AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gates and Tata: ಟಾಟಾ, ತೆಂಡೂಲ್ಕರ್, ಆನಂದ್ ಮಹೀಂದ್ರ ಅವರನ್ನು ಭೇಟಿ ಮಾಡಿದ ಬಿಲ್ ಗೇಟ್ಸ್

Bill Gates Meets Ratan Tata: ಮೈಕ್ರೋಸಾಫ್ ಮುಖ್ಯಸ್ಥ ಬಿಲ್ ಗೇಟ್ಸ್ ಮಾ. 1ರಂದು ಭಾರತದ ಉದ್ಯಮಿಗಳಾದ ರತನ್ ಟಾಟಾ, ಎನ್ ಚಂದ್ರಶೇಖರನ್ ಮತ್ತು ಆನಂದ್ ಮಹೀಂದ್ರಅವರನ್ನು ಭೇಟಿಯಾದರು. ಹಾಗೆಯೇ, ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನೂ ಗೇಟ್ಸ್ ಭೇಟಿ ಮಾಡಿದ್ದಾರೆ.

Gates and Tata: ಟಾಟಾ, ತೆಂಡೂಲ್ಕರ್, ಆನಂದ್ ಮಹೀಂದ್ರ ಅವರನ್ನು ಭೇಟಿ ಮಾಡಿದ ಬಿಲ್ ಗೇಟ್ಸ್
ಬಿಲ್ ಗೇಟ್ಸ್ ಭೇಟಿ ಮಾಡಿದ ರತನ್ ಟಾಟಾ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 02, 2023 | 11:35 AM

ನವದೆಹಲಿ: ಜಾಗತಿಕ ಐಟಿ ದಿಗ್ಗಜ ಮೈಕ್ರೋಸಾಫ್ಟ್​ನ ಸಂಸ್ಥಾಪಕ ಬಿಲ್ ಗೇಟ್ಸ್ (Bill Gates) ನಿನ್ನೆ ಬುಧವಾರ ಟಾಟಾ ಸನ್ಸ್ ಕಂಪನಿಯ ಛೇರ್ಮನ್ ಎನ್ ಚಂದ್ರಶೇಖರನ್ ಮತ್ತು ಅದರ ಮಾಜಿ ಛೇರ್ಮನ್ ರತನ್ ಟಾಟಾ (Tata Sons Chairman Emeritus Ratan Tata) ಅವರನ್ನು ಭೇಟಿ ಮಾಡಿದ್ದಾರೆ. ಆರೋಗ್ಯ, ತಪಾಸಣೆ (Diagnostics), ನ್ಯೂಟ್ರಿಶನ್ ಮೊದಲಾದ ಕ್ಷೇತ್ರದ ಬಗ್ಗೆ ಮೂವರೂ ಕೂಡ ಚರ್ಚಿಸಿದ್ದು, ಈ ಕ್ಷೇತ್ರಗಳಲ್ಲಿ ಪರಸ್ಪರ ಸಹಯೋಗ, ಸಮನ್ವಯತೆ ಸಾಧಿಸುವ ಬಗೆ ಬಗ್ಗೆ ಮಾತನಾಡಿದರೆನ್ನಲಾಗಿದೆ. ಬಿಲ್ ಗೇಟ್ಸ್ ಮತ್ತು ರತನ್ ಟಾಟಾ ಇಬ್ಬರೂ ಸಾಮಾಜಿಕ ಕಾರ್ಯಗಳಿಗೆ ತಮ್ಮ ಹಣ ವಿನಿಯೋಗ ಮಾಡುವ ವಿರಳ ಉದ್ಯಮಿಗಳ ಪೈಕಿಯವರು. ತಮ್ಮ ಕಂಪನಿಯ ಆದಾಯದಲ್ಲಿ ಬಹಳಷ್ಟು ಹಣವನ್ನು ಇವರು ಲೋಕೋಪಯೋಗಿ ಕಾರ್ಯಗಳಿಗಾಗಿ ದಾನ ನೀಡುತ್ತಾರೆ.

ಈ ಮೂವರ ಸಮ್ಮಿಲನ ಬಹಳಷ್ಟು ಕುತೂಹಲ ಮೂಡಿಸಿದೆ. ಬಿಲ್ ಗೇಟ್ಸ್ ಅವರ ಗೇಟ್ಸ್ ಫೌಂಡೇಶನ್ ಸಂಸ್ಥೆ ಈ ಭೇಟಿಯನ್ನು ಟ್ವೀಟ್ ಮೂಲಕ ದೃಢಪಡಿಸಿದೆ.

ನಮ್ಮ ಸಂಸ್ಥಾಪಕ ಹಾಗೂ ಸಹಛೇರ್ಮನ್ ಬಿಲ್ ಗೇಟ್ಸ್ ಅವರು ರತನ್ ಟಾಟಾ ಮತ್ತು ಎನ್ ಚಂದ್ರಶೇಖರನ್ ಜೊತೆ ಉತ್ತಮ ರೀತಿಯ ಚರ್ಚೆಯಲ್ಲಿ ಭಾಗಿಯಾದರು. ಅವರ ಲೋಕೋಪಯೋಗಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು. ಒಟ್ಟಿಗೆ ಕೆಲಸ ಮಾಡಲು ಮತ್ತು ಆರೋಗ್ಯ, ತಪಾಸಣೆ ಮತ್ತು ಪೌಷ್ಟಿಕಾಂಶ ಕ್ಷೇತ್ರದಲ್ಲಿ ಸಹಭಾಗಿತ್ವ ಎದುರುನೋಡುತ್ತಿದ್ದೇವೆ ಎಂದು ಗೇಟ್ಸ್ ಫೌಂಡೇಶನ್​ನಿಂದ ಟ್ವೀಟ್ ಆಗಿದೆ.

ಅದೇ ವೇಳೆ, ಬಿಲ್ ಗೇಟ್ಸ್ ಅವರು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮತ್ತು ಪತ್ನಿ ಅಂಜಲಿ ತೆಂಡೂಲ್ಕರ್ ಅವರನ್ನೂ ಭೇಟಿಯಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಟ್ವಿಟ್ಟರ್​ನಲ್ಲಿ ಇದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮಕ್ಕಳ ಆರೋಗ್ಯಪಾಲನೆ ಸೇರಿದಂತೆ ಲೋಕೋಪಯೋಗಿ ಕಾರ್ಯಗಳ ಬಗ್ಗೆ ಕಲಿಯುವ ಅದ್ಭುತ ಅವಕಾಶ ಸಿಕ್ಕಿತು ಎಂದು ಸಚಿನ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿAdani Shares: ತಿರುಗಿ ನಿಂತ ಅದಾನಿ ಷೇರುಗಳು; ಮಾರದೇ ಬಿಟ್ಟವರಿಗೆ ಹೊಡೆಯುತ್ತಾ ಜಾಕ್​ಪಾಟ್?

ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್, ಮಹೀಂದ್ರ ಗ್ರೂಪ್ ಛೇರ್ಮನ್ ಆನಂದ್ ಮಹೀಂದ್ರ ಅವರನ್ನೂ ಬಿಲ್ ಗೇಟ್ಸ್ ನಿನ್ನೆ ಬುಧವಾರ ಭೇಟಿ ಮಾಡಿ, ಇದೇ ಲೋಕೋಪಯೋಗಿ, ಸಮಾಜಸೇವೆ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿರುವುದು ತಿಳಿದುಬಂದಿದೆ.

ಭಾರತವನ್ನು ಹೊಗಳಿದ ಗೇಟ್ಸ್

ಹೋರಾಟ ಮನೋಭಾವ, ನಾವೀನ್ಯತೆಗೆ ಭಾರತ ಒಳ್ಳೆಯ ಉದಾಹರಣೆ. ದೊಡ್ಡ ಸಮಸ್ಯೆಗಳನ್ನು ಎದುರಿಸಬಲ್ಲೆ, ಭವಿಷ್ಯದ ಬೆಳಕಾಗಬಲ್ಲೆ ಎಂದು ಅದು ತೋರಿಸಿಕೊಟ್ಟಿದೆ. ಪೋಲಿಯೋ ನಿರ್ಮೂಲನೆ ಮಾಡಿದೆ. ಎಚ್​ಐವಿ ಹರಡುವಿಕೆಯನ್ನು ಕಡಿಮೆ ಮಾಡಿದೆ. ಬಡತನ ತಗ್ಗಿಸಿದೆ. ಶಿಶು ಮರಣ ಪ್ರಮಾಣ ಕಡಿಮೆ ಮಾಡಿದೆ. ಶೌಚ ಮತ್ತು ಹಣಕಾಸು ಸೇವೆಗಳನ್ನು ಬಲಯುತಗೊಳಿಸಿದೆ ಎಂದು ಬಿಲ್ ಗೇಟ್ಸ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:31 am, Thu, 2 March 23

ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
ಸುದೀಪಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ ನಾನಿ ಮುಕ್ತ ಮಾತು
ಸುದೀಪಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ ನಾನಿ ಮುಕ್ತ ಮಾತು