DA Hike: ನೌಕರರ ಡಿಎ ಶೇ. 42ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದು?

Central Govt Likely To Raise DA To 42%- ಕೇಂದ್ರ ಸರ್ಕಾರ ತನ್ನ 1 ಕೋಟಿಗೂ ಹೆಚ್ಚು ನೌಕರರು ಮತ್ತು ಪಿಂಚಣಿದಾರರಿಗೆ ನೀಡಲಾಗುವ ತುಟ್ಟಿಭತ್ಯೆಯನ್ನು (ಡಿಎ) ಶೇ. 4ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ. ಈಗ ನೀಡಲಾಗುತ್ತಿರುವ ಶೇ. 38ರಷ್ಟು ಡಿಎ ಅನ್ನು ಶೇ. 42ಕ್ಕೆ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.

DA Hike: ನೌಕರರ ಡಿಎ ಶೇ. 42ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದು?
ಡಿಎ ಹೆಚ್ಚಳ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 05, 2023 | 2:08 PM

ನವದೆಹಲಿ: ಕೇಂದ್ರ ಸರ್ಕಾರದ ನೌಕರರಿಗೆ ಯುಗಾದಿ ಹಬ್ಬದ ಗಿಫ್ಟ್ ಈ ಬಾರಿ ಸಖತ್ತಾಗಿ ಸಿಗುತ್ತಿರುವಂತಿದೆ. ಕೇಂದ್ರ ಸರ್ಕಾರ ತನ್ನ 1 ಕೋಟಿಗೂ ಹೆಚ್ಚು ನೌಕರರು ಮತ್ತು ಪಿಂಚಣಿದಾರರಿಗೆ ನೀಡಲಾಗುವ ತುಟ್ಟಿಭತ್ಯೆಯನ್ನು (DA- Dearness Allowance) ಶೇ. 4ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ. ಈಗ ನೀಡಲಾಗುತ್ತಿರುವ ಶೇ. 38ರಷ್ಟು ಡಿಎ ಅನ್ನು ಶೇ. 42ಕ್ಕೆ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ ಎಂಬಂತಹ ಮಾಹಿತಿಯನ್ನು ಪಿಟಿಐ ಸುದ್ದಿ ಸಂಸ್ಥೆ ತನ್ನ ವರದಿಯೊಂದರಲ್ಲಿ ತಿಳಿಸಿದೆ. ಈ ಸುದ್ದಿ ನಿಜವೇ ಆದಲ್ಲಿ ಸರ್ಕಾರಿ ನೌಕರರಿಗೆ ಹಬ್ಬದೂಟದ ರುಚಿ ಹೆಚ್ಚಾಗುವುದಂತೂ ಹೌದು.

ಡಿಯರ್ನೆಸ್ ಅಲೋಯನ್ಸ್ ಅಥವಾ ತುಟ್ಟಿಭತ್ಯೆ ಹೆಚ್ಚಳವಾಗಬೇಕಾ ಅಥವಾ ಎಷ್ಟು ಹೆಚ್ಚಳ ಆಗಬೇಕು ಎಂಬುದನ್ನು ತೀರ್ಮಾನಿಸುವುದಕ್ಕೆ ಸರ್ಕಾರದ ಬಳಿ ಒಂದು ವ್ಯವಸ್ಥೆ ಇದೆ. ಕೇಂದ್ರದ ಕಾರ್ಮಿಕ ಸಚಿವಾಲಯದ ಒಂದು ಭಾಗವಾಗಿರುವ ಕಾರ್ಮಿಕ ದಳ (ಲೇಬರ್ ಬ್ಯೂರೋ) ಪ್ರತೀ ತಿಂಗಳು ಔದ್ಯಮಿಕ ಕಾರ್ಮಿಕರ ಗ್ರಾಹಕ ಬೆಲೆ ಸೂಚಿ (CPI-IW) ಬಗ್ಗೆ ವರದಿ ನೀಡುತ್ತಿರುತ್ತದೆ. ಇದರ ಆಧಾರದ ಮೇಲೆ ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳದ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Pakistan Crisis: ಸರ್ಕಾರಿ ನೌಕರರ ಸಂಬಳ ಕಡಿತ, ಪೆಟ್ರೋಲ್ ಮೇಲೆ ಸುಂಕ ಹೆಚ್ಚಳ; ಪಾಕಿಸ್ತಾನಕ್ಕೆ ಕಠಿಣ ಷರತ್ತು ವಿಧಿಸಿದ ಐಎಂಎಫ್

ಅಂತೆಯೇ, 2022ರ ಡಿಸೆಂಬರ್ ತಿಂಗಳಿನ ವರದಿಯನ್ನು ಸಿಪಿಐಐಡಬ್ಲ್ಯೂ ಜನವರಿ 31ರಂದು ಬಿಡುಗಡೆ ಮಾಡಿದೆ. 4.23 ಪ್ರತಿಶತದಷ್ಟು ಡಿಎ ಹೆಚ್ಚಳ ಮಾಡುವುದಕ್ಕೆ ಶಿಫಾರಸು ಮಾಡಲಾಯಿತು. ಸರ್ಕಾರ ಅಂತಿಮವಾಗಿ ಶೇ. 4ರ ಹೆಚ್ಚಳಕ್ಕೆ ತೀರ್ಮಾನ ಮಾಡುವ ಸಾಧ್ಯತೆ ಇದೆ ಎಂದು ಅಖಿಲ ಭಾರತ ರೈಲ್ವೆ ಉದ್ಯೋಗಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಿವಗೋಪಾಲ್ ಮಿಶ್ರಾ ಹೇಳಿದ್ದಾರೆನ್ನಲಾಗಿದೆ.

ಒಂದು ವೇಳೆ ಕೇಂದ್ರ ಸರ್ಕಾರ ಡಿಎ ಹೆಚ್ಚಳಕ್ಕೆ ನಿರ್ಧರಿಸಿದ್ದೇ ಆದಲ್ಲಿ ಅದು 2023 ಜನವರಿ 1ರಿಂದ ಜಾರಿಗೆ ಬರುತ್ತದೆ. ಕಳೆದ ವರ್ಷ ಸರ್ಕಾರ ಡಿಎ ಅನ್ನು ಶೇ. 34ರಿಂದ ಶೇ. 38ಕ್ಕೆ ಹೆಚ್ಚಿಸಿತ್ತು. ಈ ಬಾರಿಯೂ ಅದೇ ಗತಿಯಲ್ಲಿ ತುಟ್ಟಿಭತ್ಯೆ ಹೆಚ್ಚಳವಾಗುವ ಸಾಧ್ಯತೆ ದಟ್ಟವಾಗಿದೆ. ಕೇಂದ್ರ ಸರ್ಕಾರದ ಸುಪರ್ದಿಯಲ್ಲಿ ಒಂದು ಕೋಟಿಗೂ ಹೆಚ್ಚು ನೌಕರರು ಮತ್ತು ಪಿಂಚಣಿದಾರರಿದ್ದಾರೆ.

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ