Petrol Diesel Price on December 15: ಭಾರತದ ಪ್ರಮುಖ ನಗರಗಳಲ್ಲಿ ಡಿ.15ರಂದು ಇಂಧನ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 15, ಭಾನುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 74.9 ಡಾಲರ್​ ಆಗಿದ್ದರೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.29 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on December 15: ಭಾರತದ ಪ್ರಮುಖ ನಗರಗಳಲ್ಲಿ ಡಿ.15ರಂದು ಇಂಧನ ಬೆಲೆ ಸ್ಥಿರ
ಪೆಟ್ರೋಲ್
Image Credit source: The Conversation

Updated on: Dec 15, 2024 | 8:12 AM

ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 74.9 ಡಾಲರ್​ ಆಗಿದ್ದರೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.29 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಇಂದು ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.50 ರೂ. ಇಂದು ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.01 ರೂ. ಇಂದು ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.80 ರೂ. ಇದೆ.

ಇಂದು ನವದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ. ಇಂದು ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ. ಇಂದು ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.82 ರೂ. ಇಂದು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ.
ಡಾರ್ಜಿಲಿಂಗ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಇಂದು ಕಾಲಿಂಪಾಂಗ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 105.89 ರೂ. ಇಂದು ನೈನಿತಾಲ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 92.74 ರೂ. ಇಂದು ಗಾಜಿಯಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.58 ರೂ. ಇದೆ.

ಇಂದು ಅಗರ್ತಲಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.81 ರೂ. ಇಂದು ವಾರಂಗಲ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 107.27 ರೂ. ಇಂದು ಗ್ಯಾಂಗ್‌ಟಾಕ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.75 ರೂ. ಇಂದು ಜೈಸಲ್ಮೇರ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 106.21 ರೂ. ಇಂದು ಜಲಂಧರ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.98 ರೂ. ಇಂದು ಜಬಲ್ಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.59 ರೂ. ಇಂದು ಪುದುಚೇರಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.32 ರೂ. ಇದೆ.  ಇಂದು ವಯನಾಡಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 107.04 ರೂ. ಇದೆ. ಬೆಂಗಳೂರು ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಮತ್ತಷ್ಟು ಓದಿ: ಅಸ್ಸಾಂ, ಗೋವಾದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು  ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು.

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು, ಕರೆನ್ಸಿ ವಿನಿಮಯ ದರಗಳು (ಡಾಲರ್-ರೂಪಾಯಿ), ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆಗಳ ಆಧಾರದ ಮೇಲೆ ತೈಲ ಬೆಲೆಗಳನ್ನು ನಿರ್ಧರಿಸಲಾಗುತ್ತದೆ. ಆದ್ದರಿಂದ ಪ್ರತಿ ನಗರದಲ್ಲಿ ಬೆಲೆಗಳು ವಿಭಿನ್ನವಾಗಿರಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:06 am, Sun, 15 December 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us