PF: ಸಂಘಟಿತ ವಲಯದ ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಪಾಲು 2022ರ ತನಕ ಕೇಂದ್ರದಿಂದಲೇ ಪಾವತಿ

ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಕೊಡುಗೆಯನ್ನು 2022ರ ತನಕ ಕೇಂದ್ರದಿಂದಲೇ ಪಾವತಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.

PF: ಸಂಘಟಿತ ವಲಯದ ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಪಾಲು 2022ರ ತನಕ ಕೇಂದ್ರದಿಂದಲೇ ಪಾವತಿ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on:Aug 21, 2021 | 8:25 PM

ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಅಡಿಯಲ್ಲಿ ಕಳೆದ ವರ್ಷ ಘೋಷಣೆ ಮಾಡಿ ವಿಚಾರವನ್ನು ಮತ್ತೊಮ್ಮೆ ತಿಳಿಸುತ್ತಾ, ಕೇಂದ್ರ ಹಣಕಾಸು ಸಚಿವೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಎಎನ್ಐ ಟ್ವೀಟ್​ನಲ್ಲಿ ಸ್ಪಷ್ಟಪಡಿಸಲಾಗಿದೆ. ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಣ್ಣ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವವರಿಗೆ ಹಾಗೂ ಸಣ್ಣ ಸಂಸ್ಥೆಗಳನ್ನು ನಡೆಸುವವರಿಗೆ ಬೆಂಬಲ ನೀಡುವ ಉದ್ದೇಶದಿಂದ ಕೆಲವು ಷರತ್ತುಗಳೊಂದಿಗೆ, ಉದ್ಯೋಗದಾತರು ಮತ್ತು ಉದ್ಯೋಗಿಗಳ ಪಿಎಫ್​ ಕೊಡುಗೆಯನ್ನು ಸರ್ಕಾರದಿಂದಲೇ ಪಾವತಿ ಮಾಡಲಾಗುವುದು ಎಂದು ತಿಳಿಸಲಾಗಿತ್ತು.

ಇದಕ್ಕೂ ಮುನ್ನ, ಕೆಲಸ ಕಳೆದುಕೊಂಡು, ಆ ನಂತರ ಅವರನ್ನು ಮತ್ತೆ ಕೆಲಸಕ್ಕೆ ಕರೆಸಿಕೊಂಡಿದ್ದಲ್ಲಿ ಅಂತಹ ಸಂಘಟಿತ ವಲಯದ ಇಪಿಎಫ್​ಒ ನೋಂದಾಯಿತ ಸಣ್ಣ ಪ್ರಮಾಣದ ಘಟಕಗಳ ಉದ್ಯೋಗದಾತರು ಮತ್ತು ಉದ್ಯೋಗಿಗಳ ಪಿಎಫ್​ ಪಾಲನ್ನು 2022ರ ತನಕ ಕೇಂದ್ರ ಸರ್ಕಾರವೇ ಪಾವತಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ ಎಂದು ಎಎನ್​ಐ ತಿಳಿಸಿತ್ತು.

ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್​ಡೌನ್ ಹೇರಿದ್ದ ಕಾರಣಕ್ಕೆ ಉತ್ಪಾದನೆ, ಪೂರೈಕೆ ಜಾಲ ಹಾಗೂ ಬೇಡಿಕೆಯಲ್ಲಿ ಭಾರೀ ಏರುಪೇರಾಗಿತ್ತು. ಸಣ್ಣ- ಪುಟ್ಟ ಸಂಸ್ಥೆಗಳು ಲಾಕ್​ಡೌನ್​ನಿಂದ ಭಾರೀ ಹೊಡೆತ ತಿನ್ನುವಂತಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Oil Bonds: ಯುಪಿಎ ಆಳ್ವಿಕೆಯ ಆಯಿಲ್​ ಬಾಂಡ್ಸ್​ ಅಂದರೇನು? ಬಿಜೆಪಿ ಸರ್ಕಾರ ಹೇಳುತ್ತಿರುವ ಪರಿಣಾಮಗಳೇನು?

(Central Government Will Pay Employer Employees PF Contribution Till 2022 Said Nirmala Sitharaman According to ANI)

Published On - 7:57 pm, Sat, 21 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ