AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2026: ಚೆನ್ನೈ ಬೆಂಗಳೂರು ಸೇರಿ 7 ಹೈಸ್ಪೀಡ್ ರೈಲ್ವೆ ಕಾರಿಡಾರ್ ಘೋಷಿಸಿದ ನಿರ್ಮಲಾ ಸೀತಾರಾಮನ್

High speed railway corridor: ಕೇಂದ್ರ ಬಜೆಟ್​​ನಲ್ಲಿ ಬೆಂಗಳೂರು ಚೆನ್ನೈ ಮಧ್ಯೆ ಹೈಸ್ಪೀಡ್ ರೈಲ್ವೆ ಕಾರಿಡಾರ್‌ ಘೋಷಣೆ ಮಾಡಲಾಗಿದೆ. ಅಲ್ಲದೆ, ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವಂತೆ ಒಟ್ಟು 7 ರೈಲ್ವೆ ಕಾರಿಡಾರ್​ಗಳ ಘೋಷಣೆ ಮಾಡಲಾಗಿದೆ. ಯಾವೆಲ್ಲ ನಗರಗಳಿಗೆ ಹೈಸ್ಪೀಡ್ ರೈಲ್ವೆ ಕಾರಿಡಾರ್‌ ಸಂಪರ್ಕ ದೊರೆಯಲಿದೆ ಎಂಬ ಮಾಹಿತಿ ಇಲ್ಲಿದೆ.

Budget 2026: ಚೆನ್ನೈ ಬೆಂಗಳೂರು ಸೇರಿ 7 ಹೈಸ್ಪೀಡ್ ರೈಲ್ವೆ ಕಾರಿಡಾರ್ ಘೋಷಿಸಿದ ನಿರ್ಮಲಾ ಸೀತಾರಾಮನ್
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Feb 01, 2026 | 11:56 AM

Share

ನವದೆಹಲಿ, ಫೆಬ್ರವರಿ 1: ದೇಶದ ಸಾರಿಗೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್‌ನಲ್ಲಿ (Union Budget 2026) ಘೋಷಣೆ ಮಾಡಿದ್ದಾರೆ. ಚೆನ್ನೈ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳನ್ನು ಸಂಪರ್ಕಿಸುವ ಏಳು ಹೈಸ್ಪೀಡ್ ರೈಲ್ವೆ ಕಾರಿಡಾರ್‌ಗಳನ್ನು (High-Speed Rail Corridors) ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿರುವುದಾಗಿ ಘೋಷಣೆ ಮಾಡಿದ್ದಾರೆ.

ಎಲ್ಲಿಗೆಲ್ಲ ಹೈಸ್ಪೀಡ್ ರೈಲು ಮಾರ್ಗ?

ಈ ಯೋಜನೆಯಡಿ ಮುಂಬೈ–ಪುಣೆ, ಪುಣೆ–ಹೈದರಾಬಾದ್, ಹೈದರಾಬಾದ್–ಬೆಂಗಳೂರು, ಹೈದರಾಬಾದ್–ಚೆನ್ನೈ, ಚೆನ್ನೈ–ಬೆಂಗಳೂರು, ದೆಹಲಿ–ವಾರಾಣಸಿ ಹಾಗೂ ವಾರಾಣಸಿ–ಸಿಲಿಗುರಿ ನಡುವೆ ಹೈಸ್ಪೀಡ್ ರೈಲು ಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.

ಹೈಸ್ಪೀಡ್ ರೈಲ್ವೆ ಕಾರಿಡಾರ್‌ಗಳ ಮೂಲಕ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವುದು, ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವುದು ಹಾಗೂ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಯೋಜನೆಯಿಂದ ಮಹಾನಗರಗಳು ಮತ್ತು ಪ್ರಮುಖ ಆರ್ಥಿಕ ಕೇಂದ್ರಗಳ ನಡುವೆ ಸಂಪರ್ಕ ಮತ್ತಷ್ಟು ಬಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಬಜೆಟ್ ಘೋಷಣೆಯ ಬೆನ್ನಲ್ಲೇ ಹೈಸ್ಪೀಡ್ ರೈಲು ಯೋಜನೆಗಳು ದೇಶದ ಸಾರಿಗೆ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ಚಾಲನೆ ನೀಡಲಿವೆ ಎಂಬ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ:  ಬಜೆಟ್ ಲೈವ್​ ಅಪ್​ಡೇಟ್ಸ್​ಗೆ ಇಲ್ಲಿ ಕ್ಲಿಕ್ ಮಾಡಿ

ವಂದೇ ಭಾರತ್ ಎಕ್ಸ್‌ಪ್ರೆಸ್‌ನಂತಹ ರೈಲುಗಳು ಕಾರ್ಯನಿರ್ವಹಿಸಲು ಸಾಧ್ಯವಾಗುವಂತೆ ಅಸ್ತಿತ್ವದಲ್ಲಿರುವ ಕಾರಿಡಾರ್‌ಗಳನ್ನು ಹೈ-ಸ್ಪೀಡ್ ಕಾರಿಡಾರ್‌ಗಳಾಗಿ ಪರಿವರ್ತಿಸುವ ಯೋಜನೆಗಳನ್ನೂ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:41 am, Sun, 1 February 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ