ದಿನಸಿ ವಸ್ತುವಿನಂತೆ ಮನೆಬಾಗಿಲಿಗೆ ಬರುತ್ತೆ ಸಣ್ಣ ಎಲ್​ಪಿಜಿ ಸಿಲಿಂಡರ್; ಎಚ್​ಪಿ ನಂತರ ಈಗ ಭಾರತ್ ಗ್ಯಾಸ್​ನಿಂದಲೂ ಸಪ್ಲೈ ಶುರು

BPCL Launches Lite Zip LPG cylinder: ಭಾರತ್ ಪೆಟ್ರೋಲಿಯಂ ಸಂಸ್ಥೆಯು ಲೈಟ್ ಜಿಪ್ ಎಲ್​ಪಿಜಿ ಸಿಲಿಂಡರ್ ಅನ್ನು ಬಿಡುಗಡೆ ಮಾಡಿದೆ. ತ್ವರಿತವಾಗಿ ಗ್ಯಾಸ್ ಅನ್ನು ಗ್ರಾಹಕರಿಗೆ ತಲುಪಿಸಲು ಇದು ನೆರವಾಗಲಿದೆ. ಸುಲಭವಾಗಿ ಮತ್ತು ವೇಗವಾಗಿ ಇದರ ಕನೆಕ್ಷನ್ ಕೂಡ ಸಿಗಲಿದೆ. ಕಳೆದ ವಾರ ಎಚ್​ಪಿಸಿಎಲ್ ಸಂಸ್ಥೆ ಬೆಂಗಳೂರಿನಲ್ಲಿ 10 ಕಿಲೋ ಎಲ್​ಪಿಜಿ ಸಿಲಿಂಡರ್ ಅನ್ನು ಕ್ವಿಕ್ ಕಾಮರ್ಸ್ ಪ್ಲಾಟ್​ಫಾರ್ಮ್ ಮೂಲಕ ಲಭ್ಯವಾಗಿಸಲಾಗಿದೆ.

ದಿನಸಿ ವಸ್ತುವಿನಂತೆ ಮನೆಬಾಗಿಲಿಗೆ ಬರುತ್ತೆ ಸಣ್ಣ ಎಲ್​ಪಿಜಿ ಸಿಲಿಂಡರ್; ಎಚ್​ಪಿ ನಂತರ ಈಗ ಭಾರತ್ ಗ್ಯಾಸ್​ನಿಂದಲೂ ಸಪ್ಲೈ ಶುರು
ಎಲ್​ಪಿಜಿ
Image Credit source: Getty Images

Updated on: Jul 19, 2026 | 2:21 PM

ಮುಂಬೈ, ಜುಲೈ 19: ಸ್ವಿಗ್ಗಿ ಇನ್​ಸ್ಟಾಮಾರ್ಟ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ನಿಗಮ ಸಂಸ್ಥೆ ಸಹಯೋಗದಲ್ಲಿ ಮನೆಬಾಗಿಲಿಗೆ ಕಿರು ಎಲ್​ಪಿಜಿ ಸಿಲಿಂಡರ್ ಒದಗಿಸುವ ಸೇವೆ ಆರಂಭಿಸಿದ ಬೆನ್ನಲ್ಲೇ ಇದೀಗ ಭಾರತ್ ಪೆಟ್ರೋಲಿಯಂ ನಿಗಮ ಸಂಸ್ಥೆಯೂ ರೇಸ್​ಗೆ ಸೇರಿದೆ. ಸರ್ಕಾರಿ ಸ್ವಾಮ್ಯದ ಬಿಪಿಸಿಎಲ್ (BPCL), ಅತ್ಯಾಧುನಿಕ ಹಾಗೂ ಹಗುರವಾದ ಎಲ್‌ಪಿಜಿ ಸಿಲಿಂಡರ್ ಸಿಸ್ಟಂ ಆದ’ಭಾರತ್‌ಗ್ಯಾಸ್ ಲೈಟ್ ಜಿಪ್’ (Bharatgas Lite ZIP) ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಹೊಸ ಸೇವೆಯಡಿ ಗ್ರಾಹಕರು ತಕ್ಷಣವೇ ಹೊಸ ಗ್ಯಾಸ್ ಕನೆಕ್ಷನ್ ಪಡೆಯಬಹುದು ಹಾಗೂ ಅತಿ ವೇಗದ (Express) ಡೆಲಿವರಿ ಸೌಲಭ್ಯವನ್ನು ಹೊಂದಲಿದ್ದಾರೆ.

ಭಾರತ್ ಗ್ಯಾಸ್ ಲೈಟ್ ಝಿಪ್ ಗ್ಯಾಸ್ ಸಿಲಿಂಡರ್ ವಿಶೇಷತೆಗಳು

ಭಾರತ್​ಗ್ಯಾಸ್ ಲೈಟ್ ಝಿಪ್ ಸಾಂಪ್ರದಾಯಿಕ ಕಬ್ಬಿಣದ ಸಿಲಿಂಡರ್‌ಗಳಿಗಿಂತ ಭಿನ್ನವಾಗಿದೆ. ಇವುಗಳು ಹಗುರವಾಗಿದ್ದು, ಸುಲಭವಾಗಿ ಎತ್ತಿಕೊಂಡು ಹೋಗಬಹುದು. ಇದು ತುಕ್ಕು ಹಿಡಿಯದ (Corrosion-free) ಬಾಡಿಯನ್ನು ಹೊಂದಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಗುಡ್​​ನ್ಯೂಸ್​​: ಇನ್ಮುಂದೆ ಇನ್‌ಸ್ಟಾಮಾರ್ಟ್‌ನಲ್ಲೂ ಸಿಗುತ್ತೆ LPG ಸಿಲಿಂಡರ್

ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್ ಬಾಕಿ ಇದೆ ಎಂಬುದನ್ನು ಹೊರಗಿನಿಂದಲೇ ನೋಡಬಹುದಾದ ಇಂಡಿಕೇಟರ್ (Gas-level indicator) ಇಲ್ಲಿದೆ. ಇದು ಆಧುನಿಕ ವಿನ್ಯಾಸ ಹಾಗೂ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

ಪ್ರಸ್ತುತ ಈ ಸೇವೆಯನ್ನು ಮುಂಬೈನಲ್ಲಿ ಮೊದಲ ಬಾರಿಗೆ ಲಾಂಚ್ ಮಾಡಲಾಗಿದೆ. ಮುಂಬರುವ ಆಗಸ್ಟ್ 15 ರ ವೇಳೆಗೆ ದೇಶದ 24 ರಾಜ್ಯಗಳ 100 ಕ್ಕೂ ಹೆಚ್ಚು ನಗರಗಳಿಗೆ ಈ ಸೇವೆಯನ್ನು ವಿಸ್ತರಿಸಲು BPCL ಯೋಜಿಸಿದೆ.

ಹೆಚ್​ಪಿಸಿಎಲ್​ನಿಂದ ಮೊದಲ್ಗೊಂಡಿತ್ತು ಈ ಸೇವೆ

ಇತ್ತೀಚೆಗಷ್ಟೇ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸಂಸ್ಥೆಯು ‘ಸ್ವಿಗ್ಗಿ ಇನ್‌ಸ್ಟಾಮಾರ್ಟ್’ (Swiggy Instamart) ಜೊತೆ ಒಪ್ಪಂದ ಮಾಡಿಕೊಂಡು ಬೆಂಗಳೂರಿನಲ್ಲಿ 10 ಕೆಜಿಯ ಹಗುರವಾದ ‘ಎಚ್‌ಪಿ ನವ್ಯಾ’ (HP Navya) ಸಿಲಿಂಡರ್‌ಗಳ ಆನ್-ಡಿಮ್ಯಾಂಡ್ ಡೆಲಿವರಿ ಆರಂಭಿಸಿತ್ತು. ಇದಕ್ಕೆ ಪೈಪೋಟಿ ನೀಡಲು ಈಗ BPCL ಕೂಡ ತನ್ನ ಪ್ರೀಮಿಯಂ ಹಗುರ ಸಿಲಿಂಡರ್ ಸೇವೆಯನ್ನು ವೇಗವಾಗಿ ವಿಸ್ತರಿಸುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಹಸಿರು ಇಂಧನ ಕ್ರಾಂತಿ; ಆರು ತಿಂಗಳಲ್ಲಿ ದಾಖಲೆಯ ಶೇ.25ರಷ್ಟು ಪ್ರಗತಿ- ಮಾಹಿತಿ ಬಿಚ್ಚಿಟ್ಟ ಸಚಿವ ಪ್ರಲ್ಹಾದ್ ಜೋಶಿ

ಇಂದಿನ ವೇಗದ ಜೀವನಶೈಲಿಗೆ, ಅದರಲ್ಲೂ ವಿಶೇಷವಾಗಿ ಐಟಿ ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಸಣ್ಣ ಕುಟುಂಬಗಳಿಗೆ ಸೂಕ್ತವಾಗುವಂತೆ ಈ ಸುಲಭ ಹಾಗೂ ಸುರಕ್ಷಿತ ಸಿಲಿಂಡರ್‌ಗಳನ್ನು ತೈಲ ಕಂಪನಿಗಳು ಮಾರುಕಟ್ಟೆಗೆ ತರುತ್ತಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us