Direct Tax Collection: ನೇರ ತೆರಿಗೆ ಸಂಗ್ರಹದಲ್ಲಿ ಶೇ 24ರಷ್ಟು ಹೆಚ್ಚಳ; ಹಣಕಾಸು ಸಚಿವಾಲಯ ಮಾಹಿತಿ

‘ನವೆಂಬರ್​ 30ರ ವರೆಗಿನ ಲೆಕ್ಕಾಚಾರ ಪ್ರಕಾರ, ನಿವ್ವಳ ನೇರ ತೆರಿಗೆ ಸಂಗ್ರಹ 8.77 ಲಕ್ಷ ಕೋಟಿ ಆಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇಕಡಾ 24.26ರಷ್ಟು ಹೆಚ್ಚಾಗಿದೆ’ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

Direct Tax Collection: ನೇರ ತೆರಿಗೆ ಸಂಗ್ರಹದಲ್ಲಿ ಶೇ 24ರಷ್ಟು ಹೆಚ್ಚಳ; ಹಣಕಾಸು ಸಚಿವಾಲಯ ಮಾಹಿತಿ
ಸಾಂದರ್ಭಿಕ ಚಿತ್ರImage Credit source: Reuters
Follow us
TV9 Web
| Updated By: Ganapathi Sharma

Updated on:Dec 12, 2022 | 1:32 PM

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್ – ನವೆಂಬರ್ ಅವಧಿಯಲ್ಲಿ ನೇರ ನಿವ್ವಳ ತೆರಿಗೆ ಸಂಗ್ರಹದಲ್ಲಿ (Direct Tax Collection) ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 24ರಷ್ಟು ಹೆಚ್ಚಳವಾಗಿದೆ. ಈ ಅವಧಿಯಲ್ಲಿ 8.77 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. ಇದು 2022-23ನೇ ಸಾಲಿನ ಬಜೆಟ್​ ಅಂದಾಜಿನ ಶೇಕಡಾ 61.79ರಷ್ಟಾಗಿದೆ ಎಂದು ಹಣಕಾಸು ಸಚಿವಾಲಯ (Ministry of Finance) ಸೋಮವಾರ ತಿಳಿಸಿದೆ.

‘ನವೆಂಬರ್​ 30ರ ವರೆಗಿನ ಲೆಕ್ಕಾಚಾರ ಪ್ರಕಾರ, ನಿವ್ವಳ ನೇರ ತೆರಿಗೆ ಸಂಗ್ರಹ 8.77 ಲಕ್ಷ ಕೋಟಿ ಆಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇಕಡಾ 24.26ರಷ್ಟು ಹೆಚ್ಚಾಗಿದೆ’ ಎಂದು ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.

ಈ ವರ್ಷ 14.20 ಲಕ್ಷ ಕೋಟಿ ನೇರ ತೆರಿಗೆ ಸಂಗ್ರವಾಗಬಹುದೆಂದು ಬಜೆಟ್​​ನಲ್ಲಿ ಅಂದಾಜಿಸಲಾಗಿತ್ತು. ಇದು 2021-22ನೇ ಸಾಲಿನ 14.10 ಲಕ್ಷ ಕೋಟಿಗಿಂತಲೂ ಹೆಚ್ಚಾಗಿತ್ತು. ಕಾರ್ಪೊರೇಟ್ ಮತ್ತು ವೈಯಕ್ತಿಕ ತೆರಿಗೆಗಳು ನೇರ ತೆರಿಗೆ ವ್ಯಾಪ್ತಿಯಡಿ ಬರುತ್ತವೆ. ತೆರಿಗೆ ಸಂಗ್ರಹವು ದೇಶದ ಆರ್ಥಿಕ ಚಟುವಟಿಕೆಗಳ ಸೂಚಕವೂ ಆಗಿದೆ.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ ಬಿಡುಗಡೆ, ಕರ್ನಾಟಕಕ್ಕೆ ಎಷ್ಟು ಬಂತು?

ಜಿಎಸ್​​ಟಿಯಿಂದ ಪ್ರತಿ ತಿಂಗಳು 1.45 – 1.50 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ. ಏಪ್ರಿಲ್ 1ರಿಂದ ನವೆಂಬರ್​ 30ರ ಅವಧಿಯಲ್ಲಿ 2.15 ಲಕ್ಷ ಕೋಟಿ ರಿಫಂಡ್ ಮಾಡಲಾಗಿದೆ. ಇದು ಕಳೆದ ವರ್ಷಕ್ಕಿಂತ ಶೇಕಡಾ 67ರಷ್ಟು ಹೆಚ್ಚು ಎಂದು ಸಚಿವಾಲಯ ಮಾಹಿತಿ ನೀಡಿದೆ.

ಜಿಎಸ್​ಟಿ ಸಂಗ್ರಹವೂ ಹೆಚ್ಚಳ

ನವೆಂಬರ್​ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ ಮೂಲಕ 1,45,867 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಕಳೆದ ವರ್ಷ ನವೆಂಬರ್​ನಲ್ಲಿ ಸಂಗ್ರಹವಾದ ಜಿಎಸ್​ಟಿ ಆದಾಯಕ್ಕಿಂತ ಇದು ಶೇಕಡಾ 11ರಷ್ಟು ಹೆಚ್ಚು ಎಂದು ಕೇಂದ್ರ ಹಣಕಾಸು ಸಚಿವಾಲಯ ಇತ್ತೀಚೆಗೆ ತಿಳಿಸಿತ್ತು. ಅಕ್ಟೋಬರ್​ ತಿಂಗಳಲ್ಲಿ ಕೂಡ ಅತಿಹೆಚ್ಚು ಜಿಎಸ್​ಟಿ ಸಂಗ್ರಹವಾಗಿತ್ತು. ಅಕ್ಟೋಬರ್ ತಿಂಗಳಲ್ಲಿ 1,51,718 ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿತ್ತು. ಈ ಹಿಂದೆ ಏಪ್ರಿಲ್‌ನಲ್ಲಿ ದಾಖಲೆಯ ಗರಿಷ್ಠ 1.68 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿತ್ತು. ಅದು ಬಿಟ್ಟರೆ ಅಕ್ಟೋಬರ್​ನಲ್ಲಿ ಆಗಿರುವ 1.51 ಲಕ್ಷ ಕೋಟಿ ರೂ. ಎರಡನೇ ಅತಿಹೆಚ್ಚಿನ ಸಂಗ್ರಹವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:31 pm, Mon, 12 December 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್