ಬೆಟ್ಟಿಂಗ್ ಜಾಹೀರಾತು ನೇರವಾಗಿಯಾಗಲೀ, ಪರೋಕ್ಷವಾಗಿಯಾಗಲೀ ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರದಿಂದ ಸೂಚನೆ

No Ads of Betting and Gambling: ಬೆಟ್ಟಿಂಗ್ ಅಥವಾ ಗ್ಯಾಂಬ್ಲಿಂಗ್​ಗಳ ಜಾಹೀರಾತು ಪ್ರಸಾರ ಮಾಡುವುದು ಅಕ್ರಮ ಚಟುವಟಿಕೆಗೆ ಸೇರಿವೆ. ಯಾವ ಮಾಧ್ಯಮವಾದರೂ ಇವುಗಳ ಜಾಹೀರಾತು ಪ್ರಸಾರ ಮಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವಾಲಯ ಎಚ್ಚರಿಕೆ ಸಂದೇಶ ರವಾನಿಸಿದೆ.

ಬೆಟ್ಟಿಂಗ್ ಜಾಹೀರಾತು ನೇರವಾಗಿಯಾಗಲೀ, ಪರೋಕ್ಷವಾಗಿಯಾಗಲೀ ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರದಿಂದ ಸೂಚನೆ
ಬೆಟ್ಟಿಂಗ್ ಜಾಹೀರಾತು
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 25, 2023 | 3:52 PM

ನವದೆಹಲಿ, ಆಗಸ್ಟ್ 25: ಬೆಟ್ಟಿಂಗ್ ಅಥವಾ ಜೂಜನ್ನು ಜಾಹೀರಾತು ಅಥವಾ ಇನ್ಯಾವುದೇ ರೂಪದಲ್ಲಾದರೂ ತೋರಿಸಬಾರದು ಎಂದು ಎಲ್ಲಾ ಮಾಧ್ಯಮಗಳಿಗೂ ಕೇಂದ್ರದಿಂದ ಸೂಚನೆ ರವಾನೆಯಾಗಿದೆ. ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವಾಲಯದ (Central Information and Broadcasting Ministry) ಸೂಚನೆಯು ಮುದ್ರಣ, ಟಿವಿ ಮಾಧ್ಯಮಗಳಿಂದ ಹಿಡಿದು ಸೋಷಿಯಲ್ ಮೀಡಿಯಾ ಸಂಸ್ಥೆಗಳು, ಜಾಹೀರಾತು ಸಂಸ್ಥೆಗಳವರೆಗೆ ಎಲ್ಲಾ ಮಾಧ್ಯಮಗಳಿಗೂ ಅನ್ವಯ ಆಗುತ್ತದೆ. ಯಾರಾದರೂ ಈ ಸಲಹೆಯನ್ನು ಧಿಕ್ಕರಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಐಬಿ ಮಿನಿಸ್ಟ್ರಿ ಎಚ್ಚರಿಕೆ ನೀಡಿದೆ.

ಬೆಟ್ಟಿಂಗ್ ಮೊದಲಾದ ಜೂಜುಗಳಿಗೆ ಜಾಹೀರಾತು ನೀಡಲು ಕಪ್ಪುಹಣ ಬಳಕೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಿರುವ ಮಾಹಿತಿ ಮತ್ತು ಪ್ರಸರಣ ಸಚಿವಾಲಯ, ಗ್ಯಾಂಬ್ಲಿಂಗ್ ಆ್ಯಪ್​ಗಳ ಬಳಕೆದಾರರಿಂದ ಸಂಗ್ರಹಿಸಲಾದ ಹಣವನ್ನು ಏಜೆಂಟ್​ಗಳು ಭಾರತದ ಹೊರಗೆ ಸಾಗಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿರುವ ವಿಚಾರವನ್ನು ಪ್ರಸ್ತಾಪಿಸಿದೆ. ಹಣದ ಅಕ್ರಮ ವರ್ಗಾವಣೆ ಜೊತೆಗೆ, ಗ್ಯಾಂಬ್ಲಿಂಗ್ ಆಟದಲ್ಲಿ ತೊಡಗುವ ಯುವಕರು ಮತ್ತು ಮಕ್ಕಳ ಹಣಕಾಸು ಮತ್ತು ಸಾಮಾಜಿಕ ಪರಿಸ್ಥಿತಿ ಹದಗೆಡುತ್ತದೆ ಎಂದು ಅದು ಎಚ್ಚರಿಸಿದೆ.

ಇದನ್ನೂ ಓದಿ: ಬಿಲ್ ಗೇಟ್ಸ್ ಬೆಂಗಳೂರಿಗೆ ಬಂದಾಗ ಎಳನೀರು ಖರೀದಿಸಿದಾಗ, ಅಂಗಡಿಯವನ ರಿಯಾಕ್ಷನ್ ಹೇಗಿತ್ತು? ವೈರಲ್ ಸುದ್ದಿ

ಕ್ರಿಕೆಟ್ ಟೂರ್ನಿ ಸೇರಿದಂತೆ ಪ್ರಮುಖ ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್​ಗಳ ಜಾಹೀರಾತು ನೇರವಾಗಿ ಅಥವಾ ಪರೋಕ್ಷವಾಗಿ ಪ್ರಸಾರವಾಗುತ್ತಿದೆ. ಕ್ರಿಕೆಟ್​ನಂಥ ಪ್ರಮುಖ ಸ್ಪೋರ್ಟ್ ಇವೆಂಟ್​​ಗಳಲ್ಲಿ ಈ ರೀತಿಯ ಬೆಟ್ಟಿಂಗ್ ಜಾಹೀರಾತು ದಿಢೀರ್ ಹೆಚ್ಚಾಗುವ ಪ್ರವೃತ್ತಿ ಕಂಡುಬಂದಿದೆ ಎಂದು ಹೇಳಿರುವ ಕೇಂದ್ರದ ಈ ಸಚಿವಾಲಯವು, ಆನ್​ಲೈನ್ ಜಾಹೀರಾತು ಮಧ್ಯವರ್ತಿಗಳು ಭಾರತೀಯ ವೀಕ್ಷಕರಿಗೆ ಇಂಥ ಜಾಹೀರಾತುಗಳನ್ನು ತಲುಪಿಸಬಾರದು ಎಂದು ತಿಳಿಸಿದೆ.

ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ಪ್ಲಾಟ್​ಫಾರ್ಮ್​ಗಳನ್ನು ಪ್ರಸಾರ ಮಾಡುವುದು ಅಥವಾ ಮುದ್ರಿಸುವುದು ಅಕ್ರಮ ಚಟುವಟಿಕೆ ಎಂದು ಐಬಿ ಸಚಿವಾಲಯ ಕಳೆದ ವರ್ಷ ಹಲವು ಬಾರಿ ಅಡ್ವೈಸರಿಗಳನ್ನು ಕೊಟ್ಟಿತ್ತು. ಹಾಗೂ ಯಾರಾದರೂ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡಿದರೆ ಅದು 2019ರ ಗ್ರಾಹಕ ರಕ್ಷಣಾ ಕಾಯ್ದೆ, 1978ರ ಪ್ರೆಸ್ ಕೌನ್ಸಿಲ್ ಕಾಯ್ದೆ ಮೊದಲಾದ ಹಲವು ಕಾನೂನು ಕಟ್ಟಳೆಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಸಚಿವಾಲಯವು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್