Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೀಸೆಲ್ ಕಾರಿನ ಮೇಲೆ ಶೇ. 10ರಷ್ಟು ಜಿಎಸ್​ಟಿ ಹೆಚ್ಚಳ ಆಗುತ್ತಾ? ಮಾಧ್ಯಮ ವರದಿ ತಳ್ಳಿಹಾಕಿದ ನಿತಿನ್ ಗಡ್ಕರಿ

GST On Diesel Cars: ನೀವು ಡೀಸೆಲ್ ಕಾರುಗಳ ಉತ್ಪಾದನೆ ನಿಲ್ಲಿಸಬೇಕು. ಇಲ್ಲದಿದ್ದರೆ ಡೀಸೆಲ್ ವಾಹನ ಮಾರುವುದೇ ಕಷ್ಟವಾಗುವ ರೀತಿಯಲ್ಲಿ ತೆರಿಗೆ ವಿಧಿಸಲಾಗುವುದು ಎಂದು ನಿತಿನ್ ಗಡ್ಕರಿ ನವದೆಹಲಿಯಲ್ಲಿ ತಿಳಿಸಿದರು ಎಂಬ ಸುದ್ದಿ ಇತ್ತು. ಈ ವರದಿಗಳನ್ನು ನಿತಿನ್ ಗಡ್ಕರಿ ಅಲ್ಲಗಳೆದಿದ್ದು, ಡೀಸೆಲ್ ಕಾರುಗಳ ಮೇಲೆ ಹೆಚ್ಚುವರಿ ಜಿಎಸ್​ಟಿ ವಿಧಿಸುವ ಪ್ರಸ್ತಾಪ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಡೀಸೆಲ್ ಕಾರಿನ ಮೇಲೆ ಶೇ. 10ರಷ್ಟು ಜಿಎಸ್​ಟಿ ಹೆಚ್ಚಳ ಆಗುತ್ತಾ? ಮಾಧ್ಯಮ ವರದಿ ತಳ್ಳಿಹಾಕಿದ ನಿತಿನ್ ಗಡ್ಕರಿ
ಡೀಸೆಲ್ ಕಾರು
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 12, 2023 | 4:25 PM

ನವದೆಹಲಿ, ಸೆಪ್ಟೆಂಬರ್ 12: ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಕೆಲವಾರು ವರ್ಷಗಳಿಂದ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಡೀಸೆಲ್ ಕಾರುಗಳ (Diesel Car) ಮೇಲೆ ಇನ್ನಷ್ಟು ನಿರ್ಬಂಧಗಳನ್ನು ಹಾಕಲು ಮುಂದಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಆದರೆ, ಕೆಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ವರದಿಯನ್ನು ತಳ್ಳಿಹಾಕಿದ್ದಾರೆ. ಡೀಸೆಲ್ ವಾಹನಗಳ ಮಾರಾಟದ ಮೇಲೆ ಶೇ. 10ರಷ್ಟು ಹೆಚ್ಚುವರಿ ಜಿಎಸ್​ಟಿ ವಿಧಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಗಡ್ಕರಿ ಟ್ವೀಟ್ ಮಾಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಕೇಂದ್ರ ಸಚಿವ ನಿತಿನ್ ಗಡ್ಕರಿ, ಡೀಸೆಲ್ ಕಾರು ತಯಾರಿಕೆಯನ್ನು ನಿಲ್ಲಿಸುವಂತೆ ಅವರು ವಾಹನ ತಯಾರಕ ಕಂಪನಿಗಳಿಗೆ ಸೂಚ್ಯವಾಗಿ ತಿಳಿಸಿದರೆಂದು ವರದಿಯಾಗಿತ್ತು.

ಡೀಸೆಲ್ ಕಾರುಗಳ ಮೇಲೆ ಶೇ. 10ರಷ್ಟು ಹೆಚ್ಚುವರಿ ಜಿಎಸ್​ಟಿ ವಿಧಿಸಲಿದ್ದೇವೆ. ನೀವು ಡೀಸೆಲ್ ಕಾರುಗಳ ತಯಾರಿಕೆಯನ್ನು ಶೀಘ್ರ ನಿಲ್ಲಿಸಬೇಕು. ಇಲ್ಲದಿದ್ದರೆ ಈ ವಾಹನಗಳನ್ನು ಮಾರಲು ಕಷ್ಟವಾಗುವಷ್ಟು ತೆರಿಗೆಯನ್ನು ಹೆಚ್ಚಿಸುತ್ತೇವೆ ಎಂದು ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಇದನ್ನೂ ಓದಿ: ಚೀನಾದ ಉಕ್ಕಿನ ಸರಬರಾಜಿಗೆ ಭಾರತದಲ್ಲಿ ನಿರ್ಬಂಧ; ಇನ್ನೂ ಐದು ವರ್ಷ ಸುರಿವಿರೋಧಿ ಸುಂಕ ಹೇರಿಕೆ

‘ನನ್ನ ಬಳಿ ಪತ್ರ ಸಿದ್ಧವಾಗಿ ಇದೆ. ಡೀಸೆಲ್ ವಾಹನಗಳ ಮೇಲೆ ಹಾಗೂ ಡೀಸೆಲ್​ನಿಂದ ಚಾಲನೆಯಾಗುವ ಎಲ್ಲಾ ಎಂಜಿನ್​ಗಳ ಮೇಲೆ ಹೆಚ್ಚುವರಿ ಶೇ. 10ರಷ್ಟು ಜಿಎಸ್​ಟಿ ಹೇರುವ ಪ್ರಸ್ತಾಪದ ಈ ಪತ್ರವನ್ನು ಇಂದು ಸಂಜೆಗೆಯೇ ಹಣಕಾಸು ಸಚಿವರಿಗೆ ತಲುಪಿಸುತ್ತೇನೆ’ ಎಂದು ಸೊಸೈಟಿ ಆಫ್ ಇಂಡಿಯನ್ ಆಟೊಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (ಎಸ್​ಐಎಎಂ) ಸಂಸ್ಥೆ ಆಯೋಜಿಸಿದ ಕಾರ್ಯಕ್ರಮದಲ್ಲಿ ತಿಳಿಸಿದರೆಂದು ಹೇಳಲಾಗಿತ್ತು.

ಇದನ್ನೂ ಓದಿ: ಮಹತ್ವಾಕಾಂಕ್ಷಿ ಕಾರಿಡಾರ್ ಯೋಜನೆ; ಸೌದಿ ಅರೇಬಿಯಾ ಜೊತೆ ಕಾರ್ಯಾಚರಣೆಗಿಳಿದ ಭಾರತ; 8 ಒಪ್ಪಂದಗಳಿಗೆ ಸಹಿ

ಮಾಲಿನ್ಯಕ್ಕೆ ದಂಡವಾಗಿ ಶೇ. 10 ತೆರಿಗೆ

ಡೀಸೆಲ್ ವಾಹನಗಳಿಂದ ಹೊರಬರುವ ಹೊಗೆಯು ಸಾಕಷ್ಟು ಮಾಲಿನ್ಯ ಸೃಷ್ಟಿಸುತ್ತವೆ. ಭಾರತದಲ್ಲಿ ಮಾಲಿನ್ಯಕಾರಕ ವಸ್ತುಗಳ ಮೂಲಗಳಲ್ಲಿ ಡೀಸೆಲ್ ವಾಹನಗಳೂ ಸೇರಿವೆ. ಇದೇ ಕಾರಣಕ್ಕೆ ಶೇ. 10ರಷ್ಟು ಹೆಚ್ಚುವರಿ ತೆರಿಗೆ ಹಾಕಲಾಗುತ್ತಿದೆ. ನಿತಿನ್ ಗಡ್ಕರಿ ಅವರು ಈ ಹೆಚ್ಚುವರಿ ತೆರಿಗೆ ಹೇರಿಕೆಯ ಪ್ರಸ್ತಾಪವನ್ನು ಹಣಕಾಸು ಸಚಿವರಿಗೆ ಕೊಡುವ ನಿರೀಕ್ಷೆ ಇದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳಲ್ಲಿ ಹೇಳಲಾಗಿತ್ತು.

ಆದರೆ, ಗಡ್ಕರಿ ಅವರು ಈ ವರದಿಯನ್ನು ತಳ್ಳಿಹಾಕಿದ್ದಾರೆ. ಆದರೆ, ಮಾಧ್ಯಮಗಳಲ್ಲಿ ಈ ಮುಂಚೆ ಪ್ರಕಟವಾದ ವರದಿಯ ಪರಿಣಾಮ ಮಹೀಂದ್ರ ಅಂಡ್ ಮಹೀಂದ್ರ ಮೊದಲಾದ ಕಂಪನಿಗಳ ಷೇರುಗಳು ತುಸು ಹಿನ್ನಡೆ ಕಂಡಿದ್ದವು. ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆ ಮಾರುತಿ ಸುಜುಕಿ ತನ್ನ ಡೀಸೆಲ್ ಮಾಡಲ್ ಕಾರುಗಳ ತಯಾರಿಕೆಯನ್ನೇ ನಿಲ್ಲಿಸಿವೆ. ಬೇರೆ ಪ್ರಮುಖ ಕಂಪನಿಗಳು ಹಂತ ಹಂತವಾಗಿ ಡೀಸೆಲ್ ವಾಹನಗಳ ಮಾರಾಟ ನಿಲ್ಲಿಸುತ್ತಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Tue, 12 September 23

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ