NSE co-location scam: ಫೋನ್​ ಕದ್ದಾಲಿಕೆ ಪ್ರಕರಣದಲ್ಲಿ ಚಿತ್ರಾ, ರವಿ ನರೇನ್ ಹಾಗೂ ಸಂಜಯ್ ಪಾಂಡೆ ವಿರುದ್ಧ ಎಫ್​ಐಆರ್​

ಕೇಂದ್ರೀಯ ತನಿಖಾ ದಳದಿಂದ ಎನ್​ಎಸ್​ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ, ರವಿ ನರೇನ್ ಹಾಗೂ ಮಾಜಿ ಪೊಲೀಸ್ ಕಮಿಷನರ್ ಸಂಜಯ್ ಪಾಂಡೆ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

NSE co-location scam: ಫೋನ್​ ಕದ್ದಾಲಿಕೆ ಪ್ರಕರಣದಲ್ಲಿ ಚಿತ್ರಾ, ರವಿ ನರೇನ್ ಹಾಗೂ ಸಂಜಯ್ ಪಾಂಡೆ ವಿರುದ್ಧ ಎಫ್​ಐಆರ್​
ಚಿತ್ರಾ ರಾಮಕೃಷ್ಣ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on: Jul 08, 2022 | 5:39 PM

ರಾಷ್ಟ್ರೀಯ ವಿನಿಮಯ ಕೇಂದ್ರ- ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ (NSE)ನ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ, ರವಿ ನರೇನ್ ಮತ್ತು ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಸಂಜಯ್ ಪಾಂಡೆ ವಿರುದ್ಧ ಕೇಂದ್ರೀಯ ತನಿಖಾ ದಳವು (CBI) ಹೊಸದಾಗಿ ಪ್ರಕರಣ ದಾಖಲಿಸಿಕೊಂಡಿದೆ. 2009ರಿಂದ 2017ರ ಮಧ್ಯೆ ಎನ್​ಎಸ್​ಇ ಉದ್ಯೋಗಿಗಳ ಫೋನ್​ ಕದ್ದಾಲಿಕೆ ಮಾಡಿರುವ ಆರೋಪದಲ್ಲಿ ಗೃಹ ವ್ಯವಹಾರಗಳ ಸಚಿವಾಲಯದ (MHA) ನಿರ್ದೇಶನದ ಮೇರೆಗೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ಹೊಸ ವರದಿಯಲ್ಲಿ ಸಿಬಿಐನಿಂದ ಇತರ ಆರೋಪಗಳು ಕೂಡ ಸೇರ್ಪಡೆ ಆಗಿದೆ. ಭಾರತದ ವಿವಿಧೆಡೆ ಇರುವ ಮಾಜಿ ಪೊಲೀಸ್​ ಕಮಿಷನರ್​ ಸಂಜಯ್​ ಪಾಂಡೆಗೆ ಸೇರಿದ ಜಾಗಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿದೆ.

ಎಫ್​ಐಆರ್​ನಲ್ಲಿ ತಿಳಿಸಿರುವಂತೆ, ಮೂವರು ಆರೋಪಿಗಳು ಕಾನೂನುಬಾಹಿರವಾಗಿ 2009ರಿಂದ 2017ರ ಮಧ್ಯೆ ಎನ್​ಎಸ್​ಇ ಉದ್ಯೋಗಿಗಳ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಈ ಕಾನೂನು ಬಾಹಿರ ನಿಗಾಗೆ ಚಿತ್ರಾ ಮತ್ತು ನರೇನ್ ಇವರಿಬ್ಬರು ಸಂಜಯ್ ಪಾಂಡೆಯ ಸಹಾಯ ಪಡೆದಿದ್ದಾರೆ ಎಂದು ಹೇಳಲಾಗಿದೆ. ಕಳೆದ ತಿಂಗಳು ಸೆಕ್ಯೂರಿಟೀಸ್ ಎಕ್ಸ್​ಚೇಂಜ್ ಬೋರ್ಡ್​ ಆಫ್ ಇಂಡಿಯಾ (SEBI)ದಿಂದ 2015ರ ಡಾರ್ಕ್ ಫೈಬರ್ ಪ್ರಕರಣದಲ್ಲಿ ಎನ್ಎಸ್​​ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ, ಎನ್​ಎಸ್​ಇ ಸಿಒಒ ಆನಂದ್ ಸುಬ್ರಮಣಿಯನ್ ಮತ್ತು ಎನ್​ಎಸ್​ಇ ಸೇರಿದಂತೆ 18 ಸಂಸ್ಥೆಗಳನ್ನು ಕಂಡು ಹಿಡಿಯಲಾಗಿತ್ತು.

ಬಂಡವಾಳ ಮಾರುಕಟ್ಟೆಯ ನಿಯಂತ್ರಕ ಸಂಸ್ಥೆಯಾದ ಸೆಬಿ ಕ್ಯುಮುಲೇಟಿವ್ (ಸಂಚಿತ) ದಂಡ 43.8 ಕೋಟಿ ರೂಪಾಯಿಯನ್ನು 18 ಸಂಸ್ಥೆಗಳ ಮೇಲೆ ಹಾಕಲಾಗಿತ್ತು. ಅದರಲ್ಲಿ ಎನ್​ಎಸ್​ಇವೊಂದಕ್ಕೇ 7 ಕೋಟಿ ರೂಪಾಯಿ ದಂಡ ಹಾಕಲಾಗಿತ್ತು. ಎನ್​ಎಸ್​ಇ ಮುಖ್ಯ ಬಿಜಿನೆಸ್ ಡೆವಲಪ್​ಮೆಂಟ್ ಅಧಿಕಾರಿ ರವಿ ವಾರಾಣಸಿ ಅವರಿಗೆ 5 ಕೋಟಿ ಹಾಗೂ ಚಿತ್ರಾ ರಾಮಕೃಷ್ಣಗೆ 5 ಕೋಟಿ ದಂಡ ಹಾಕಲಾಗಿತ್ತು.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ