IT Raid: ಬೆಂಗಳೂರಿನ ಹಲವೆಡೆ ಕಾರ್ಪೊರೇಟ್ ಕಂಪನಿಗಳ ಮೇಲೆ ಐಟಿ ದಾಳಿ; ಪರಿಶೀಲನೆ
IT Raid; ಬೆಂಗಳೂರಿನ ಸಂಜಯನಗರ, ಹೆಬ್ಬಾಳ, ಕೊಡಿಗೇಹಳ್ಳಿ, ಬಿಡದಿ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರು: ತೆರಿಗೆ ವಂಚನೆ (Tax Fraud) ಆರೋಪದಲ್ಲಿ ಬೆಂಗಳೂರಿನ (Bengaluru) ಹಲವೆಡೆ ಆದಾಯ ತೆರಿಗೆ ಇಲಾಖೆ (Income Tax Department) ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ದಾಳಿ (IT Raid) ನಡೆದಿದ್ದಾರೆ. ಹಲವು ಕಾರ್ಪೊರೇಟ್ ಕಂಪನಿಗಳ ಕಚೇರಿಗಳಿಗೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಂಪನಿಗಳ ಮಾಲೀಕರ ಮನೆಗಳ ಮೇಲೂ ದಾಳಿ ನಡೆದಿದ್ದು, ಕಡತಗಳ ಪರಿಶೀಲನೆ ಪ್ರಗತಿಯಲ್ಲಿದೆ. ಬೆಂಗಳೂರಿನ ಸಂಜಯನಗರ, ಹೆಬ್ಬಾಳ, ಕೊಡಿಗೇಹಳ್ಳಿ, ಬಿಡದಿ, ಚಿಕ್ಕಬಳ್ಳಾಪುರ, ರಾಮನಗರದ ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ಕೊಡಿಗೇಹಳ್ಳಿಯ ಬ್ರಿಗೇಡ್ ಓಪಸ್ ನಲ್ಲಿರುವ ಕಂಪನಿಯೊಂದರ ಮೇಲೆ ದಾಳಿ ನಡೆದಿದೆ.
ರಾಜ್ಯದ ಹಲವೆಡೆ ನಡೆದಿತ್ತು ಐಟಿ ದಾಳಿ
ಕರ್ನಾಟಕದ ಹಲವೆಡೆ ಕೆಲವು ದಿನಗಳ ಹಿಂದೆಯೂ ಸರಣಿ ಐಟಿ ದಾಳಿ ನಡೆದಿತ್ತು. ಚಿಕ್ಕಮಗಳೂರಿನ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ನವೆಂಬರ್ 17ರಂದು ಐಟಿ ದಾಳಿ ನಡೆದಿತ್ತು. ಗಾಯತ್ರಿ ಅವರ ಪತಿ ಶಾಂತೇಗೌಡ ಮಾಲೀಕತ್ವದ ಕ್ರಷರ್ ಮೇಲೆಯೂ ದಾಳಿ ನಡೆಸಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಅದಕ್ಕೂ ಕೆಲವು ದಿನಗಳ ಮುನ್ನ ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್ ಬಾಮೈದನ ನಿವಾಸದ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿ ಶೋಧ ಕೈಗೊಂಡಿದ್ದರು.
ಇದನ್ನೂ ಓದಿ: ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಐಟಿ ದಾಳಿ; ವಂಶಿರಾಂ ಬಿಲ್ಡರ್ಸ್ ಸುಬ್ಬಾರೆಡ್ಡಿ ಮನೆಯಲ್ಲಿ ಶೋಧ
ಡಿಸೆಂಬರ್ 6ರಂದು ತೆಲಂಗಾಣ ಹಾಗೂ ಆಂಧ್ರಪ್ರದೇಶಗಳ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ದಾಳಿ ನಡೆದಿತ್ತು. ರಾಜಕಾರಣಿಗಳು, ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ವಂಶಿರಾಂ ಬಿಲ್ಡರ್ಸ್‌ನ ಕಚೇರಿಗಳು ಮತ್ತು ನಿರ್ದೇಶಕರ ಮನೆಯಲ್ಲಿಯೂ ಶೋಧ ನಡೆದಿತ್ತು. ವಿಜಯವಾಡದಲ್ಲಿರುವ ವೈಎಸ್‌ಆರ್‌ಸಿಪಿ ನಾಯಕ ದೇವಿನೇನಿ ಅವಿನಾಶ್ ಅವರ ಮನೆಯಲ್ಲಿಯೂ ಐಟಿ ಅಧಿಕಾರಿಗಳು ಶೋಧ ನಡೆಸಿದ್ದರು.
ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:44 am, Fri, 9 December 22