ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (MSP) ಏರಿಕೆಗೆ ಕೇಂದ್ರದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. ಮುಂಗಾರು ಮಾರುಕಟ್ಟೆ ಋತುವಿನಲ್ಲಿ ಬೆಳೆಗಳ ಬೆಂಬಲ ಬೆಲೆ ಏರಿಕೆ ಮಾಡಲಾಗಿದೆ. ಬೆಳೆಗಳ ಉತ್ಪಾದನಾ ವೆಚ್ಚದ 1.5ರಷ್ಟು ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ಬೇಳೆಯ ಬೆಂಬಲ ಬೆಲೆ ಕ್ವಿಂಟಲ್ಗೆ 480 ರೂಪಾಯಿ, ಎಳ್ಳು ಬೆಂಬಲ ಬೆಲೆ ಕ್ವಿಂಟಲ್ಗೆ 523 ರೂಪಾಯಿ, ಸೂರ್ಯಕಾಂತಿ ಬೀಜದ ಬೆಂಬಲ ಬೆಲೆ ಕ್ವಿಂಟಲ್ಗೆ 385 ರೂಪಾಯಿ, ಸೋಯಾಬಿನ್ ಬೆಂಬಲ ಬೆಲೆ ಕ್ವಿಂಟಲ್ಗೆ 350 ರೂಪಾಯಿ ಹೆಚ್ಚಳ ಮಾಡುವುದಕ್ಕೆ ನಿರ್ಧರಿಸಲಾಗಿದೆ.
ಅದೇ ರೀತಿ ತೊಗರಿ ಮೇಲಿನ ಬೆಂಬಲ ಬೆಲೆ ಕ್ವಿಂಟಲ್ಗೆ 300 ರೂಪಾಯಿ, ಹೆಸರುಕಾಳು ಮೇಲಿನ ಬೆಂಬಲ ಬೆಲೆ ಕ್ವಿಂಟಲ್ಗೆ 300 ರೂಪಾಯಿ, ರಾಗಿ ಬೆಂಬಲ ಬೆಲೆ ಕ್ವಿಂಟಲ್ಗೆ 201 ರೂಪಾಯಿ ಏರಿಕೆ ಮಾಡಲಾಗಿದೆ ಎಂದು ಕೇಂದ್ರ ವಾರ್ತಾ, ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಕೇಂದ್ರ ಸಂಪುಟ ಸಭೆಯ ಬಳಿಕ ಹೇಳಿಕೆ ನೀಡಿದ್ದಾರೆ.
ಮೂಲಗಳ ಪ್ರಕಾರ, 2022-23ರ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಶೇ 5ರಿಂದ 20ರಷ್ಟು ಹೆಚ್ಚಾಗಬಹುದು. ಸಂಪುಟದ ನಿರ್ಧಾರದ ನಂತರ ಖಾರಿಫ್ ಬೆಳೆಗಳ, ಅಂದರೆ ಭತ್ತ ಮತ್ತು ಸೋಯಾಬೀನ್‌ನ ಎಂಎಸ್‌ಪಿಯಲ್ಲಿ ಹೆಚ್ಚಳವಾಗಲಿದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಮೆಕ್ಕೆಜೋಳದ ಎಂಎಸ್‌ಪಿ ಹೆಚ್ಚಿಸುವ ಪ್ರಸ್ತಾವನೆಗೂ ಸಂಪುಟ ಅನುಮೋದನೆ ನೀಡಿದೆ.
ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Explainer | ಕನಿಷ್ಠ ಬೆಂಬಲ ಬೆಲೆ MSP ಎಂದರೇನು? ಪಂಜಾಬ್ ರೈತರಿಗೇಕೆ ಕೃಷಿ ಕಾಯ್ದೆಗಳ ಬಗ್ಗೆ ಇಷ್ಟು ಆತಂಕ?
Published On - 6:20 pm, Wed, 8 June 22