AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ 2026: ರೈತರಿಗೆ ಸ್ಮಾರ್ಟ್ ಕೃಷಿ ಸಲಹೆ ನೀಡುತ್ತೆ ಭಾರತ್ ವಿಸ್ತಾರ್ ಎಐ ಟೂಲ್! ಏನಿದರ ವಿಶೇಷ?

ರೈತರಿಗೆ ಬೆಳೆ, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ವೈಜ್ಞಾನಿಕ ಸಲಹೆ ಹಾಗೂ ಮಾಹಿತಿ ನೀಡುವುದಕ್ಕಾಗಿ ಬಜೆಟ್​​ನಲ್ಲಿ ಮಹತ್ವದ ಉಪಕ್ರಮವೊಂದನ್ನು ಘೋಷಣೆ ಮಾಡಲಾಗಿದೆ.‘ಭಾರತ್ ವಿಸ್ತಾರ್’ ಎಂಬ ಕೃತಕ ಬುದ್ಧಿಮತ್ತೆ ಟೂಲ್ ಅನ್ನು ಹಣಕಾಸು ಸಚಿವರು ಬಜೆಟ್​​ನಲ್ಲಿ ಘೋಷಿಸಿದ್ದು, ಇದು ತಂತ್ರಜ್ಞಾನ ಆಧಾರಿತ ಕೃಷಿಗೆ ಒತ್ತು ನೀಡಿ ರೈತರ ಆದಾಯ ಹೆಚ್ಚಿಸಲು ನೆರವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಬಜೆಟ್ 2026: ರೈತರಿಗೆ ಸ್ಮಾರ್ಟ್ ಕೃಷಿ ಸಲಹೆ ನೀಡುತ್ತೆ ಭಾರತ್ ವಿಸ್ತಾರ್ ಎಐ ಟೂಲ್! ಏನಿದರ ವಿಶೇಷ?
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 01, 2026 | 2:29 PM

Share

ನವದೆಹಲಿ, ಫೆಬ್ರವರಿ 1: ತಂತ್ರಜ್ಞಾನ ಆಧಾರಿತ ಕೃಷಿಗೆ ಒತ್ತು ನೀಡುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ಕೇಂದ್ರ ಬಜೆಟ್‌ನಲ್ಲಿ (Union Budget 2026) ‘ಭಾರತ್ ವಿಸ್ತಾರ್’ (Bharat Vistar) ಕೃತಕ ಬುದ್ಧಿಮತ್ತೆ ಟೂಲ್ ಪ್ರಾರಂಭಿಸುವುದಾಗಿ ಘೋಷಿಸಿದರು. ಇದು ಬಹುಭಾಷಾ ಕೃತಕ ಬುದ್ಧಿಮತ್ತೆ (AI) ಸಾಧನವಾಗಿದ್ದು ರೈತರಿಗೆ ಬೆಳೆಗಳು, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಮತ್ತು ವೈಜ್ಞಾನಿಕ ಸಲಹೆಯನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದನ್ನು ಅಗ್ರಿಸ್ಟ್ಯಾಕ್ ಮತ್ತು ICAR ನಿಂದ ಪ್ರಮಾಣೀಕೃತ ಡೇಟಾವನ್ನು ಸಂಯೋಜಿಸುವ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ. ಕೃಷಿ ನಿರ್ಧಾರಗಳನ್ನು ಹೆಚ್ಚು ನಿಖರ, ವೇಗ ಮತ್ತು ಕಡಿಮೆ ಸಮಸ್ಯೆಗಳು ಇರುವಂತೆ ನೋಡಿಕೊಳ್ಳುವುದು ಇದರ ಉದ್ದೇಶವಾಗಿದೆ.

ಭಾರತ್ ವಿಸ್ತಾರ್ ಎಂದರೇನು? ಈ ಎಐ ಟೂಲ್ ಹೇಗೆ ಕೆಲಸ ಮಾಡುತ್ತೆ?

ಭಾರತ್ ವಿಸ್ತಾರ್, ಇದರ ವಿಸ್ತರಿತ ರೂಪ ವರ್ಚುವಲಿ ಇಂಟಿಗ್ರೇಟೆಡ್ ಸಿಸ್ಟಮ್ ಟು ಆಕ್ಸೆಸ್ ಅಗ್ರಿಕಲ್ಚರಲ್ ರಿಸೋರ್ಸಸ್ (VISTAAR) ಪ್ಲಾಟ್‌ಫಾರ್ಮ್. ಇದು ಕೃಷಿ-ಸ್ಟ್ಯಾಕ್ ಪೋರ್ಟಲ್ ಮತ್ತು ICAR ಅನುಮೋದಿತ ಕೃಷಿ ಪದ್ಧತಿಗಳನ್ನು ಎಐ ವ್ಯವಸ್ಥೆಗಳೊಂದಿಗೆ ಸಂಯೋಜಿಸುತ್ತದೆ. ರೈತರಿಗೆ ಒಂದೇ ಕಡೆ ವಿಶ್ವಾಸಾರ್ಹ, ವೈಜ್ಞಾನಿಕ ಸಲಹೆಯನ್ನು ಒದಗಿಸುವುದು ಇದರ ಗುರಿಯಾಗಿದೆ. ಇದು ಡೇಟಾ ಮತ್ತು ಸಂಶೋಧನೆಯ ಆಧಾರದ ಮೇಲೆ ಕೃಷಿ ಚಟುವಟಿಕೆಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ.

ಭಾರತ್ ವಿಸ್ತಾರ್ ಎಐ ಟೂಲ್ ಬೆಳೆ ಮಾದರಿಗಳು, ಮಣ್ಣಿನ ಗುಣಮಟ್ಟ, ಹವಾಮಾನ ಪ್ರವೃತ್ತಿಗಳು ಮತ್ತು ಇತರ ಕೃಷಿ ದತ್ತಾಂಶಗಳನ್ನು ವಿಶ್ಲೇಷಿಸಿ ರೈತರಿಗೆ ಸಲಹೆ ಅಥವಾ ಶಿಫಾರಸುಗಳನ್ನು ಮಾಡುತ್ತದೆ. ಸರ್ಕಾರದ ಪ್ರಕಾರ, ಇದು ರೈತರಿಗೆ ಸರಳ ಮತ್ತು ಪ್ರಾಯೋಗಿಕ ರೀತಿಯಲ್ಲಿ ವೈಜ್ಞಾನಿಕ ಮಾಹಿತಿಯನ್ನು ತಲುಪಿಸುತ್ತದೆ. ಕೃಷಿ ಚಟುವಟಿಕೆಗಳಲ್ಲಿನ ನಷ್ಟವನ್ನು ಕಡಿಮೆ ಮಾಡುವುದು ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ವೇದಿಕೆಯ ಗುರಿಯಾಗಿದೆ. ಸರಿಯಾದ ಸಮಯದಲ್ಲಿ ನಿಖರವಾದ ಮಾಹಿತಿಯನ್ನು ಒದಗಿಸುವುದು ವೆಚ್ಚಗಳನ್ನು ನಿಯಂತ್ರಿಸಲು ಮತ್ತು ಉತ್ಪಾದನೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕಿಸಾನ್ ಕಾಲ್ ಸೆಂಟರ್ ಮತ್ತು ಸರ್ಕಾರಿ ಯೋಜನೆಗಳಿಗೆ ನೇರ ಸಂಪರ್ಕ

ಭಾರತ್ ವಿಸ್ತಾರ್ ಟೂಲ್ ಕಿಸಾನ್ ಕಾಲ್ ಸೆಂಟರ್ ಸೇವೆಗಳೊಂದಿಗೆ ಲಿಂಕ್ ಆಗಲಿದೆ. ಇದರಿಂದಾಗಿ ರೈತರು ನೇರವಾಗಿ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ಮತ್ತು ಸಮಸ್ಯೆಗಳಿಗೆ ಪರಿಹಾರಗಳನ್ನು ಪಡೆಯಲು ಸಾಧ್ಯವಾಗಲಿದೆ. ರಿಯಲ್ ಟೈಂ ಹವಾಮಾನ ಮುನ್ಸೂಚನೆಗಳನ್ನು ಲಭ್ಯವಾಗುವಂತೆ ಮಾಡಲಾಗುತ್ತದೆ.

ಇದನ್ನೂ ಓದಿ: Budget 2026: 1 ಗಂಟೆ 26 ನಿಮಿಷಗಳ ಕಾಲ ಬಜೆಟ್​​ ಮಂಡಿಸಿದ ವಿತ್ತ ಸಚಿವೆ; ಆಯವ್ಯಯ ಮಂಡನೆಯಲ್ಲೂ ದಾಖಲೆ

ಪ್ರಸ್ತುತ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶಗಳಲ್ಲಿ ಸುಮಾರು 4,000 ಮಂದಿ ಆಧಾರಿತ ಟೆಲಿಗ್ರಾಮ್ ಚಾಟ್‌ಬಾಟ್‌ನಿಂದ ಕೃಷಿ ಸಲಹೆಯನ್ನು ಪಡೆಯುತ್ತಿದ್ದಾರೆ. ಡಿಜಿಟಲ್ ಗ್ರೀನ್ ಭಾಷಿಣಿ ತಂತ್ರಜ್ಞಾನವನ್ನು ಬಳಸಿಕೊಂಡು ಈ ಚಾಟ್‌ಬಾಟ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಇದು ಹಿಂದಿ, ತೆಲುಗು ಮತ್ತು ಇಂಗ್ಲಿಷ್‌ನಲ್ಲಿ ಪ್ರತಿಕ್ರಿಯಿಸುತ್ತದೆ. ಇದೀಗ ಭಾರತ್ ವಿಸ್ತಾರ್ ಎಐ ಟೂಲ್​​ನೊಂದಿಗೆ ದೇಶದ ಎಲ್ಲ ಭಾಗದ ರೈತರಿಗೆ ಅವರದೇ ಭಾಷೆಗಳಲ್ಲಿ ಸಲಹೆ ಸೂಚನೆ ಪಡೆಯಬಹುದಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ