AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bournvita: ಬೌರ್ನ್‌ವಿಟಾ ಮಕ್ಕಳ ಜೀವಕ್ಕೆ ಕುತ್ತು, ಹೆಲ್ತ್​​​ ಡ್ರಿಂಕ್ಸ್​​​ ಪಟ್ಟಿಯಿಂದ ತೆಗೆದುಹಾಕುವಂತೆ ಕೇಂದ್ರ ಆದೇಶ

ವಾಣಿಜ್ಯ ಸಚಿವಾಲಯವು ಬೌರ್ನ್ವಿಟಾ ಮತ್ತು ಇತರ ಪಾನೀಯಗಳನ್ನು 'ಆರೋಗ್ಯ ಪಾನೀಯ' ವರ್ಗದಿಂದ ತೆಗೆದುಹಾಕುವಂತೆ ಇ-ಕಾಮರ್ಸ್ ಕಂಪನಿಗಳಿಗೆ ಹೇಳಿದೆ. ಇದು ಯಾವುದೇ 'ಆರೋಗ್ಯ ಪಾನೀಯ' ವರ್ಗಕ್ಕೆ ಸೇರುವುದಿಲ್ಲ ಎಂದು ಇ-ಕಾಮರ್ಸ್ ಕಂಪನಿಗಳಿಗೆ ಆದೇಶ ಪತ್ರವನ್ನು ನೀಡಿದೆ.

Bournvita: ಬೌರ್ನ್‌ವಿಟಾ ಮಕ್ಕಳ ಜೀವಕ್ಕೆ ಕುತ್ತು, ಹೆಲ್ತ್​​​ ಡ್ರಿಂಕ್ಸ್​​​ ಪಟ್ಟಿಯಿಂದ ತೆಗೆದುಹಾಕುವಂತೆ ಕೇಂದ್ರ ಆದೇಶ
ಅಕ್ಷಯ್​ ಪಲ್ಲಮಜಲು​​
|

Updated on:Apr 13, 2024 | 5:29 PM

Share

ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ (ಎಫ್‌ಎಸ್‌ಎಸ್ ಕಾಯಿದೆ 2006) ಅಡಿಯಲ್ಲಿ ಬೌರ್ನ್‌ವಿಟಾ (Bournvita) ಮತ್ತು ಇತರ ರೀತಿಯ ಪಾನೀಯಗಳನ್ನು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದು ಹಾಕಿ. ಇದು ಯಾವುದೇ ‘ಆರೋಗ್ಯ ಪಾನೀಯ’ ವರ್ಗಕ್ಕೆ ಸೇರುವುದಿಲ್ಲ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಪತ್ರದ ಮೂಲಕ ಆದೇಶ ನೀಡಿದೆ.

ಏಪ್ರಿಲ್ 10ರಂದು ಈ ಆದೇಶವನ್ನು ನೀಡಲಾಗಿದೆ. ವಾಣಿಜ್ಯ ಸಚಿವಾಲಯವು ಬೌರ್ನ್ವಿಟಾ ಮತ್ತು ಇತರ ಪಾನೀಯಗಳನ್ನು ‘ಆರೋಗ್ಯ ಪಾನೀಯ’ ವರ್ಗದಿಂದ ತೆಗೆದುಹಾಕುವಂತೆ ಇ-ಕಾಮರ್ಸ್ ಕಂಪನಿಗಳಿಗೆ ಹೇಳಿದೆ. ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್ (NCPCR), ಇದು CRPC ಕಾಯಿದೆ 2005 ರ ಸೆಕ್ಷನ್ 14 ರ ಅಡಿಯಲ್ಲಿ ಈ ಬಗ್ಗೆ ವಿಚಾರಣೆಯನ್ನು ನಡೆಸಿದೆ. ಹಾಗೂ 2005ರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (CPCR) ಕಾಯಿದೆಯ ಸೆಕ್ಷನ್ (3) ಅಡಿಯಲ್ಲಿ ರಚಿತವಾದ ಶಾಸನಬದ್ಧ ಸಂಸ್ಥೆಗಳು ಎಫ್‌ಎಸ್‌ಎಸ್ ಕಾಯಿದೆ 2006ರ ಅಡಿಯಲ್ಲಿ ಆರೋಗ್ಯ ಪಾನೀಯಗಳ ಬಗ್ಗೆ ಎಫ್‌ಎಸ್‌ಎಸ್‌ಎಐ ಮತ್ತು ಮೊಂಡೆಲೆಜ್ ಇಂಡಿಯಾ ಫುಡ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸುವಂತೆ ಏಪ್ರಿಲ್ 10ರ ಅಧಿಸೂಚನೆಯಲ್ಲಿ ತಿಳಿಸಿದೆ.

ಒಂದು ವರ್ಷದ ಹಿಂದೆ ಬೌರ್ನ್ವಿಟಾದಲ್ಲಿ ಸಕ್ಕರೆಯ ಮಟ್ಟದ ಅಂಶ ಹೆಚ್ಚಿದೆ ಎಂದು ಹೇಳಲಾಗಿತ್ತು. ಈ ಆರೋಪ ಬಂದ ನಂತರ ಮಕ್ಕಳ ಆರೋಗ್ಯದ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ (NCPCR) ಮೊಂಡೆಲೆಜ್ ಇಂಡಿಯಾ ಮಾಲೀಕತ್ವದ ಬ್ರ್ಯಾಂಡ್​​ನ ಪಾನೀಯದಲ್ಲಿ ಸಮಸ್ಯೆ ಇದೆ ಎಂದು ಕಂಡುಕೊಂಡಿದೆ. ಈ ಕಾರಣಕ್ಕೆ ಈ ಬಗ್ಗೆ ಜಾಹೀರಾತು ನೀಡದಂತೆ ತಡೆ ನೀಡಲಾಗಿತ್ತು. ಪಾನೀಯದಲ್ಲಿ ಹೆಚ್ಚಿನ ಸಕ್ಕರೆ ಅಂಶ ಇದೆ ಎಂದ  ನಂತರ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಂಡಿದೆ.

ಇದನ್ನೂ ಓದಿ: ಟಾಟಾ ಕನ್ಸಲ್ಟನ್ಸಿ ಸರ್ವಿಸ್ ಲಾಭ ಶೇ. 9ರಷ್ಟು ಏರಿಕೆ; ಇಡೀ ವರ್ಷದಲ್ಲಿ 45,908 ಕೋಟಿ ರೂ ನಿವ್ವಳ ಲಾಭ; 28 ರೂ ಡಿವಿಡೆಂಡ್ ಘೋಷಣೆ

ಬೌರ್ನ್‌ವಿಟಾಕ್ಕೆ ಅಯೋಗ ಕಳಿಸಿದ ನೋಟಿಸ್​​ನಲ್ಲಿ, ಪಾನೀಯಕ್ಕೆ ಹಾಕುವ ಸಿಹಿ ಹಾಗೂ ಅದರ ಮಟ್ಟದ ಬಗ್ಗೆ ವರದಿ ನೀಡುವಂತೆ ಆದೇಶವನ್ನು ನೀಡಿದೆ. ಈ ಪಾನೀಯದಿಂದ ಅನೇಕಗೆ ಆರೋಗ್ಯ ಸಮಸ್ಯೆಗಳು ಕಾಡಿದೆ ಎಂದು ಹೇಳಲಾಗಿದೆ. ಈ ಕಾರಣಕ್ಕೆ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:13 pm, Sat, 13 April 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ