬಿಸಿ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕು. ಈ ಪ್ರಕರಣವು ತಾರ್ಕಿಕವಾಗಿ ಅಂತ್ಯಗೊಳ್ಳುವವರೆಗೂ ಐಟಿ ಇಲಾಖೆಯು ಕ್ರಮ ಕೈಗೊಳ್ಳಲು ಸಿದ್ಧವಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿಯಲ್ಲಿ ತಿಳಿಸಲಾಗಿದೆ.

ಫೆಬ್ರುವರಿಯಲ್ಲಿ ಬಿಬಿಸಿ ಕಚೇರಿಗಳ ಮೇಲೆ ದಾಳಿ

ಬಿಬಿಸಿ ಅಥವಾ ಬ್ರಿಟಿಷ್ ಬ್ರಾಡ್​ಕ್ಯಾಸ್ಟಿಂಗ್ ಕಾರ್ಪೊರೇಷನ್ ಸಂಸ್ಥೆ ಬ್ರಿಟನ್ ಮೂಲದ್ದಾಗಿದ್ದು, ಭಾರತದಲ್ಲಿ ಕಚೇರಿ ಹೊಂದಿದೆ. 2023 ಫೆಬ್ರುವರಿ ತಿಂಗಳಲ್ಲಿ ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡಗಳು ಸರ್ವೆ ಕೈಗೊಂಡಿದ್ದವು. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ಐಟಿ ಇಲಾಖೆ ಹೇಳಿದ್ದರೂ, ಈ ಬೆಳವಣಿಗೆಯಲ್ಲಿ ರಾಜಕೀಯ ಪಿತೂರಿ ಇದೆ ಎಂದು ವಿಪಕ್ಷಗಳು ದೂರಿದ್ದವು.

ಇದನ್ನೂ ಓದಿAir Tickets Fare: ಸುಮ್ಮನೆ ವಿಮಾನ ಟಿಕೆಟ್ ದರ ಏರಿಸದಿರಿ: ಏರ್​ಲೈನ್ಸ್ ಸಂಸ್ಥೆಗಳಿಗೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಲಹೆ

ಗುಜರಾತ್ ಗಲಭೆ ವಿಚಾರವಾಗಿ ಬಿಬಿಸಿ ಡಾಕ್ಯುಮೆಂಟರಿ ತಯಾರಿಸಿ ಬಿಡುಗಡೆ ಮಾಡಿದ್ದರಿಂದ ಸೇಡಿನ ಕ್ರಮವಾಗಿ ಐಟಿ ರೇಡ್ ನಡೆದಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಬಿಬಿಸಿ ತಾನು ಯಾವುದೇ ತೆರಿಗೆ ವಂಚನೆ ಎಸಗಿಲ್ಲ ಎಂದು ಆಗ ಸಮರ್ಥಿಸಿಕೊಂಡಿತ್ತು. ಈಗ ನಾಲ್ಕೈದು ತಿಂಗಳ ಬಳಿಕ ಬಿಬಿಸಿ ತಾನು 40 ಕೋಟಿ ರೂನಷ್ಟು ಆದಾಯ ಮರೆಮಾಚಿದ್ದು ಹೌದು ಎಂಬುದಾಗಿ ತಪ್ಪೊಪ್ಪಿಕೊಂಡಿರುವುದು ಗಮನಾರ್ಹ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!