AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Carbon Credit: ಇನ್ನೆರಡು ವಾರದಲ್ಲಿ ಕಾರ್ಬನ್ ಕ್ರೆಡಿಟ್ ವಹಿವಾಟು ವ್ಯವಸ್ಥೆ ರೂಪಿಸಲಿದೆ ಸರ್ಕಾರ; ಏನಿದು ಕಾರ್ಬನ್ ಕ್ರೆಡಿಟ್?

Carbon Credit Trading System: ಪರಿಸರವನ್ನು ಕಾರ್ಬನ್ ಮುಕ್ತಗೊಳಿಸಿದಾಗ ಸಿಗುವ ಕಾರ್ಬನ್ ಕ್ರೆಡಿಟ್ ಯೂನಿಟ್​ಗಳನ್ನು ಹೇಗೆ ಮಾರಾಟ ಮಾಡಬಹುದು ಎಂಬ ನಿಟ್ಟಿನಲ್ಲಿ ಒಂದು ವ್ಯವಸ್ಥೆ ರೂಪಿಸಲು ಸರ್ಕಾರ ಮಗ್ನವಾಗಿದೆ. ಇನ್ನೆರಡು ವಾರದಲ್ಲಿ ಅದರ ವಿನ್ಯಾಸ ಬರಬಹುದು.

Carbon Credit: ಇನ್ನೆರಡು ವಾರದಲ್ಲಿ ಕಾರ್ಬನ್ ಕ್ರೆಡಿಟ್ ವಹಿವಾಟು ವ್ಯವಸ್ಥೆ ರೂಪಿಸಲಿದೆ ಸರ್ಕಾರ; ಏನಿದು ಕಾರ್ಬನ್ ಕ್ರೆಡಿಟ್?
ಕಾರ್ಬನ್ ಕ್ರೆಡಿಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 22, 2023 | 6:43 PM

Share

ಕಾರ್ಪೊರೇಟ್ ಕಂಪನಿಗಳಿಂದ ಆಗುವ ಪರಿಸರ ಮಾಲಿನ್ಯವನ್ನು ತಡೆಯಲು ವಿಶ್ವದ ಹಲವೆಡೆ ಕಾರ್ಬನ್ ಕ್ರೆಡಿಟ್ (Carbon Credit) ಎಂಬ ವ್ಯವಸ್ಥೆ ಇದೆ. ಭಾರತದಲ್ಲಿ ಇನ್ನೆರಡು ವಾರದಲ್ಲಿ ಕಾರ್ಬನ್ ಕ್ರೆಡಿಟ್ ಟ್ರೇಡಿಂಗ್ ಸ್ಕೀಮ್​ನ ಅಂತಿಮ ರೂಪುರೇಖೆ ಸಿದ್ಧಪಡಿಸಲು ಸರ್ಕಾರ ಯೋಜಿಸಿದೆ. ಕೇಂದ್ರ ವಿದ್ಯುತ್ ಕಾರ್ಯದರ್ಶಿ ಅಲೋಕ್ ಕುಮಾರ್ (Power Secretary Alok Kumar) ಈ ವಿಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ. 2022ರ ಶಕ್ತಿ ಸಂರಕ್ಷಣೆ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅನುಮೋದನೆ ಪಡೆದಿತ್ತು. ಆ ಮೂದೆಯಲ್ಲಿ ಕಾರ್ಬನ್ ಕ್ರೆಡಿಟ್ ಟ್ರೇಡಿಂಗ್ ವಿಚಾರ ಇದೆ. ಬ್ಯೂರೋ ಆಫ್ ಎನರ್ಜಿ ಎಫಿಶಿಯನ್ಸಿ (ಬಿಇಇ) ಸಂಸ್ಥೆ ಜೊತೆ ಸಮಾಲೋಚನೆ ನಡೆಸಿ ಕಾರ್ಬನ್ ಟ್ರೇಡಿಂಗ್ ಸ್ಕೀಮ್ ವಿನ್ಯಾಸಗೊಳಿಸಲು ಕೇಂದ್ರ ಸರ್ಕಾರಕ್ಕೆ ಅನುವು ಮಾಡಿಕೊಡುತ್ತದೆ ಈ ಮಸೂದೆ.

ವಾತಾವರಣದಲ್ಲಿ ಸೇರಿರುವ ಹಸಿರುಮನೆ ಅನಿಲಗಳನ್ನು ನಿರ್ಮೂಲನೆ ಮಾಡಲು ಅಥವಾ ಕಡಿಮೆ ಮಾಡುವ ಉದ್ದೇಶದಿಂದ ಕಾರ್ಬನ್ ಕ್ರೆಡಿಟ್ ಟ್ರೇಡಿಂಗ್ ಸ್ಕೀಮ್ ಅನ್ನು ಜಾರಿಗೆ ತರಲಾಗುತ್ತಿದೆ. ಒಂದು ಕಾರ್ಬನ್ ಕ್ರೆಡಿಟ್ ಯೂನಿಟ್ ಎಂದರೆ ವಾತಾವರಣದಿಂದ 1 ಟನ್ ಕಾರ್ಬನ್ ಡೈ ಆಕ್ಸೈಡ್ ಅನ್ನು ನಿರ್ಮೂಲಗೊಳಿಸಿರುವುದಕ್ಕೆ ಸಮ. ಒಂದು ಟನ್ ಇಂಗಾಲ ಡೈ ಆಕ್ಸೈಡ್ ಅನ್ನು ಕಡಿಮೆ ಮಾಡಿದರೆ ಒಂದು ಕಾರ್ಬನ್ ಕ್ರೆಡಿಟ್ ಸಿಗುತ್ತದೆ. ಇದನ್ನು ಹೊಂದಿದ ಯಾವುದೇ ಕಂಪನಿಯು ಅಷ್ಟು ಪ್ರಮಾಣದ ಕಾರ್ಬನ್ ಡೈ ಆಕ್ಸೈಡ್ ಅನ್ನು ಹೊರಸೂಸುವ ಅವಕಾಶ ಹೊಂದಿರುತ್ತವೆ. ಈ ಕಾರ್ಬನ್ ಕ್ರೆಡಿಟ್​ಗಳನ್ನು ಮಾರಾಟ ಮಾಡಲು ಮತ್ತು ಖರೀದಿ ಮಾಡಲು ಅವಕಾಶ ಮಾಡಿಕೊಡುತ್ತದೆ ಸಿಸಿಟಿಎಸ್ ಸ್ಕೀಮ್.

ಇದನ್ನೂ ಓದಿShare Market Shock: ಎರಡು ದಿನ ಭಯಂಕರ ಉಬ್ಬಿದ್ದ ಷೇರುಪೇಟೆ ಗುರುವಾರ ಠುಸ್; 2 ಲಕ್ಷ ಕೋಟಿ ನಷ್ಟಕಂಡ ಹೂಡಿಕೆದಾರರು

ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಉದ್ಯಮಗಳ ಸಂಸ್ಥೆಗಳು ಈ ಕಾರ್ಬನ್ ಕ್ರೆಡಿಟ್​ಗಳನ್ನು ಖರೀದಿಸುವುದು ಅನಿವಾರ್ಯವಾಗುತ್ತದೆ. ಕಲ್ಲಿದ್ದಲು, ವಿದ್ಯುತ್ ಉತ್ಪಾದನೆ, ಗಣಿಗಾರಿಕೆ ಇತ್ಯಾದಿ ಕ್ಷೇತ್ರಗಳ ಕಂಪನಿಗಳ ವೆಚ್ಚ ಹೆಚ್ಚಾಗಬಹುದು.

ಆದರೆ, ವಾತಾವರಣದಿಂದ ಕಾರ್ಬನ್ ಹೊರಸೂಸುವಿಕೆ ಎಷ್ಟು ಕಡಿಮೆ ಆಗಿದೆ ಎಂಬುದನ್ನು ಅಳೆಯುವ ವಿಧಾನಗಳು ಮತ್ತಿತರ ಮಾನದಂಡ ಹಾಗೂ ವ್ಯವಸ್ಥೆಗಳನ್ನು ರೂಪಿಸಬೇಕಿದೆ. ಇಂಡಿಯನ್ ಕಾರ್ಬನ್ ಮಾರ್ಕೆಟ್ (ಐಸಿಎಂ) ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.

ತಂತ್ರಜ್ಞಾನಗಳನ್ನು ಬಳಸಿ ಪರಿಸರ ಮಾಲಿನ್ಯ ತಡೆದು ಆ ಮೂಲಕ ಕಾರ್ಬನ್ ಕ್ರೆಡಿಟ್​ಗಳನ್ನು ಪಡೆಯುವಂತಹ ಅವಕಾಶಗಳಿವೆ. ಕಾರ್ಬನ್ ಕ್ರೆಡಿಟ್ ಸೃಷ್ಟಿಗೆ ಒಳ್ಳೆಯ ಸ್ಪರ್ಧಾತ್ಮಕ ವಾತಾವರಣ ಸೃಷ್ಟಿಸಲೂ ಇಂಡಿಯನ್ ಕಾರ್ಬನ್ ಮಾರ್ಕೆಟ್ ಅನುವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ