ಬೆಂಗಳೂರಲ್ಲಿ ಕಾರ್​ಪೂಲಿಂಗ್ ನಿಷೇಧಕ್ಕೆ ಸಾರಿಗೆ ಇಲಾಖೆ ಮುಂದು; 10,000 ರೂ ವರೆಗೆ ದಂಡ ವಿಧಿಸುವ ಸಾಧ್ಯತೆ

Carpooling Might Be Banned in Bengaluru: ಕಮರ್ಷಿಯಲ್ ಅಲ್ಲದ ವಾಹನಗಳನ್ನು ಟ್ರಾನ್ಸ್​ಪೋರ್ಟ್ ಆ್ಯಪ್​ಗಳನ್ನು ಬಳಸಿ ಕಾರ್​ಪೂಲಿಂಗ್ ಮಾಡುವುದನ್ನು ಕರ್ನಾಟಕ ರಾಜ್ಯ ಸರ್ಕಾರ ನಿಷೇಧಿಸಲು ಮುಂದಾಗಿರುವ ಸುದ್ದಿ ಇದೆ. ಟ್ಯಾಕ್ಸಿ ಚಾಲಕರು ಸಾಕಷ್ಟು ಬಾರಿ ದೂರು ಕೊಟ್ಟ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ ನಗರದ ವಿವಿಧ ಆರ್​ಟಿಒ ಕಚೇರಿಗಳಿಗೆ ಈ ಬಗ್ಗೆ ನಿರ್ದೇಶನ ಹೋಗಿದೆ ಎಂದು ಟೈಮ್ಸ್ ಆಫ್ ಇಂಡಿಯ ಪತ್ರಿಕೆ ವರದಿ ಮಾಡಿದೆ.

ಬೆಂಗಳೂರಲ್ಲಿ ಕಾರ್​ಪೂಲಿಂಗ್ ನಿಷೇಧಕ್ಕೆ ಸಾರಿಗೆ ಇಲಾಖೆ ಮುಂದು; 10,000 ರೂ ವರೆಗೆ ದಂಡ ವಿಧಿಸುವ ಸಾಧ್ಯತೆ
ಕಾರ್ ಪೂಲಿಂಗ್
Follow us
|

Updated on: Oct 01, 2023 | 12:01 PM

ಬೆಂಗಳೂರು, ಅಕ್ಟೋಬರ್ 1: ಟ್ಯಾಕ್ಸಿ ಚಾಲಕರ ಆಕ್ಷೇಪಣೆ ಮಧ್ಯೆ ಸಾರಿಗೆ ಇಲಾಖೆ ಬೆಂಗಳೂರಿನಲ್ಲಿ ಕಾರ್ ಪೂಲಿಂಗ್ ಅನ್ನು ನಿಷೇಧಿಸಲು ಆಲೋಚಿಸುತ್ತಿದೆ. ಕ್ವಿಕ್ ರೈಡ್ (QuickRide), ಝೂಮ್ (Zoom Car), ಬ್ಲಾಬ್ಲಾ ಕಾರ್ (BlaBlaCar) ಇತ್ಯಾದಿ ಮೊಬೈಲ್ ಆ್ಯಪ್​ಗಳನ್ನು ಬಳಸಿ ಕಾರ್ ಪೂಲಿಂಗ್ (carpooling) ನಡೆಸುವುದನ್ನು ನಿಷೇಧಿಸುವ ಸಾಧ್ಯತೆ ಇದೆ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಈ ರೀತಿ ಅಕ್ರಮವಾಗಿ ಕಾರ್​ಪೂಲಿಂಗ್ ಮಾಡಿದರೆ 5,000 ರೂನಿಂದ 10,000 ರೂವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ. ಜೊತೆಗೆ, ವಾಹನದ ಆರ್​ಸಿಯನ್ನು 6 ತಿಂಗಳ ಕಾಲ ಅಮಾನತ್ತಿನಲ್ಲಿಡಲಾಗುವುದು ಎಂದು ಸಾರಿಗೆ ಇಲಾಖೆಯ ಜಾರಿ ವಿಭಾಗದ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಮೊನ್ನೆ (ಸೆ. 29) ವರದಿ ಮಾಡಿತ್ತು.

ಏನಿದು ಕಾರ್​ಪೂಲಿಂಗ್..?

ಕಾರ್ ಪೂಲಿಂಗ್ ಬೆಂಗಳೂರು, ಮುಂಬೈ ಇತ್ಯಾದಿ ನಗರಗಳಲ್ಲಿ ಟ್ರೆಂಡ್​ನಲ್ಲಿದೆ. ಅದರಲ್ಲೂ ನಿತ್ಯ ಕಚೇರಿಗಳಿಗೆ ಕಾರಿನಲ್ಲಿ ಹೋಗುವ ಉದ್ಯೋಗಿಗಳಲ್ಲಿ ಇದು ಜನಪ್ರಿಯವಾಗಿದೆ. ಒಂದು ಕಾರಿನಲ್ಲಿ ಒಬ್ಬ ವ್ಯಕ್ತಿ ಮಾತ್ರ ಹೋಗುವ ಬದಲು ಅದೇ ಮಾರ್ಗದಲ್ಲಿ ಇತರರನ್ನೂ ಜೊತೆಗೆ ಸೇರಿಸಿಕೊಂಡು ಕರೆದೊಯ್ಯಬಹುದು. ಇದರಿಂದ ರಸ್ತೆಗಿಳಿಯುವ ವಾಹನಗಳ ಸಂಖ್ಯೆ ಕಡಿಮೆ ಆಗುತ್ತದೆ, ಪೆಟ್ರೋಲ್ ವೆಚ್ಚ ತಗ್ಗುತ್ತದೆ. ಐಟಿ ವಲಯದಲ್ಲಿ ಈ ಕಾರ್ ಪೂಲಿಂಗ್ ಬಹಳ ಜನಪ್ರಿಯವಾಗಿದೆ.

ಇದನ್ನೂ ಓದಿ: LPG Price Hike: 19ಕೆಜಿ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರ ಏರಿಕೆ

ಈಗ ಕಾರ್ ಪೂಲಿಂಗ್ ನಿಷೇಧಿಸುತ್ತಿರುವುದು ಯಾಕೆ?

ವೈಟ್ ಬೋರ್ಡ್ ಇರುವ ಖಾಸಗಿ ವಾಹನಗಳನ್ನು ಕಾರ್ ಪೂಲಿಂಗ್ ಮೂಲಕ ಕಮರ್ಷಿಯಲ್ ಲಾಭಕ್ಕೆ ಬಳಕೆ ಮಾಡಲಾಗುತ್ತಿದೆ. ವಿವಿಧ ಟ್ರಾನ್ಸ್​ಪೋರ್ಟ್ ಆ್ಯಪ್​ಗಳನ್ನು ಬಳಸಿ ಕಾರ್ ಪೂಲಿಂಗ್ ಮಾಡಲಾಗುತ್ತಿದೆ. ಇದರಿಂದ ಕಮರ್ಷಿಯಲ್ ಲೈಸೆನ್ಸ್ ಹೊಂದಿರುವ ಟ್ಯಾಕ್ಸಿ ವಾಹನಗಳ ವ್ಯವಹಾರಕ್ಕೆ ಧಕ್ಕೆ ಆಗುತ್ತಿದೆ ಎಂಬುದು ಈಗ ಎದ್ದಿರುವ ತಗಾದೆ. ಯಾಕೆಂದರೆ ಟ್ಯಾಕ್ಸಿ ಕಾರುಗಳು ಸಾಕಷ್ಟು ಶುಲ್ಕ ತೆತ್ತು ಕಮರ್ಷಿಯಲ್ ಲೈಸೆನ್ಸ್ ಹೊಂದಿರುತ್ತವೆ. ಪ್ರೈವೇಟ್​ ವಾಹನಗಳನ್ನು ಈ ರೀತಿ ಶುಲ್ಕ ಇಲ್ಲದೇ ಕಮರ್ಷಿಯಲ್ ಆಗಿ ಬಳಕೆ ಮಾಡಲು ಅವಕಾಶ ಕೊಡುವುದು ಎಷ್ಟು ಸರಿ ಎಂಬುದು ಟ್ಯಾಕ್ಸಿ ಚಾಲಕರ ಪ್ರಶ್ನೆ.

ವರದಿ ಪ್ರಕಾರ ಕಾರ್ ಪೂಲಿಂಗ್ ಮಾಡುತ್ತಿರುವ ಖಾಸಗಿ ವಾಹನಗಳ ಮೇಲೆ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನ ವಿವಿಧ ಆರ್​ಟಿಒ ಕಚೇರಿಗಳಿಗೆ ಸಾರಿಗೆ ಇಲಾಖೆಯಿಂದ ನಿರ್ದೇಶನ ಹೋಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ₹ 2,000 ನೋಟುಗಳ ವಿನಿಮಯಕ್ಕೆ ಅ.7ರವರೆಗೆ ಕಾಲಾವಕಾಶ: ಆರ್​​ಬಿಐ

ಕಾರ್ ಪೂಲಿಂಗ್ ವಿರುದ್ಧ ಕ್ರಮ ಕೈಗೊಳ್ಳುತ್ತಿರುವುದು ಕರ್ನಾಟಕ ಮೊದಲ ರಾಜ್ಯವಲ್ಲ. ಮಹಾರಾಷ್ಟ್ರ ಇದೇ ಜನವರಿಯಲ್ಲಿ ಇಂಥದ್ದೇ ಕ್ರಮ ಕೈಗೊಂಡಿತ್ತು. ಕಾರ್​ಪೂಲಿಂಗ್ ಮತ್ತು ಬೈಕ್ ಶೇರಿಂಗ್ ಅಪ್ಲಿಕೇಶನ್​ಗಳು ಕಮರ್ಷಿಯಲ್ ಅಲ್ಲದ ವಾಹನಗಳನ್ನು ಬಳಸುವಂತಿಲ್ಲ ಎಂದು ಅಲ್ಲಿ ಸರ್ಕಾರ ಆದೇಶ ಹೊರಡಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ