Petrol Diesel Price on December 19: ಭಾರತದ ಪ್ರಮುಖ ನಗರಗಳಲ್ಲಿ ಸ್ಥಿರತೆ ಕಾಯ್ದುಕೊಂಡ ಇಂಧನ ದರ

|

Updated on: Dec 19, 2024 | 7:13 AM

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 19, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರದಲ್ಲಿ ಹೆಚ್ಚಿನ ಬದಲಾವಣೆಗಳು ಕಂಡುಬಂದಿಲ್ಲ. ಲೋಕಸಭೆ ಚುನಾವಣೆಗೂ ಮುನ್ನ ತೈಲ ಬೆಲೆಯನ್ನು ಲೀಟರ್‌ಗೆ 2 ರೂ. ಹೆಚ್ಚಿಸಲಾಗಿತ್ತು, ಅಂದಿನಿಂದ ಇಂದಿನವರೆಗೆ ತೈಲ ಬೆಲೆಯಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 73.19 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 70.17 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on December 19: ಭಾರತದ ಪ್ರಮುಖ ನಗರಗಳಲ್ಲಿ ಸ್ಥಿರತೆ ಕಾಯ್ದುಕೊಂಡ ಇಂಧನ ದರ
Petrol 2024 12 19t071152.445
Image Credit source: Isohitech Lubrication
Follow us on

ಲೋಕಸಭೆ ಚುನಾವಣೆಗೂ ಮುನ್ನ ತೈಲ ಬೆಲೆಯನ್ನು ಲೀಟರ್‌ಗೆ 2 ರೂ. ಹೆಚ್ಚಿಸಲಾಗಿತ್ತು, ಅಂದಿನಿಂದ ಇಂದಿನವರೆಗೆ ತೈಲ ಬೆಲೆಯಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 73.19 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 70.17 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಪ್ರಮುಖ ನಗರಗಳಲ್ಲಿ ಇಂಧನ ದರ ಹೇಗಿದೆ?

ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ.
ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ.
ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.76 ರೂ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.
ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ 94.83 ರೂ. ಮತ್ತು ಡೀಸೆಲ್ ಲೀಟರ್‌ಗೆ 87.96 ರೂ .
ಗುರುಗ್ರಾಮ್: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ. ಇದೆ.

ಮತ್ತಷ್ಟು ಓದಿ: ಜಾರ್ಖಂಡ್​, ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.
ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ
ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.
ಜೈಪುರ: ಪೆಟ್ರೋಲ್ ಲೀಟರ್‌ಗೆ 104.88 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.
ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ತೈಲ ಕಂಪನಿಗಳ ವೆಬ್‌ಸೈಟ್‌ಗಳು ಮತ್ತು ಅಪ್ಲಿಕೇಶನ್‌ಗಳಿಂದ ಜನರು ಇತ್ತೀಚಿನ ದರಗಳನ್ನು ಪರಿಶೀಲಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:12 am, Thu, 19 December 24