AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salary Hike: ಸರ್ಕಾರಿ ಉದ್ಯೋಗಿಗಳಿಗೆ ಶೇ 35ರಷ್ಟು ವೇತನ ಏರಿಕೆಯಾ?

8th Pay Commission, central employees may get 20-35pc salary hike: ಕೇಂದ್ರ ಸರ್ಕಾರಿ ನೌಕರರಿಗೆ ಎಂಟನೇ ವೇತನ ಆಯೋಗವು ಶೇ. 20-35ರಷ್ಟು ವೇತನ ಏರಿಕೆಗೆ ಶಿಫಾರಸು ಮಾಡಬಹುದು ಎಂದು ತಜ್ಞರು ನಿರೀಕ್ಷಿಸಿದ್ದಾರೆ. 2025ರ ನವೆಂಬರ್​ನಲ್ಲಿ ಆಯೋಗದ ಟರ್ಮ್ಸ್ ಆಫ್ ರೆಫರೆನ್ಸ್​ಗೆ ಅಧಿಸೂಚನೆಯಾಗಿದ್ದು, ಒಂದೂವರೆ ವರ್ಷದಲ್ಲಿ ಶಿಫಾರಸು ಮಾಡಲು ಕಾಲಾವಧಿ ಇದೆ.

Salary Hike: ಸರ್ಕಾರಿ ಉದ್ಯೋಗಿಗಳಿಗೆ ಶೇ 35ರಷ್ಟು ವೇತನ ಏರಿಕೆಯಾ?
ಹಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 15, 2026 | 3:57 PM

Share

ನವದೆಹಲಿ, ಮಾರ್ಚ್ 15: ಏಳನೇ ವೇತನ ಆಯೋಗದ ಅವಧಿ 2025ರ ಡಿಸೆಂಬರ್ 31ಕ್ಕೆ ಮುಗಿದಿದೆ. ಎಂಟನೇ ವೇತನ ಆಯೋಗ ಜಾರಿಗೆ ಬರುತ್ತಿದೆ. ಎಂಟನೇ ವೇತನ ಆಯೋಗವು ಕೋಟ್ಯಂತರ ಸರ್ಕಾರಿ ನೌಕರರು ಮತ್ತು ನಿವೃತ್ತರಿಗೆ ಸಂಬಳ, ಪಿಂಚಣಿ, ಭತ್ಯೆಗಳನ್ನು ಪರಿಷ್ಕರಿಸುವ ಕೆಲಸ ಮಾಡುತ್ತಿದೆ. ಅಧಿಸೂಚನೆಯಾಗಿ 18 ತಿಂಗಳೊಳಗೆ ಆಯೋಗವು ತನ್ನ ಈ ಜವಾಬ್ದಾರಿಯನ್ನು ಮುಗಿಸಬೇಕಿದೆ. ವೇತನ, ಪಿಂಚಣಿ ಮತ್ತು ಭತ್ಯೆ ಪರಿಷ್ಕರಣೆ ಕುರಿದಂತೆ ಉದ್ಯೋಗಿಗಳು, ಪಿಂಚಣಿದಾರು, ಉದ್ಯೋಗಿಗಳ ಒಕ್ಕೂಟಗಳು ಮತ್ತಿತರ ಭಾಗೀದಾರರಿಂದ ಸಲಹೆ ಸೂಚನೆಗಳನ್ನು ಆಹ್ವಾನಿಸಲಾಗಿದೆ. 2026ರ ಏಪ್ರಿಲ್ 30ರವರೆಗೂ ಆನ್​ಲೈನ್ ಪೋರ್ಟಲ್​ನಲ್ಲಿ ಈ ಸಲಹೆಗಳನ್ನು ಕಳುಹಿಸುವ ಅವಕಾಶ ಇರುತ್ತದೆ.

ಎಂಟನೇ ವೇತನ ಆಯೋಗದ ಕಾರ್ಯಾಚರಣೆ ನಿಯಮ ಅಥವಾ ಟರ್ಮ್ಸ್ ಆಫ್ ರೆಫರೆನ್ಸ್​ಗೆ 2025ರ ನವೆಂಬರ್ 3ರಂದು ಅಧಿಸೂಚನೆ ಕೊಡಲಾಗಿದೆ. ಇದಾಗಿ 18 ತಿಂಗಳು ಎಂದರೆ 2027ರ ಏಪ್ರಿಲ್-ಮೇ ತಿಂಗಳೊಳಗೆ ಆಯೋಗವು ವೇತನ ನಿಗದಿಗೆ ಅಂತಿಮ ಸೂತ್ರಗಳನ್ನು ಶಿಫಾರಸು ಮಾಡಬೇಕಾಗುತ್ತದೆ.

ಇದನ್ನೂ ಓದಿ: ಪ್ಲೇಸ್ಟೋರ್​ನಲ್ಲಿ ಚ್ಯಾಟ್​ಜಿಪಿಟಿ, ಫ್ಲಿಪ್​ಕಾರ್ಟ್ ಅನ್ನು ಮೀರಿಸಿದ ಎಲ್​ಪಿಜಿ ಬುಕಿಂಗ್ ಆ್ಯಪ್

ದೇಶದಲ್ಲಿ ಸದ್ಯ ಸಕ್ರಿಯವಾಗಿರುವ 50 ಲಕ್ಷ ಕೇಂದ್ರ ಸರ್ಕಾರಿ ಉದ್ಯೋಗಿಗಳಿದ್ದಾರೆ. 69 ಲಕ್ಷ ಪಿಂಚಣಿದಾರರಿದ್ದಾರೆ. ಫಲಾನುಭವಿಗಳ ಸಂಖ್ಯೆ ಒಟ್ಟು 1.2 ಕೋಟಿಯಷ್ಟು ಆಗಬಹುದು.

ಎಂಟನೇ ವೇತನ ಆಯೋಗವು ಎಷ್ಟು ವೇತನ ಹೆಚ್ಚಳಕ್ಕೆ ಶಿಫಾರಸು ಮಾಡಬಹುದು?

ಎಂಟನೇ ವೇತನ ಆಯೋಗವು ಕೇಂದ್ರ ಸರ್ಕಾರಿ ನೌಕರರಿಗೆ ಮಾಡಬಹುದಾದ ವೇತನ ಏರಿಕೆ ಶೇ. 20-35ರಷ್ಟು ಇರಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ವೇತನ ಪರಿಷ್ಕರಣೆಯಲ್ಲಿ ಮುಖ್ಯ ಭಾಗವಾಗಿರುವುದು ಫಿಟ್ಮೆಂಟ್ ಫ್ಯಾಕ್ಟರ್. ಇದು 2.4ರಿಂದ 3.0 ಶ್ರೇಣಿಯಲ್ಲಿ ಇರಬಹುದು. ಮೂಲವೇತನ ಪರಿಷ್ಕರಣೆಗೆ ಆಧಾರವಾಗುವ ಈ ಫಿಟ್ಮೆಂಟ್ ಫ್ಯಾಕ್ಟರ್ ಹಲವು ಆರ್ಥಿಕ ಅಂಶಗಳನ್ನು ಆಧರಿಸಿರುತ್ತದೆ.

ಇದನ್ನೂ ಓದಿ: ಸರ್ಕಾರದಿಂದ ಎಲ್​ಪಿಜಿ ಪೂರೈಕೆ ನಿಯಮದಲ್ಲಿ ಬದಲಾವಣೆ; ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ

ಮುಂದಿನ 12-18 ತಿಂಗಳಲ್ಲಿ ಹಣದುಬ್ಬರ ಎಷ್ಟಿರಬಹುದು ಎಂಬಿತ್ಯಾದಿ ಆರ್ಥಿಕ ಅಂಶಗಳು ಎಂಟನೇ ವೇತನ ಆಯೋಗದ ಶಿಫಾರಸಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಈ ಬಾರಿ ಒಟ್ಟಾರೆ ವೇತನ ಹೆಚ್ಚಳ ಸುಮಾರು ಶೇ. 20-35ರಷ್ಟಿರಬಹುದು. 7ನೇ ವೇತನ ಆಯೋಗದಿಂದ ಶೇ. 23-25ರಷ್ಟು ಸಂಬಳ ಹೆಚ್ಚಳ ಆಗಿತ್ತು. ಅದಕ್ಕೂ ಹಿಂದಿನ 6ನೇ ವೇತನ ಆಯೋಗವು ಶೇ. 40ರಷ್ಟು ವೇತನ ಏರಿಕೆಗೆ ಶಿಫರಸು ಮಾಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us