Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheaper Petrol: ಮುಂಬರುವ ದಿನಗಳಲ್ಲಿ ಪೆಟ್ರೋಲ್, ಡೀಸಲ್ ಬೆಲೆಯಲ್ಲಿ ಭಾರೀ ಕಡಿತ ಸಾಧ್ಯತೆ; ಜನಸಾಮಾನ್ಯರಿಗೆ ಕೇಂದ್ರದಿಂದ ಗಿಫ್ಟ್

Central Government May Announce Fuel Price Cut: ಲೋಕಸಭಾ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲಿ ಲೀಟರ್​ಗೆ 10 ರೂನಷ್ಟು ಇಳಿಕೆ ಮಾಡುವ ಸಾಧ್ಯತೆ ಇದೆ. 2022ರ ಮೇ ತಿಂಗಳಿಂದ ಅಂತಾರಾಷ್ಟ್ರಿಯ ತೈಲ ಬೆಲೆಯಲ್ಲಿ ವ್ಯತ್ಯಯವಾದರೂ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. 2021ರ ಅಕ್ಟೋಬರ್ ತಿಂಗಳಿಂದ ಬಹುತೇಕ ದೇಶಗಳಲ್ಲಿ ಪೆಟ್ರೋಲ್ ಬೆಲೆ ಹೆಚ್ಚಾಗಿದೆ. ಭಾರತದಲ್ಲಿ ಬೆಲೆ ತುಸು ಇಳಿಕೆಯಾಗಿದೆ.

Cheaper Petrol: ಮುಂಬರುವ ದಿನಗಳಲ್ಲಿ ಪೆಟ್ರೋಲ್, ಡೀಸಲ್ ಬೆಲೆಯಲ್ಲಿ ಭಾರೀ ಕಡಿತ ಸಾಧ್ಯತೆ; ಜನಸಾಮಾನ್ಯರಿಗೆ ಕೇಂದ್ರದಿಂದ ಗಿಫ್ಟ್
ಪೆಟ್ರೋಲ್ ಬೆಲೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 29, 2023 | 10:50 AM

ನವದೆಹಲಿ, ಡಿಸೆಂಬರ್ 29: ಜನವರಿ ಅಥವಾ ಫೆಬ್ರುವರಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ ಭಾರೀ ಕಡಿತ (fuel price cut) ಆಗುವ ಸಾಧ್ಯತೆ ದಟ್ಟವಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್18 ವಾಹಿನಿ ವರದಿ ಮಾಡಿದೆ. ಕೇಂದ್ರ ಹಣಕಾಸು ಸಚಿವಾಲಯದ ಮೂಲಗಳಿಂದ ಮಾಹಿತಿ ಸಿಕ್ಕಿರುವುದಾಗಿ ಈ ವರದಿಯಲ್ಲಿ ಹೇಳಲಾಗಿದ್ದು, ಅದರ ಪ್ರಕಾರ ಪೆಟ್ರೋಲ್, ಡೀಸಲ್ ಬೆಲೆ ಲೀಟರ್​ಗೆ 10 ರೂವರೆಗೂ ಇಳಿಕೆ ಮಾಡಬಹುದು. ಕೆಲ ದಿನಗಳ ಹಿಂದೆಯೂ ಟಿವಿ9ನಲ್ಲೂ ಈ ಬಗ್ಗೆ ವರದಿ ಬಂದಿದ್ದು, ಪೆಟ್ರೋಲ್ ಬೆಲೆ ಇಳಿಯುವ ಸಾಧ್ಯತೆ ಇದೆ ಎನ್ನಲಾಗಿತ್ತು.

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಬಹಳ ಕಾಲ ಬೆಲೆ ಇಳಿಕೆ ಇದ್ದದ್ದು ಒಂದು ಕಾರಣವಾದರೆ, ಭಾರತದ ತೈಲ ಮಾರುಕಟ್ಟೆ ಕಂಪನಿಗಳು ನಷ್ಟದ ಹಾದಿಯಿಂದ ಈಗ ಲಾಭದ ಹಳಿಗೆ ಬಂದಿರುವುದೂ ಇನ್ನೊಂದು ಕಾರಣವಾಗಿದೆ. ಹೀಗಾಗಿ, ಸರ್ಕಾರ ಸಾರ್ವಜನಿಕರಿಗೆ ಪೆಟ್ರೋಲ್ ಬೆಲೆ ಇಳಿಕೆ ಮಾಡಲು ಮುಂದಾಗಿರಬಹುದು.

ಇದನ್ನೂ ಓದಿ: Petrol Diesel Price on December 29: ದೇಶದ ಪ್ರಮುಖ ನಗರಗಳಲ್ಲಿ ಡಿ.29 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?, ಮಾಹಿತಿ ಇಲ್ಲಿದೆ

ಕಳೆದ ವರ್ಷ ಮೇ (2022ರಲ್ಲಿ) ತಿಂಗಳಲ್ಲಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರೀಯ ಅಬಕಾರಿ ಸುಂಕವನ್ನು ಲೀಟರ್​ಗೆ ಕ್ರಮವಾಗಿ 8 ಮತ್ತು 6 ರುಪಾಯಿಯಷ್ಟು ಕಡಿಮೆ ಮಾಡಿತ್ತು. ಹಾಗೆಯೇ, 2022ರ ಮೇ 22ರ ಬಳಿಕ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾದರೂ, ಇಳಿಕೆಯಾದರೂ ಇಲ್ಲಿ ಯಾವುದೇ ವ್ಯತ್ಯಯವಾಗದಂತೆ ನಿಯಂತ್ರಿಸಲಾಗುತ್ತಿದೆ.

ಬೇರೆ ದೇಶಗಳಲ್ಲಿ ಏರಿದ್ದ ಪೆಟ್ರೋಲ್ ಬೆಲೆ

ಕುತೂಹಲ ಎಂದರೆ 2021ರ ಅಕ್ಟೋಬರ್ ತಿಂಗಳಿಂದ 2023ರ ಅಕ್ಟೋಬರ್ ತಿಂಗಳವರೆಗೆ ಎರಡು ವರ್ಷದ ಅವಧಿಯಲ್ಲಿ ಹೆಚ್ಚಿನ ದೇಶಗಳಲ್ಲಿ ಪೆಟ್ರೋಲ್ ಬೆಲೆ ಹೆಚ್ಚಳವಾದರೆ, ಭಾರತದಲ್ಲಿ ಒಂದು ಪ್ರತಿಶತದಷ್ಟು ಬೆಲೆ ಇಳಿಕೆ ಆಗಿದೆ. ಭಾರತದ ಎಲ್ಲಾ ನೆರೆಯ ದೇಶಗಳಲ್ಲೂ ಶೇ. 50ಕ್ಕಿಂತ ಹೆಚ್ಚು ಪೆಟ್ರೋಲ್ ದುಬಾರಿಯಾಗಿದೆ. ಅಮೆರಿಕ, ಬ್ರಿಟನ್, ಕೆನಡಾ, ಜರ್ಮನಿ ಇತ್ಯಾದಿ ಹಲವು ದೇಶಗಳಲ್ಲೂ ಪೆಟ್ರೋಲ್ ಬೆಲೆ ಏರಿದೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಸದ್ಯದಲ್ಲೇ ಇಳಿಕೆ ಸಾಧ್ಯತೆ; ಚುನಾವಣೆಯೊಂದೇ ಕಾರಣವಲ್ಲ; ಮತ್ತಿನ್ನೇನು ಕಾರಣ?

ರಷ್ಯಾದಿಂದ ತುಸು ಕಡಿಮೆ ಬೆಲೆಗೆ ಕಚ್ಛಾ ತೈಲ ಸಿಕ್ಕಿರುವುದು ಮತ್ತು ಅಬಕಾರಿ ಸುಂಕವನ್ನು ಕಡಿಮೆ ಮಾಡಿದ್ದು ಭಾರತದಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಹೆಚ್ಚಳವಾಗದಂತೆ ನೋಡಿಕೊಳ್ಳಲು ಅನುಕೂಲವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್