ಬೆಳೆ ತ್ಯಾಜ್ಯ ನಿರ್ವಹಣೆಗೆ ಸರ್ಕಾರದಿಂದ 3,623 ಕೋಟಿ ರೂ ವೆಚ್ಚ; ಪಂಜಾಬ್, ಹರ್ಯಾಣ ರಾಜ್ಯಕ್ಕೆ ಹೆಚ್ಚಿನ ವ್ಯಯ

Centre spends over Rs 3,623 crore for crop residue management: 2018ರಿಂದ ಈಚೆಗೆ ರೈತರ ಬೆಳೆ ತ್ಯಾಜ್ಯಗಳ ನಿರ್ವಹಣೆಗೆ ಕೇಂದ್ರ ಸರ್ಕಾರ ನಾಲ್ಕು ರಾಜ್ಯಗಳಿಗೆ 3,000 ಕೋಟಿ ರೂಗೂ ಅಧಿಕ ವೆಚ್ಚ ಮಾಡಿದೆ. ಕೃಷಿ ತ್ಯಾಜ್ಯಗಳ ಸುಡುವಿಕೆಯಿಂದ ವಾಯು ಮಾಲಿನ್ಯ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಪಂಜಾಬ್, ಹರ್ಯಾಣ, ದೆಹಲಿ ಎನ್​ಸಿಆರ್ ಮತ್ತು ಉತ್ತರಪ್ರದೇಶ ರಾಜ್ಯಗಳಲ್ಲಿ ತ್ಯಾಜ್ಯ ನಿರ್ವಣೆಗೆ ಸರ್ಕಾರ ವೆಚ್ಚ ಮಾಡಿದೆ.

ಬೆಳೆ ತ್ಯಾಜ್ಯ ನಿರ್ವಹಣೆಗೆ ಸರ್ಕಾರದಿಂದ 3,623 ಕೋಟಿ ರೂ ವೆಚ್ಚ; ಪಂಜಾಬ್, ಹರ್ಯಾಣ ರಾಜ್ಯಕ್ಕೆ ಹೆಚ್ಚಿನ ವ್ಯಯ
ಬೆಳೆ ತ್ಯಾಜ್ಯ ನಿರ್ವಹಣೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 01, 2024 | 2:44 PM

ನವದೆಹಲಿ, ಡಿಸೆಂಬರ್ 1: ರಾಷ್ಟ್ರ ರಾಜಧಾನಿ ನಗರಿಯನ್ನು ಹೈರಾಣಗೊಳಿಸುತ್ತಿರುವ ವಾಯುಮಾಲಿನ್ಯಕ್ಕೆ ಸ್ಟಬಲ್ ಬರ್ನಿಂಗ್ ಅಥವಾ ಕೃಷಿ ತ್ಯಾಜ್ಯಗಳ ಸುಡುವಿಕೆ ಪ್ರಮುಖ ಕಾರಣಗಳಲ್ಲಿ ಒಂದೆನಿಸಿದೆ. ಸುತ್ತಮುತ್ತಲಿನ ರಾಜ್ಯಗಳಲ್ಲಿ ಈ ಕೃಷಿ ತ್ಯಾಜ್ಯಗಳ ನಿರ್ವಹಣೆಗೆಂದು ಕೇಂದ್ರ ಸರ್ಕಾರ ಸಾಕಷ್ಟು ವೆಚ್ಚ ಮಾಡುತ್ತಿದೆ. ಕಳೆದ ವಾರ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಲೋಕಸಭೆಗೆ ನೀಡಿದ ಮಾಹಿತಿ ಪ್ರಕಾರ, ದೆಹಲಿ, ಪಂಜಾಬ್, ಹರ್ಯಾಣ ಮತ್ತು ಉತ್ತರಪ್ರದೇಶದಲ್ಲಿ ಬೆಳೆ ತ್ಯಾಜ್ಯ ನಿರ್ವಹಣೆಗೆ 2018ರಿಂದೀಚೆ ಕೇಂದ್ರ ಸರ್ಕಾರ ಮಾಡಿದ ವೆಚ್ಚ 3,623.45 ಕೋಟಿ ರೂ ಆಗಿದೆ. ಇದರಲ್ಲಿ ಪಂಜಾಬ್ ರಾಜ್ಯವೊಂದಕ್ಕೇ 1,681.45 ಕೋಟಿ ರೂ ವಿನಿಯೋಗಿಸಲಾಗಿರುವುದು ತಿಳಿದುಬಂದಿದೆ.

ಹರ್ಯಾಣ ರಾಜ್ಯಕ್ಕೆ 1,081.71 ಕೋಟಿ ರೂ, ಉತ್ತರಪ್ರದೇಶಕ್ಕೆ 763.67 ಕೋಟಿ ರೂ ವೆಚ್ಚ ಮಾಡಲಾಗಿದೆ. ದೆಹಲಿಗೆ 6.05 ಕೋಟಿ ರೂ ಸಿಕ್ಕಿದೆ. ಕೃಷಿ ಸಂಶೋಧನಾ ಸಂಸ್ಥೆಯಾದ ಐಸಿಎಆರ್​ಗೆ ಈ ಐದಾರು ವರ್ಷದಲ್ಲಿ 83.35 ಕೋಟಿ ರೂ ಧನಸಹಾಯವನ್ನು ಈ ಕೃಷಿ ತ್ಯಾಜ್ಯ ನಿರ್ವಹಣೆಯ ಸಂಶೋಧನೆಗೆಂದು ನೀಡಲಾಗಿದೆ.

ಇದನ್ನೂ ಓದಿ: ಒಂದು ತಿಂಗಳ ವಿಶೇಷ ಅಭಿಯಾನದಲ್ಲಿ ಒಂದು ಕೋಟಿ ಪಿಂಚಣಿದಾರರಿಂದ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸೃಷ್ಟಿ: ಸರ್ಕಾರದಿಂದ ಮಾಹಿತಿ

ಕೃಷಿ ತ್ಯಾಜ್ಯ ಸುಡುವಿಕೆಯನ್ನು ನಿಯಂತ್ರಿಸಲು ಮತ್ತು ಸುಸ್ಥಿರ ವಿಧಾನಗಳನ್ನು ಅನುಸರಿಸುವುದನ್ನು ಉತ್ತೇಜಿಸಲು ಕಸ್ಟಮ್ ಹೈರಿಂಗ್ ಸೆಂಟರ್​ಗಳನ್ನು ಸ್ಥಾಪಿಸಲು ವೆಚ್ಚ ಮಾಡಲಾಗಿದೆ. ಬೆಳೆ ತ್ಯಾಜ್ಯ ನಿರ್ವಹಣೆಯ ಯಂತ್ರೋಪಕಗಳಿಗೆ ಸಬ್ಸಿಡಿ ಕೊಟ್ಟಿರುವುದೂ ಈ ವೆಚ್ಚದಲ್ಲಿ ಸೇರಿದೆ.

ಕೀರ್ತಿವರ್ಧನ್ ಸಿಂಗ್ ನೀಡಿರುವ ಮಾಹಿತಿ ಪ್ರಕಾರ, ಮೂರು ಲಕ್ಷ ಯಂತ್ರಗಳನ್ನು ವಿತರಿಸಲಾಗಿದೆ. ಇದರಲ್ಲಿ, ಬತ್ತದ ಹುಲ್ಲನ್ನು ಸಂಗ್ರಹಿಸುವ 4,500 ಬೇಲರ್ ಮತ್ತು ರೇಕ್ ಮೆಷೀನ್​ಗಳೂ ಇವೆ.

ಐಸಿಎಆರ್ ಮಾತ್ರವಲ್ಲದೆ, ಮತ್ತೊಂದು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಾದ ಐಎಆರ್​ಐ, ಇಸ್ರೋ ಮೊದಲಾದ ಸಂಸ್ಥೆಗಳ ನೆರವಿನಿಂದ ಕೇಂದ್ರ ಸರ್ಕಾರ 2018ರಿಂದ ಬೆಳೆ ತ್ಯಾಜ್ಯ ಸುಡುವಿಕೆಯ ಸಮಸ್ಯೆಗೆ ಪರಿಹಾರ ಹುಡುಕಲು ಸಮಗ್ರ ಕ್ರಿಯಾ ಯೋಜನೆ ಹಮ್ಮಿಕೊಂಡಿದೆ. ಪಂಜಾಬ್, ಹರ್ಯಾಣ, ಉತ್ತರಪ್ರದೇಶ, ರಾಜಸ್ಥಾನ ಮತ್ತು ದೆಹಲಿ ಎನ್​ಸಿಟಿ ಮೊದಲಾದ ರಾಜ್ಯಗಳ ಸಂಬಂಧಿತ ಪ್ರಾಧಿಕಾರಗಳನ್ನು ಈ ಕ್ರಿಯಾ ಯೋಜನೆಯಲ್ಲಿ ಒಳಗೊಳ್ಳಲಾಗಿದೆ.

ಇದನ್ನೂ ಓದಿ: ಪೇಟೆಂಟ್, ಟ್ರೇಡ್​ಮಾರ್ಕ್, ಇಂಡಸ್ಟ್ರಿಯಲ್ ಡಿಸೈನ್​ನಲ್ಲಿ ಗಮನಾರ್ಹ ಬೆಳವಣಿಗೆ ಸಾಧಿಸಿರುವ ಭಾರತ

ಕಡಿಮೆ ಅವಧಿಯಲ್ಲಿ ಹೆಚ್ಚು ಫಸಲು ಕೊಡುವ ಭತ್ತದ ತಳಿಗಳನ್ನು ಈ ಸಂದರ್ಭದಲ್ಲಿ ರೈತರಿಗೆ ನೀಡಲಾಗಿದೆ. ಭತ್ತದ ಹುಲ್ಲುಗಳನ್ನು ಸರಿಯಾಗಿ ನಿರ್ವಹಿಸಲು ಸಿಆರ್​ಎಂ ಯಂತ್ರಗಳನ್ನು ಒದಗಿಸಲಾಗಿದೆ. ಕೃಷಿ ಸಂಶೋಧನಾ ಸಂಸ್ಥೆಯು ಜೈವಿಕ ಡೀಕಂಪೋಸರ್​ಗಳನ್ನು ಅಭಿವೃದ್ಧಿಪಡಿಸಿದ್ದು, ಇವುಗಳಿಂದ ರೈತರ ಜಮೀನಿನಲ್ಲಿ ಭತ್ತದ ಹುಲ್ಲುಗಳನ್ನು ನೈಸರ್ಗಿಕವಾಗಿ ಡೀಕಂಪೋಸ್ ಮಾಡಿ, ಅದರಿಂದ ಬಹಳ ಉತ್ಕೃಷ್ಟವಾದ ಗೊಬ್ಬರ ತಯಾರಿಸುವ ಅವಕಾಶ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!