ಗೃಹಸಾಲಗಳ ಬಡ್ಡಿಗೆ ಸಬ್ಸಿಡಿ; ಕೇಂದ್ರದಿಂದ 60,000 ಕೋಟಿ ರೂ ಮೊತ್ತದ ಯೋಜನೆ ಶೀಘ್ರದಲ್ಲೇ?

Home Loan Interest Subsidy: ಸ್ವಾತಂತ್ರ್ಯೋತ್ಸವ ಭಾಷದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನಗರ ಪ್ರದೇಶಗಳಲ್ಲಿ ಬಡವರು ಮತ್ತು ಮಧ್ಯಮವರ್ಗದವರ ಸ್ವಂತ ಮನೆ ಕನಸು ನನಸು ಮಾಡಲು ಸಹಾಯವಾಗುವ ಯೋಜನೆಯನ್ನು ಘೋಷಿಸಿದ್ದರು. ಆ ಯೋಜನೆಯಲ್ಲಿ ಕಡಿಮೆ ಬಡ್ಡಿದರದಲ್ಲಿ ಗೃಹಸಾಲ ಕೊಡುವುದೂ ಸೇರಿದೆ. ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದ್ದು, ಸಬ್ಸಿಡಿ ದರದಲ್ಲಿ ಸುಮಾರು 60,000 ಕೋಟಿ ರೂ ಮೊತ್ತದ ಗೃಹಸಾಲಗಳನ್ನು ಒದಗಿಸುವ ಇರಾದೆಯಲ್ಲಿ ಸರ್ಕಾರ ಇದೆ.

ಗೃಹಸಾಲಗಳ ಬಡ್ಡಿಗೆ ಸಬ್ಸಿಡಿ; ಕೇಂದ್ರದಿಂದ 60,000 ಕೋಟಿ ರೂ ಮೊತ್ತದ ಯೋಜನೆ ಶೀಘ್ರದಲ್ಲೇ?
ಗೃಹಸಾಲ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 25, 2023 | 6:10 PM

ನವದೆಹಲಿ, ಸೆಪ್ಟೆಂಬರ್ 25: ಮುಂದಿನ ಐದು ವರ್ಷದಲ್ಲಿ ನಗರ ಪ್ರದೇಶಗಳಲ್ಲಿ ಸಣ್ಣ ಗೃಹಸಾಲಗಳಿಗೆ ಸಬ್ಸಿಡಿಗಳನ್ನು (Subsidized Home Loans) ಒದಗಿಸಲು ಕೇಂದ್ರ ಚಿಂತನೆ ನಡೆಸಿದೆ. ಇಬ್ಬರು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದ್ದು, ಸಬ್ಸಿಡಿ ದರದಲ್ಲಿ ಸುಮಾರು 60,000 ಕೋಟಿ ರೂ ಮೊತ್ತದ ಗೃಹಸಾಲಗಳನ್ನು ಒದಗಿಸುವ ಇರಾದೆಯಲ್ಲಿ ಸರ್ಕಾರ ಇದೆ. ಸ್ವಾತಂತ್ರ್ಯೋತ್ಸವ ಭಾಷದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನಗರ ಪ್ರದೇಶಗಳಲ್ಲಿ ಬಡವರು ಮತ್ತು ಮಧ್ಯಮವರ್ಗದವರ ಸ್ವಂತ ಮನೆ ಕನಸು ನನಸು ಮಾಡಲು ಸಹಾಯವಾಗುವ ಯೋಜನೆಯನ್ನು ಘೋಷಿಸಿದ್ದರು. ಆ ಯೋಜನೆಯಲ್ಲಿ ಕಡಿಮೆ ಬಡ್ಡಿದರದಲ್ಲಿ ಗೃಹಸಾಲ ಕೊಡುವುದೂ ಸೇರಿದೆ.

‘ನಗರಗಳಲ್ಲಿ ಬಾಡಿಗೆ ಮನೆ, ಅಥವಾ ಸ್ಲಂ, ಗುಡಿಸಲು, ಅನಧಿಕೃತ ಕಾಲೊನಿಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ನೆರವಾಗುವಂತಹ ಹೊಸ ಯೋಜನೆಯನ್ನು ನಾವು ತರುತ್ತಿದ್ದೇವೆ’ ಎಂದು ಪ್ರಧಾನಿಗಳು ಆಗಸ್ಟ್ 15ರಂದು ಘೋಷಿಸಿದ್ದರು. ಈ ಹೊಸ ಯೋಜನೆಯನ್ನು ಅಂತಿಮಗೊಳಿಸಲು ಪ್ರಯತ್ನಗಳಾಗುತ್ತಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಹೊಸ ಮನೆ ಖರೀದಿಸುವ ಮುನ್ನ ಈ ಏಳು ಅಂಶಗಳನ್ನು ಪರಿಗಣಿಸಿ; ಇದು ಜೀವಮಾನದ ಸಾಧನೆ ಎಂಬುದು ನೆನಪಿರಲಿ

ಸದ್ಯ ಈ ಯೋಜನೆ ಬಗ್ಗೆ ತಿಳಿದಿರುವ ಮಾಹಿತಿ ಪ್ರಕಾರ, 9 ಲಕ್ಷ ರೂವರೆಗಿನ ಸಾಲಕ್ಕೆ ವಾರ್ಷಿಕ ಬಡ್ಡಿದರದಲ್ಲಿ ಶೇ. 6.5ರವರೆಗೂ ಸಬ್ಸಿಡಿ ಕೊಡಲಾಗುತ್ತದೆ. ಹಾಗು, 20 ವರ್ಷದವರೆಗಿನ 50 ಲಕ್ಷ ರೂಗಿಂತ ಕಡಿಮೆ ಮೊತ್ತದ ಸಾಲಕ್ಕೂ ಬಡ್ಡಿದರದಲ್ಲಿ ಸಬ್ಸಿಡಿ ಕೊಡುವ ಪ್ರಸ್ತಾಪ ಇದೆ.

ಈ ಪ್ರಸ್ತಾಪಿತ ಯೋಜನೆ ಜಾರಿಯಾದರೆ, ಫಲಾನುಭವಿಗಳು ಬ್ಯಾಂಕುಗಳಿಂದ ಸಾಲ ಪಡೆಯಬಹುದು. ಬಡ್ಡಿ ಸಬ್ಸಿಡಿಯ ಹಣವನ್ನು ಸರ್ಕಾರವೇ ನೇರವಾಗಿ ಫಲಾನುಭವಿಗಳ ಖಾತೆಗೆ ಹಾಕಲಿದೆ. ಬ್ಯಾಂಕುಗಳು ಈಗಾಗಲೇ ಫಲಾನುಭವಿಗಳನ್ನು ಗುರುತಿಸಲು ಆರಂಭಿಸಿವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್