Budget 2023: ಇಡೀ ವಿಶ್ವವೇ ಭಾರತದ ಬಜೆಟ್​ ಅನ್ನು ಎದುರುನೋಡುತ್ತಿದೆ; ಪ್ರಧಾನಿ ಮೋದಿ

ಇಂದಿನ ಪರಿಸ್ಥಿತಿಯಲ್ಲಿ ಭಾರತ ಮಾತ್ರವಲ್ಲ. ಇಡೀ ವಿಶ್ವವೇ ಭಾರತದ ಬಜೆಟ್​ ಅನ್ನು ಕುತೂಹಲದಿಂದ ಎದುರುನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.

Budget 2023: ಇಡೀ ವಿಶ್ವವೇ ಭಾರತದ ಬಜೆಟ್​ ಅನ್ನು ಎದುರುನೋಡುತ್ತಿದೆ; ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on:Jan 31, 2023 | 12:59 PM

ನವದೆಹಲಿ: ಇಡೀ ವಿಶ್ವವೇ ಭಾರತದ ಬಜೆಟ್​​​ ಅನ್ನು ಎದುರುನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಬಜೆಟ್ ಅಧಿವೇಶನದ ಆರಂಭಕ್ಕೂ ಮುನ್ನ ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಅವರು, ‘ಭಾರತ ಮೊದಲು, ನಾಗರಿಕರು ಮೊದಲು (India first, citizen first) ಎಂಬ ಧ್ಯೇಯದೊಂದಿಗೆ ನಾವು ಬಜೆಟ್ ಅಧಿವೇಶನ ನಡೆಸಲಿದ್ದೇವೆ. ಪ್ರತಿಪಕ್ಷ ನಾಯಕರು ಸಂಸತ್​ನಲ್ಲಿ ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಭರವಸೆ ಇದೆ ಎಂದು ಮೋದಿ ಹೇಳಿದರು. ಜಾಗತಿಕ ಆರ್ಥಿಕ ಅನಿಶ್ಚಿತತೆಗಳ ನಡುವೆ ಭಾರತದ ಬಜೆಟ್ ಸಾಮಾನ್ಯ ಜನರ ಆಶೋತ್ತರಗಳನ್ನು ಈಡೇರಿಸಲಿದೆ. ಆ ನಿಟ್ಟಿನಲ್ಲಿ ನಿರ್ಮಲಾ ಸೀತಾರಾಮನ್ ಪ್ರಯತ್ನಿಸಲಿದ್ದಾರೆ ಎಂಬ ಬಲವಾದ ನಂಬಿಕೆ ನನಗಿದೆ. ಇಂದಿನ ಪರಿಸ್ಥಿತಿಯಲ್ಲಿ ಭಾರತ ಮಾತ್ರವಲ್ಲ. ಇಡೀ ವಿಶ್ವವೇ ಭಾರತದ ಬಜೆಟ್​ ಅನ್ನು ಕುತೂಹಲದಿಂದ ಎದುರುನೋಡುತ್ತಿದೆ ಎಂದು ಅವರು ಹೇಳಿದರು.

ಈ ಮಧ್ಯೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್​ನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಬಜೆಟ್​ ಅಧಿವೇಶನಕ್ಕೆ ಅಧಿಕೃತ ಚಾಲನೆ ದೊರೆತಿದೆ. ಬುಧವಾರ ಬೆಳಿಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.

ಇದನ್ನೂ ಓದಿ: Budget 2023 Expectations: ಸುಲಭವಾಗಿ ಸಿಗ್ತೀವಿ ಅಂತ ಇನ್ನಷ್ಟು ಹೊರೆ ಬೇಡ ಮೇಡಂ, ನಿರ್ಮಲಾ ಬಜೆಟ್‌ನಿಂದ ಸಂಬಳದಾರರ ನಿರೀಕ್ಷೆಗಳಿವು

ಬಜೆಟ್ ಅಧಿವೇಶನ ಏಪ್ರಿಲ್ 6ರ ವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರ ವರೆಗೆ ಬಜೆಟ್ ಅಧಿವೇಶನಕ್ಕೆ ಬಿಡುವು ಇರಲಿದೆ. ಈ ಅವಧಿಯಲ್ಲಿ ಸಂಸದೀಯ ಸ್ಥಾಯಿ ಸಮಿತಿಗಳು ಅನುದಾನದ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಲಿವೆ. ವಿವಿಧ ಸಚಿವಾಲಯಗಳು ಮತ್ತು ಅವುಗಳ ಇಲಾಖೆಗಳಿಗೆ ಸಂಬಂಧಿಸಿದ ವರದಿಗಳನ್ನು ಕೂಡ ಸಿದ್ಧಪಡಿಸಲಿವೆ ಎಂದು ಸರ್ಕಾರ ತಿಳಿಸಿದೆ.

ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ; ಮುರ್ಮು

ಇಡೀ ವಿಶ್ವವೇ ಇಂದು ಭಾರತದತ್ತ ತಿರುಗಿ ನೋಡುತ್ತಿದೆ. ವಿಶ್ವ ದೇಶಗಳು ಭಾರತದಿಂದ ನೆರವು ನಿರೀಕ್ಷಿಸುವ ಹಂತಕ್ಕೆ ಪರಿವರ್ತನೆ ಆಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಅವರು ಬಜೆಟ್ ಅಧಿವೇಶನದ ಮೊದಲ ದಿನ ಸಂಸತ್​ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ಬಸವೇಶ್ವರರ ಕಾಯಕವೇ ಕೈಲಾಸ ಮಾತಿನಂತೆ ನನ್ನ ಸರ್ಕಾರ ಕೆಲಸ ಮಾಡುತ್ತಿದೆ. ಭಾರತದಲ್ಲಿ ಬಡವರ ಅಭಿವೃದ್ಧಿಗೆ ಕೆಲಸಗಳು ನಡೆಯುತ್ತಿವೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಚಿಂತನೆಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:55 pm, Tue, 31 January 23

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ