PMGKAY: ಕೇಂದ್ರ ಸರ್ಕಾರದಿಂದ ಕೊರೊನಾ ಪರಿಹಾರವಾಗಿ 600 ಲಕ್ಷ ಟನ್​ ಆಹಾರ ಧಾನ್ಯ ಬಿಡುಗಡೆ

ಕೊರೊನಾ ಬಿಕ್ಕಟ್ಟಿನಿಂದ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಘೋಷಣೆ ಮಾಡಿತು. ಅದರಲ್ಲೂ ವಲಸೆ ಕಾರ್ಮಿಕರು, ಬಡವರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೂಪಿಸಿದ ಯೋಜನೆಗಳಿಂದ ಲಕ್ಷಾಂತರ ಮಂದಿಗೆ ಅನುಕೂಲವಾಗಿದ್ದು ಹೌದು. ಅದರಲ್ಲಿ ಪ್ರಧಾನ ಮಂತ್ರೊ ಗರೀಬ್ ಕಲ್ಯಾಣ್ ಅನ್ನ ಯೋಜನಾ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯವನ್ನು ವಿತರಣೆ ಮಾಡಿದ್ದನ್ನು ಸ್ಮರಿಸಬೇಕಾಗುತ್ತದೆ. ಹಾಗೆ ಕೊರೊನಾ ಬಿಕ್ಕಟ್ಟಿನ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಆಹಾರ ಧಾನ್ಯಗಳ […]

PMGKAY: ಕೇಂದ್ರ ಸರ್ಕಾರದಿಂದ ಕೊರೊನಾ ಪರಿಹಾರವಾಗಿ 600 ಲಕ್ಷ ಟನ್​ ಆಹಾರ ಧಾನ್ಯ ಬಿಡುಗಡೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Srinivas Mata

Updated on: Jul 27, 2021 | 9:44 PM

ಕೊರೊನಾ ಬಿಕ್ಕಟ್ಟಿನಿಂದ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಘೋಷಣೆ ಮಾಡಿತು. ಅದರಲ್ಲೂ ವಲಸೆ ಕಾರ್ಮಿಕರು, ಬಡವರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೂಪಿಸಿದ ಯೋಜನೆಗಳಿಂದ ಲಕ್ಷಾಂತರ ಮಂದಿಗೆ ಅನುಕೂಲವಾಗಿದ್ದು ಹೌದು. ಅದರಲ್ಲಿ ಪ್ರಧಾನ ಮಂತ್ರೊ ಗರೀಬ್ ಕಲ್ಯಾಣ್ ಅನ್ನ ಯೋಜನಾ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯವನ್ನು ವಿತರಣೆ ಮಾಡಿದ್ದನ್ನು ಸ್ಮರಿಸಬೇಕಾಗುತ್ತದೆ. ಹಾಗೆ ಕೊರೊನಾ ಬಿಕ್ಕಟ್ಟಿನ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಆಹಾರ ಧಾನ್ಯಗಳ ಪ್ರಮಾಣ ಎಷ್ಟು ಗೊತ್ತಾ? 600 ಲಕ್ಷ ಟನ್​ಗಳು.

ಗ್ರಾಹಕ ವ್ಯವಹಾರಗಳ ಸಚಿವಾಲಯದ ದತ್ತಾಂಶಗಳ ಪ್ರಕಾರವಾಗಿ, 600 ಲಕ್ಷ ಟನ್​ಗಳ ಆಹಾರ ಧಾನ್ಯಗಳನ್ನು ಈ ಅವಧಿಯಲ್ಲಿ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ. ಈ ಪೈಕಿ, ಜುಲೈ 14, 2021ರ ತನಕದ ಲೆಕ್ಕಾಚಾರದಂತೆ 400 ಲಕ್ಷ ಟನ್ ಆಹಾರ ಧಾನ್ಯಗಳ ದಾಸ್ತಾನನ್ನು ರಾಜ್ಯಗಳಿಂದ ತೆಗೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಬಳಿಯಲ್ಲಿ ಜುಲೈ 1, 2021ರ ತನಕ ಇದ್ದ ಆಹಾರ ಧಾನ್ಯಗಳ ಪ್ರಮಾಣ 900 ಲಕ್ಷ ಟನ್​ಗಳು. ಅದರಲ್ಲಿ 603 ಲಕ್ಷ ಟನ್ ಗೋಧಿ ಮತ್ತು 296 ಲಕ್ಷ ಟನ್ ಅಕ್ಕಿ ಇತ್ತು.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನಾವನ್ನು ಸರ್ಕಾರದಿಂದ 2020ರ ಮಾರ್ಚ್​ನಲ್ಲಿ ಆರಂಭಿಸಲಾಯಿತು. ಅದು ಕೂಡ ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ದೇಶದಾದ್ಯಂತ ಲಾಕ್​ ಡೌನ್​ ಘೋಷಣೆ ಮಾಡಿದಾಗ ಲಕ್ಷಾಂತರ ಮಂದಿ ವಲಸಿಗ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಬೇಕಾಯಿತು. ಆ ಸಂದರ್ಭದಲ್ಲಿ ಈ ಯೋಜನೆಯನ್ನು ರೂಪಿಸಲಾಯಿತು. ಚದುರಿ ಹೋದ ವಲಸಿಗರಿಗೆ ಮತ್ತು ಗ್ರಾಮೀಣ ಭಾಗದ ಜನರಿಗೆ ಉಚಿತ ಆಹಾರ ಧಾನ್ಯವನ್ನು ವಿತರಣೆ ಮಾಡಬೇಕು ಎಂಬ ಉದ್ದೇಶದಿಂದಲೇ ಆರಂಭವಾದ ಕೇಂದ್ರ ಸರ್ಕಾರದ ಯೋಜನೆಯಿದು.

ಇದನ್ನೂ ಓದಿ: ಪ್ರಧಾನಿ ಗರೀಬ್ ಕಲ್ಯಾಣ್: ನವೆಂಬರ್​ವರೆಗೂ ಅನ್ನ ಯೋಜನೆ ಮುಂದುವರಿಕೆ- ಪ್ರಧಾನಿ ಮೋದಿ

(Centre Released 600 Lakh Tonnes Of Food Grains During Corona Pandemic)

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?