ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಗಮನ; ಶೇ. 25ರಷ್ಟು ಬಂಡವಾಳ ವೆಚ್ಚ ಹೆಚ್ಚುವ ನಿರೀಕ್ಷೆ: ಜೆಫರೀಸ್

Jefferies report on India's capex: ಕೆಲ ರಾಜ್ಯಗಳಲ್ಲಿ ಜನಪ್ರಿಯ ಯೋಜನೆಗಳಿಗೆ ಬಹಳ ಹಣ ವಿನಿಯೋಗವಾಗುತ್ತಿದ್ದರೂ ಕೇಂದ್ರ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಗಮನ ಹರಿಸುವುದು ಮುಂದುವರಿದಿದೆ. ಈ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಸರ್ಕಾರದಿಂದ ಬಂಡವಾಳ ವೆಚ್ಚ ಶೇ. 25ರಷ್ಟು ಹೆಚ್ಚಬಹುದು ಎಂದು ಜೆಫರೀಸ್ ಅಭಿಪ್ರಾಯಪಟ್ಟಿದೆ. ಭಾರತದ ಷೇರು ಮಾರುಕಟ್ಟೆ ಮತ್ತೆ ಪುಟಿದೇಳಲಿದೆ ಎಂದೂ ಜೆಫರೀಸ್​ನ ವರದಿಯಲ್ಲಿ ಹೇಳಲಾಗಿದೆ.

ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಗಮನ; ಶೇ. 25ರಷ್ಟು ಬಂಡವಾಳ ವೆಚ್ಚ ಹೆಚ್ಚುವ ನಿರೀಕ್ಷೆ: ಜೆಫರೀಸ್
ಬಂಡವಾಳ ವೆಚ್ಚ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 01, 2024 | 3:44 PM

ನವದೆಹಲಿ, ಡಿಸೆಂಬರ್ 1: ಈ ಹಣಕಾಸು ವರ್ಷದ ಎರಡನೇ ಭಾಗದಲ್ಲಿ, ಅಂದರೆ ಅಕ್ಟೋಬರ್​ನಿಂದ ಮಾರ್ಚ್​ವರೆಗಿನ ಆರು ತಿಂಗಳ ಅವಧಿಯಲ್ಲಿ ಕೇಂದ್ರ ಸರ್ಕಾರದಿಂದ ಬಂಡವಾಳ ವೆಚ್ಚ (Capital expenditure) ಶೇ. 25ರಷ್ಟು ಹೆಚ್ಚಳವಾಗಬಹುದು ಎಂದು ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ ಜೆಫರೀಸ್ ಅಂದಾಜು ಮಾಡಿದೆ. ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ವರ್ಷದ ದ್ವಿತೀಯಾರ್ಧದಲ್ಲಿ ಸರ್ಕಾರದ ಬಂಡವಾಳ ವೆಚ್ಚ ಶೇ. 25ರಷ್ಟು ಹೆಚ್ಚಬಹುದು ಎಂಬುದು ಅದರ ನಿರೀಕ್ಷೆ. ಹಾಗೆಯೇ, ಸರ್ಕಾರದಿಂದ ಒಟ್ಟಾರೆ ವೆಚ್ಚವೂ ಶೇ. 15ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜೆಫರೀಸ್​ನ ವರದಿಯಲ್ಲಿ ನಿರೀಕ್ಷಿಸಲಾಗಿದೆ.

ಚುನಾವಣೆಗಳ ನಿಮಿತ್ತವಾಗಿ ಜಾರಿಗೊಳಿಸಲಾಗಿರುವ ಕೆಲ ಜನಪ್ರಿಯ ಯೋಜನೆಗಳಿಗೆ ವೆಚ್ಚ ಹೆಚ್ಚಾಗಿದ್ದರೂ ಸರ್ಕಾರವು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಹಣ ವಿನಿಯೋಗಿಸುವುದಕ್ಕೆ ಕತ್ತರಿ ಹಾಕುವ ಸಾಧ್ಯತೆ ಇಲ್ಲ. ಕೇಂದ್ರ ಸರ್ಕಾರವು ಜನಕಲ್ಯಾಣ ಯೋಜನೆಗಳ ಜೊತೆಜೊತೆಗೆ ಅಭಿವೃದ್ಧಿ ಯೋಜನೆಗಳಿಗೂ ಬದ್ಧತೆ ತೋರುವ ಮೂಲಕ ಸಮತೋಲಿತ ನೀತಿ ಅನುಸರಿಸುತ್ತಿದೆ ಎಂಬುದು ಬ್ರೋಕರೇಜ್ ಸಂಸ್ಥೆಯ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಒಂದು ತಿಂಗಳ ವಿಶೇಷ ಅಭಿಯಾನದಲ್ಲಿ ಒಂದು ಕೋಟಿ ಪಿಂಚಣಿದಾರರಿಂದ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸೃಷ್ಟಿ: ಸರ್ಕಾರದಿಂದ ಮಾಹಿತಿ

ಜನಪ್ರಿಯ ಯೋಜನೆಗಳ ಸಂಖ್ಯೆ ಹೆಚ್ಚುತ್ತಿದೆಯಾದರೂ ಸರ್ಕಾರವು ಈ ಯೋಜನೆಗಳಿಗೆ ವಿನಿಯೋಗಿಸುವುದಕ್ಕಿಂತ ಹೆಚ್ಚು ಮೊತ್ತದ ಬಂಡವಾಳ ವೆಚ್ಚ ಮಾಡುತ್ತಿರುವುದನ್ನು ಗಮನಿಸಬೇಕು ಎಂದು ವರದಿಯಲ್ಲಿ ಹೈಲೈಟ್ ಮಾಡಲಾಗಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ ಭರವಸೆ ಕೊಟ್ಟ ವಿವಿಧ ಕಲ್ಯಾಣ ಯೋಜನೆಗಳ ಜಾರಿಗೆ ವರ್ಷಕ್ಕೆ 460 ಬಿಲಿಯನ್ ಡಾಲರ್ ಖರ್ಚಾಗುತ್ತದೆ. ಇದು ಆ ರಾಜ್ಯದ ಜಿಡಿಪಿಯ ಶೇ. 1.1ರಷ್ಟಾಗುತ್ತದೆ. ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳಿಗೆಲ್ಲಾ ಆಗುವ ವೆಚ್ಚವನ್ನು ಪರಿಗಣಿಸಿದರೆ ಅದು ದೇಶದ ಜಿಡಿಪಿಯ ಶೇ. 0.7ರಿಂದ 0.8ರಷ್ಟಾಗಬಹುದು.

ಆದಾಗ್ಯೂ ಕೇಂದ್ರ ಸರ್ಕಾರವು ಸುಸ್ಥಿರ ಅಭಿವೃದ್ಧಿಗೆ ಬಹಳ ಮುಖ್ಯವಾಗಿ ಬೇಕಾಗಿರುವ ಮೂಲಸೌಕರ್ಯ ಅಭಿವೃದ್ಧಿ ಮೂಲಕ ದೀರ್ಘಕಾಲೀನ ಆರ್ಥಿಕ ಆಸ್ತಿಗಳನ್ನು ನಿರ್ಮಿಸುವ ಕಾರ್ಯಕ್ಕೆ ಒತ್ತು ಕೊಡುವುದನ್ನು ಮುಂದುವರಿಸಿದೆ. ಮುಂಬರುವ ದಿನಗಳಲ್ಲೂ ಈ ನೀತಿ ಮುಂದುವರಿಯಬಹುದು ಎಂಬುದು ಜೆಫರೀಸ್​ನ ಅಂದಾಜು.

ಇದನ್ನೂ ಓದಿ: ಬೆಳೆ ತ್ಯಾಜ್ಯ ನಿರ್ವಹಣೆಗೆ ಸರ್ಕಾರದಿಂದ 3,623 ಕೋಟಿ ರೂ ವೆಚ್ಚ; ಪಂಜಾಬ್, ಹರ್ಯಾಣ ರಾಜ್ಯಕ್ಕೆ ಹೆಚ್ಚಿನ ವ್ಯಯ

ಷೇರು ಮಾರುಕಟ್ಟೆ ಚೇತರಿಕೆ…

ಜೆಫರೀಸ್ ವರದಿಯಲ್ಲಿ ಮಾಡಲಾಗಿರುವ ಮತ್ತೊಂದು ಅಂದಾಜು ಷೇರು ಮಾರುಕಟ್ಟೆಗೆ ಸಂಬಂಧಿಸಿದ್ದು. ಷೇರುಪೇಟೆಯ ಕುಸಿತ ಬಹುಶಃ ಮುಗಿದಿರಬಹುದು. ಹೆಚ್ಚು ಬೆಲೆ ಇದ್ದ ಮಿಡ್​ಕ್ಯಾಪ್ ಷೇರುಗಳಲ್ಲಿ ಪ್ರೈಸ್ ಕರೆಕ್ಷನ್ ಆಗಿದೆ. ಈಗ ಮಾರುಕಟ್ಟೆ ಚೇತರಿಸಿಕೊಳ್ಳಬಹುದು ಎಂದು ಜೆಫರೀಸ್​ನ ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!