ಟೊಮೆಟೋ ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ; ಸಬ್ಸಿಡಿ ದರದಲ್ಲಿ ಸರ್ಕಾರದಿಂದಲೇ ಟೊಮೆಟೋ ಮಾರಾಟ

Centre selling tomatoes at subsidized rate: ನೂರು ರೂ ಆಸುಪಾಸಿನಲ್ಲಿರುವ ಟೊಮೆಟೋ ಬೆಲೆ ಏರಿಕೆಗೆ ಕಡಿವಾಣ ಹಾಕಲು ಸರ್ಕಾರ ಸಬ್ಸಿಡಿ ದರದಲ್ಲಿ ಆ ಹಣ್ಣು ಮಾರುತ್ತಿದೆ. ರಾಜಧಾನಿ ನಗರಿ ದೆಹಲಿಯಲ್ಲಿ ಎನ್​ಸಿಸಿಎಫ್​​ನಿಂದ ವಿವಿಧೆಡೆ ಟೊಮೆಟೋ ಮಾರುವ ಕಾರ್ಯಕ್ರಮಕ್ಕೆ ಜುಲೈ 29ರಂದು ಸಚಿವ ಪ್ರಹ್ಲಾದ್ ಜೋಷಿ ಚಾಲನೆ ನೀಡಿದರು. ಇನ್ನೊಂದು ವಾರ ಅಥವಾ ಹತ್ತು ದಿನದಲ್ಲಿ ಟೊಮೆಟೋ ಬೆಲೆ ಕಡಿಮೆಗೊಳ್ಳುತ್ತದೆ ಎಂದು ಜೋಷಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟೊಮೆಟೋ ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ; ಸಬ್ಸಿಡಿ ದರದಲ್ಲಿ ಸರ್ಕಾರದಿಂದಲೇ ಟೊಮೆಟೋ ಮಾರಾಟ
ಪ್ರಹ್ಲಾದ್ ಜೋಷಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 29, 2024 | 5:09 PM

ನವದೆಹಲಿ, ಜುಲೈ 29: ನೂರು ರೂಗಿಂತ ಅಧಿಕಗೊಂಡಿರುವ ಟೊಮೆಟೋ ಬೆಲೆಯನ್ನು ಹತೋಟಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಮಹಾ ಒಕ್ಕೂಟ (ಎನ್​ಸಿಸಿಎಫ್) ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಲಿದೆ. ಮೊದಲಿಗೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎನ್​ಸಿಸಿಎಫ್​ನ ರೀಟೇಲ್ ಸ್ಟೋರ್ ಮತ್ತು ವಾಹನಗಳ ಮೂಲಕ ಟೊಮೆಟೋ ಮಾರಾಟ ನಡೆಯಲಿದೆ. ಕಿಲೋಗೆ 60 ರೂಗೆ ಈ ಹಣ್ಣು ಸಿಗಲಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಇಂದು ಸೋಮವಾರ ಈ ಯೋಜನೆಗೆ ಚಾಲನೆ ನೀಡಿದರು.

ದೇಶದ ಹಲವೆಡೆ ಟೊಮೆಟೋ ಬೆಲೆ 70 ರೂಗಿಂತ ಮೇಲೇರಿದೆ. ದೆಹಲಿ ಮೊದಲಾದ ಕೆಲವೆಡೆಯಂತೆ ಬೆಲೆ 120 ರೂವರೆಗೂ ಹೋಗಿದೆ. ಹಣದುಬ್ಬರ ಇಳಿಸುವ ಗುರಿಗೆ ಇದು ತಡೆಯಾಗುವುದರಿಂದ ಸರ್ಕಾರ ಈ ಬೆಲೆ ಏರಿಕೆಗೆ ಕಡಿವಾಣ ಹಾಕುವುದು ಅನಿವಾರ್ಯ. ಕೇಂದ್ರ ಸರ್ಕಾರ ಸ್ಥಾಪಿಸಿರುವ ಬೆಲೆ ಸ್ಥಿರತೆ ನಿಧಿಯನ್ನು (ಪಿಎಸ್​ಎಫ್) ಬಳಸಿ ಮಂಡಿಗಳಿಂದ ಟೊಮೆಟೋ ಖರೀದಿಸಿ ವಿವಿಧ ಕಡೆ ಮಾರಾಟ ಮಾಡುವ ಪ್ರಯತ್ನ ಮಾಡಲಾಗಿದೆ.

ಈ ಹಿಂದೆಯೂ ಈರುಳ್ಳಿ, ಆಲೂಗಡ್ಡೆ ಇತ್ಯಾದಿ ಆಹಾರವಸ್ತುಗಳ ಬೆಲೆ ಏರಿಕೆಯಾದಾಗ ಸರ್ಕಾರದಿಂದಲೇ ಅವುಗಳನ್ನು ಅಗತ್ಯ ಇರುವೆಡೆ ಮಾರುವ ಕೆಲಸ ಮಾಡಲಾಗುತ್ತಿದೆ. ಅನಗತ್ಯವಾಗಿ ಇವುಗಳ ಕೊರತೆಯಿಂದ ಬೆಲೆ ಏರಿಕೆ ಸೃಷ್ಟಿಯಾಗುವುದನ್ನು ತಪ್ಪಿಸಲು ಸರ್ಕಾರ ಇಂಥ ಕ್ರಮ ಕೈಗೊಳ್ಳುತ್ತದೆ.

ಇದನ್ನೂ ಓದಿ: ITR Filing Deadline: ಜುಲೈ 31ರೊಳಗೆ ಐಟಿ ರಿಟರ್ನ್ಸ್ ಸಲ್ಲಿಸದಿದ್ದರೆ ಏನಾಗುತ್ತೆ?

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಇನ್ನು 10 ದಿನದೊಳಗೆ ಟೊಮೆಟೋ ಬೆಲೆ ಸಹಜ ಮಟ್ಟಕ್ಕೆ ಮರಳಬಹುದು ಎನ್ನುವ ವಿಶ್ವಾಸವನ್ನು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ. ‘ಕಳೆದ ವಾರಕ್ಕೆ ಹೋಲಿಸಿದರೆ ಟೊಮೆಟೋ ಬೆಲೆ ಕ್ರಮೇಣವಾಗಿ ಕಡಿಮೆ ಆಗುತ್ತಿದೆ. ಏಳರಿಂದ ಹತ್ತು ದಿನದೊಳಗೆ ಬೆಲೆ ಸಹಜ ಮಟ್ಟಕ್ಕೆ ಬರಬಹುದು ಎಂದು ಭಾವಿಸಿದ್ದೇನೆ. ಅಲ್ಲಿಯವರೆಗೆ ಈ ಕಾರ್ಯಕ್ರಮ ಮುಂದುವರಿಯುತ್ತದೆ,’ ಎಂದು ಉದ್ಘಾಟನಾ ಸಮಾರಂಭದಲ್ಲಿ ಜೋಷಿ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ