AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ಟೋಬರ್ 11-12ಕ್ಕೆ ಉದ್ಯಮಿಯಾಗು-ಉದ್ಯೋಗ ಕೊಡು, ಕೈಗಾರಿಕಾ ಅದಾಲತ್‍ಗೆ ಚಾಲನೆ

ಉದ್ಯಮಿಯಾಗು ಹಾಗೂ ಉದ್ಯಮ ಕೊಡು ಎಂಬ ಅಭಿಯಾನವನ್ನು ಅಕ್ಟೋಬರ್ 11, 12ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಅಕ್ಟೋಬರ್ 11-12ಕ್ಕೆ ಉದ್ಯಮಿಯಾಗು-ಉದ್ಯೋಗ ಕೊಡು, ಕೈಗಾರಿಕಾ ಅದಾಲತ್‍ಗೆ ಚಾಲನೆ
ಸಚಿವ ಮುರುಗೇಶ್​ ನಿರಾಣಿಯವರು ಭಾಗವಹಿಸಿದ್ದ ಸಭೆ
TV9 Web
| Edited By: |

Updated on: Sep 28, 2021 | 5:47 PM

Share

ಬೆಂಗಳೂರು: ವಿದ್ಯಾವಂತ ಯುವಕರನ್ನು ಉದ್ಯಮದತ್ತ ಆಕರ್ಷಿಸಿ, ಸ್ವಯಂ ಉದ್ಯಮಿಗಳಾಗಿ ಮಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಮ್ಮಿಕೊಂಡಿರುವ “ಉದ್ಯಮಿಯಾಗು ಉದ್ಯೋಗ ಕೊಡು ಹಾಗೂ ಕೈಗಾರಿಕಾ ಅದಾಲತ್” ಯೋಜನೆಗೆ ಅಕ್ಟೋಬರ್ 11ರಂದು ವಿಧ್ಯುಕ್ತ ಚಾಲನೆ ದೊರೆಯಲಿದೆ. ಅ.11 ಮತ್ತು 12ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೊದಲ ದಿನ, ಉದ್ಯಮಿಯಾಗು ಉದ್ಯೋಗ ಕೊಡು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. 12ರಂದು ಕೈಗಾರಿಕಾ ಅದಾಲತ್ ನಡೆಯಲಿದ್ದು, ಕೈಗಾರಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ವಿನೂತನ ಕಾರ್ಯಕ್ರಮ ಇದಾಗಿದೆ. ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅಧ್ಯಕ್ಷತೆಯಲ್ಲಿ ಬೆಂಗಳೂರು ಕಂದಾಯ ವಿಭಾಗದ ಕೈಗಾರಿಕಾ ಸಂಸ್ಥೆಗಳ ಮುಖಂಡರ ಜೊತೆ ನಡೆಸಿದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಯಿತು.

ಬೆಂಗಳೂರು ಕಂದಾಯ ವಿಭಾಗದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿರುವ ಉದ್ಯಮಿಗಳು ಭಾಗವಹಿಸಲಿದ್ದಾರೆ. ಮೊದಲ ದಿನ, “ಉದ್ಯಮಿಯಾಗು ಉದ್ಯೋಗ ಕೊಡು” ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಉದ್ಯಮಿಗಳು ಕೈಗಾರಿಕಾ ಕ್ಷೇತ್ರದಲ್ಲಿ ಯಶಸ್ವಿ ಸಾಧಿಸಿರುವ ಕನ್ನಡಿಗರೇ ಆದ ಕೋ ರಾಧಾಕೃಷ್ಣ, ಜಿರೋದಾ ನಿತನ್, ನಿಖಿಲ್ ಕಾಮತ್, ಪಡ್ಕೆ ಸೇರಿದಂತೆ ಮತ್ತಿತರ ಉದ್ಯಮಿಗಳನ್ನು ಆಹ್ವಾನಿಸಿ, ನೂತನ ಉದ್ಯಮಿಗಳಿಗೆ ವಿಶೇಷ ಉಪನ್ಯಾಸ, ಮಾರ್ಗದರ್ಶನ, ಸಲಹೆ ನೀಡಲಿದ್ದಾರೆ. ಬೆಂಗಳೂರು ಕಂದಾಯ ವಿಭಾಗದ ವಿವಿಧ ಜಿಲ್ಲೆಗಳಿಂದ ಒಟ್ಟು 10 ಸಾವಿರ ಜನರು ಆಗಮಿಸಲಿದ್ದು, ವೈಮಾನಿಕ ಕ್ಷೇತ್ರ, ರಕ್ಷಣಾ ಕ್ಷೇತ್ರದಲ್ಲಿ ಉದ್ಯೋಗಗಳು, ಹೂಡಿಕೆಗಿರುವ ಅವಕಾಶಗಳ ಬಗ್ಗೆ ಚರ್ಚೆ ನಡೆಯಲಿದೆ. ಸ್ಮಾರ್ಟ್ ಆಪ್ ಉದ್ಯೋಗ ಸೃಷ್ಟಿಸುವುದು, ಆರೋಗ್ಯ ಕ್ಷೇತ್ರ, ಶಿಕ್ಷಣ, ಎಜು ಟೆಕ್ನಾಲಜಿ, ಹೂಡಿಕೆ ಮಾಡುವುದು, ಬ್ಯಾಂಕಿಂಗ್ ವಲಯದಿಂದ ಸಾಲಸೌಲಭ್ಯ ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳು ನಡೆಯಲಿವೆ.

ಜಿಲ್ಲಾವಾರು ವರ್ಗೀಕರಣ ಎರಡನೇ ದಿನದ ಕೈಗಾರಿಕಾ ಅದಾಲತ್‍ನಲ್ಲಿ ಪ್ರಮುಖವಾಗಿ ಕೈಗಾರಿಕಾ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ಬಗ್ಗೆ ಸಚಿವರು, ಇಲಾಖೆ ಅಧಿಕಾರಿಗಳು ಪರಿಹರಿಸಲು ಆದ್ಯತೆ ನೀಡುವರು. ಕೈಗಾರಿಕಾ ಅದಾಲತ್ ನಡೆಸುವ ಸಂಬಂಧ ಜಿಲ್ಲಾವಾರು ವರ್ಗೀಕರಣ ಮಾಡಿ, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೊತೆಗೆ ಕೈಗಾರಿಕಾ ಸಂಘ- ಸಂಸ್ಥೆಗಳು ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತಂದರೆ ಸ್ಥಳದಲ್ಲಿಯೇ ಇತ್ಯರ್ಥಪಡಿಸಲಿದ್ದಾರೆ. ಸಭೆಯಲ್ಲಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಅದಾಲತ್, ಕಾರ್ಯಾಗಾರವನ್ನು 6 ವಿಭಾಗಗಳಲ್ಲಿ ನಡೆಸಲಾಗುವುದು. ಸರ್ಕಾರವೇ ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ, ಉದ್ಯಮಿದಾರರ ಮನವೊಲಿಸಲಿದೆ ಎಂದು ಹೇಳಿದರು.

ಸಮಸ್ಯೆಗಳ ಇತ್ಯರ್ಥ ಇನ್ನು ಸಭೆಯಲ್ಲಿ ಬಹುತೇಕ ಸಂಘ- ಸಂಸ್ಥೆಯ ಮುಖ್ಯಸ್ಥರು ಪ್ರಮುಖವಾಗಿ ವಿದ್ಯುತ್ ಸೇರಿದಂತೆ ಪ್ರಮುಖ ಮೂಲಸೌಲಭ್ಯಗಳ ಬಗ್ಗೆ ಸಚಿವರ ಗಮನ ಸೆಳೆದರು. ಇದಕ್ಕೆ ಸ್ಥಳದಲ್ಲೇ ಸ್ಪಂದಿಸಿದ ಸಚಿವ ನಿರಾಣಿಯವರು, ಉದ್ಯಮಿಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಲು ಸರ್ಕಾರ ಬದ್ದವಾಗಿದೆ. ಇದರ ಬಗ್ಗೆ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಇದಕ್ಕೆ ಯಾರೂ ಆತಂಕಪಡುವುದು ಬೇಡ. ಇದಕ್ಕೆ ನಾವು ಬದ್ದ ಎಂದು ವಾಗ್ದಾನ ಮಾಡಿದರು. ಯಾರಿಗೆ ಎಷ್ಟು ವಿದ್ಯುತ್ ಬೇಕು ಎಂದು ಅಂದಾಜಿಸಲಾಗುವುದು. ಈ ಸಂಬಂಧ ಇಂಧನ ಸಚಿವರ ಜೊತೆ ಖುದ್ದು ನಾನೇ ಸಭೆ ಕರೆಯಲಿದ್ದೇನೆ. ನೀವು ಆತಂಕಕ್ಕೆ ಒಳಗಾಗಬೇಡಿ ಎಂದು ಸಲಹೆ ಮಾಡಿದರು.

ಭೂಮಿ, ನೀರು, ವಿದ್ಯುತ್ ಮತ್ತು ನುರಿತ ಕೆಲಸಗಾರರನ್ನು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಹೆಚ್ಚು ಕೈಗಾರಿಕೆಗಳು ಬರಬೇಕು, ಉದ್ಯೋಗ ಸೃಷ್ಟಿ ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Jobs: 2013ರಿಂದ ಈಚೆಗೆ ಶೇ 29ರಷ್ಟು ಉದ್ಯೋಗ ಹೆಚ್ಚಳವಾಗಿದೆ ಎನ್ನುತ್ತಿದೆ ಈ ಸಮೀಕ್ಷೆ

(Become A Entrepreneur And Offer A Job Campaign At Bengaluru On October 11th And 12th)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ