AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಿ ಬಾರ್‌ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ: 99.9% ಶುದ್ಧತೆಯ ಸಿಲ್ವರ್‌ ಬಾರ್ಸ್​​​ಗೆ ಪರವಾನಗಿ ಕಡ್ಡಾಯ

ಕೇಂದ್ರ ಸರ್ಕಾರವು ಬೆಳ್ಳಿ ಬಾರ್ ಆಮದಿನ ಮೇಲೆ ನಿರ್ಬಂಧ ಹೇರಿದೆ. ಇನ್ಮುಂದೆ 99.9% ಶುದ್ಧತೆಯ ಬೆಳ್ಳಿ ಬಾರ್ ಆಮದಿಗೆ ವಿಶೇಷ ಪರವಾನಗಿ ಕಡ್ಡಾಯವಾಗಿದೆ. ಪಶ್ಚಿಮ ಏಷ್ಯಾದ ಸಂಘರ್ಷ, ದೇಶದಲ್ಲಿ ಬೆಳ್ಳಿ ಗಟ್ಟಿಗಳ ಕೊರತೆ ಮತ್ತು ಗಗನಕ್ಕೇರಿರುವ ಬೆಲೆಗಳಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಬೆಳ್ಳಿ ಬಾರ್‌ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ: 99.9% ಶುದ್ಧತೆಯ ಸಿಲ್ವರ್‌ ಬಾರ್ಸ್​​​ಗೆ ಪರವಾನಗಿ ಕಡ್ಡಾಯ
ಸಿಲ್ವರ್‌ ಬಾರ್ಸ್‌ (ಎಐ ಚಿತ್ರ)Image Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on:May 16, 2026 | 8:44 PM

Share

ನವದೆಹಲಿ, ಮೇ 16: ದೇಶದಲ್ಲಿ ಬೆಳ್ಳಿ ಬೆಲೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ (Central Government) ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಬೆಳ್ಳಿ ಬಾರ್ (Silver Bar) ಆಮದು ಮಾಡಿಕೊಳ್ಳಲು ವಿಶೇಷ ಪರವಾನಗಿಯನ್ನು ಕಡ್ಡಾಯಗೊಳಿಸಿ ನಿರ್ಬಂಧ ಹೇರಿದೆ. ಈವರೆಗೂ ಸಿಲ್ವರ್ ಬಾರ್ಸ್ ಆಮದಿನ ಮೇಲೆ ಯಾವುದೇ ನಿರ್ಬಂಧ ಇರಲಿಲ್ಲ. ಆದರೆ, ಹೊಸ ನಿಯಮದ ಪ್ರಕಾರ 99.9% ಶುದ್ಧತೆಯ ಬೆಳ್ಳಿ ಬಾರ್‌ ಆಮದು ಮಾಡಲು ವಾಣಿಜ್ಯ ಸಚಿವಾಲಯದ ವಿಶೇಷ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ.

ಮುಖ್ಯಾಂಶಗಳು

  • ಬೆಳ್ಳಿ ಬಾರ್ ಆಮದಿಗೆ ಕೇಂದ್ರ ಬ್ರೇಕ್!
  • 99.9% ಶುದ್ಧತೆಯ ಬೆಳ್ಳಿ ಬಾರ್‌ ಆಮದಿಗೆ ಪರವಾನಗಿ ಕಡ್ಡಾಯ
  • ಸಿಲ್ವರ್‌ ಬಾರ್ಸ್‌ ಬೆಲೆ ಮತ್ತಷ್ಟು ಏರಿಕೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಎಫೆಕ್ಟ್​​

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷ ಹಾಗೂ ಭೌಗೋಳಿಕ ರಾಜಕೀಯ ಅಸ್ಥಿರತೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಆಮದು ಅವಲಂಬನೆಯನ್ನು ತಗ್ಗಿಸಿ ದೇಶೀಯ ಮಾರುಕಟ್ಟೆ ಸ್ಥಿರಗೊಳಿಸುವುದು ಇದರ ಉದ್ದೇಶವಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಚಿನ್ನದ ಮೇಲಿನ ವಿವಿಧ ಹೂಡಿಕೆಗಳಿಗೆ ವಿವಿಧ ತೆರಿಗೆಗಳು ಹೇಗೆ? ಇಲ್ಲಿದೆ ಡೀಟೇಲ್ಸ್

ಇನ್ನು ಈಗಾಗಲೇ ದೇಶದ ಮಾರುಕಟ್ಟೆಗಳಲ್ಲಿ ಬೆಳ್ಳಿ ಗಟ್ಟಿಗಳ ತೀವ್ರ ಕೊರತೆ ಉಂಟಾಗಿದೆ. ಬೇಡಿಕೆ ಹೆಚ್ಚಳ ಮತ್ತು ಪೂರೈಕೆಯಲ್ಲಿ ವ್ಯತ್ಯಯದಿಂದಾಗಿ ಬೆಳ್ಳಿ ಬೆಲೆ ದಾಖಲೆಯ ಮಟ್ಟಕ್ಕೆ ಏರಿದೆ. ಈಗ ಆಮದಿಗೆ ನಿರ್ಬಂಧ ವಿಧಿಸಿರುವುದರಿಂದ ಮುಂದಿನ ದಿನಗಳಲ್ಲಿ ಬೆಳ್ಳಿ ಬೆಲೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ.

ಎಎನ್​​ಐ ಟ್ವೀಟ್​​

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಶನಿವಾರ ಹೊರಡಿಸಿರುವ ಆದೇಶದ ಪ್ರಕಾರ, ಶೇಕಡಾ 99.9 ಅಥವಾ ಅದಕ್ಕಿಂತ ಹೆಚ್ಚಿನ ತೂಕದ ಶುದ್ಧ ಬೆಳ್ಳಿಯ ಬಾರ್​​​ಗಳ ಆಮದು ನೀತಿಯನ್ನು ಈವರೆಗೆ ಇದ್ದ ಮುಕ್ತ ವರ್ಗದಿಂದ ನಿರ್ಬಂಧಿತ ವರ್ಗಕ್ಕೆ ಪರಿಷ್ಕರಿಸಲಾಗಿದೆ. ಇದರೊಂದಿಗೆ ಇತರೆ ಬೆಳ್ಳಿ ಬಾರ್​ಗಳ ವರ್ಗಕ್ಕೂ ಇದೇ ನಿಯಮ ಅನ್ವಯವಾಗಲಿದೆ.

ಅಮೂಲ್ಯ ಲೋಹಗಳ ಆಮದಿನ ಮೇಲೆ ಕೇಂದ್ರ ಸರ್ಕಾರ ಮೇ 13ರಿಂದ ಭಾರೀ ಸುಂಕ ಏರಿಕೆ ಮಾಡಿದೆ. ಈವರೆಗೆ ಶೇ.6ರಷ್ಟಿದ್ದ ಆಮದು ಸುಂಕವನ್ನು ಏಕಾಏಕಿ ಶೇ.15ಕ್ಕೆ ಹೆಚ್ಚಿಸಲಾಗಿದೆ. ಇದರೊಂದಿಗೆ 2024ರಲ್ಲಿ ಮಾಡಿದ್ದ ಸುಂಕ ಕಡಿತವನ್ನು ಸರ್ಕಾರ ಹಿಂಪಡೆದಂತಾಗಿದೆ.

ಇದನ್ನೂ ಓದಿ: Gold Rate: ಸತತ ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ದರಪಟ್ಟಿ

ಆದೇಶದ ಪ್ರಕಾರ, ಸರ್ಕಾರವು ಚಿನ್ನ ಮತ್ತು ಬೆಳ್ಳಿ ಆಮದಿನ ಹಲವು ವರ್ಗಗಳ ಮೇಲೆ ಮೂಲ ಕಸ್ಟಮ್ಸ್ ಸುಂಕವನ್ನು ಶೇ.5ರಿಂದ ಶೇ.10ಕ್ಕೆ ಹೆಚ್ಚಿಸಿದೆ. ಜೊತೆಗೆ ಶೇ.5ರ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಯಥಾಸ್ಥಿತಿಯಲ್ಲಿದ್ದು, ಇದರಿಂದ ಆಮದು ತೆರಿಗೆ ಶೇ.15ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:15 pm, Sat, 16 May 26

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ